ಸಂಜು-ಗೀತಾ ಪ್ರೇಮಪುರಾಣ
Team Udayavani, Oct 26, 2022, 4:50 PM IST
“ಸಂಜು ಮತ್ತು ಗೀತಾ’ – ಹೀಗೊಂದು ಸಿನಿಮಾ ಇತ್ತೀಚೆಗೆ ಸೆಟ್ಟೇರಿದೆ. ಆರ್.ಕೆ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರ ಲವ್ಸ್ಟೋರಿಯನ್ನು ಒಳಗೊಂಡಿದೆ.
ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಆರ್.ಕೆ, “ಇದೊಂದು ನವೀರಾದ ಪ್ರೇಮಕಥೆ. ಕುಟುಂಬ ಸಮೇತ ನೋಡಬಹುದಾದ ಉತ್ತಮ ಚಿತ್ರ. ಈ ಹಿಂದೆ ನನ್ನ ನಿರ್ದೇಶನದ “ಕಾಣೆಯಾಗಿದ್ದಾಳೆ’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ವಿನಯ್ ಕಾರ್ತಿಕ್ ಈ ಚಿತ್ರದಲ್ಲೂ ನಾಯಕನಾಗಿ ಅಭಿನಯಿಸಿದ್ದಾರೆ. ಮಂಗಳ ಗೌರಿ ಧಾರಾವಾಹಿಯಲ್ಲಿ ಅಭಿನಯಿಸಿದ್ದ ಸನ್ಮಿತ ಈ ಚಿತ್ರದ ನಾಯಕಿ. ರಾಘವೇಂದ್ರ ರಾಜಕುಮಾರ್ ಈ ಚಿತ್ರದಲ್ಲಿ ನಾಯಕಿಯ ತಂದೆ ಪಾತ್ರದಲ್ಲಿ, ಹಿರಿಯ ನಟಿ ಭವ್ಯ ನಾಯಕನ ತಾಯಿಯಾಗಿ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಾಹಿತಿ ದೊಡ್ಡರಂಗೇಗೌಡ, ಸ್ವಾತಿ ಸೇರಿದಂತೆ ಅನೇಕ ಕಲಾವಿದರು ನಮ್ಮ ಚಿತ್ರದ ತಾರಾಬಳಗದಲ್ಲಿದ್ದಾರೆ. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ’ ಎಂದರು.
“ನನಗೆ ಆರ್.ಕೆ ಅವರ ಜೊತೆ ಎರಡನೇ ಚಿತ್ರ. ರಾಘವೇಂದ್ರ ರಾಜಕುಮಾರ್, ಭವ್ಯ ಅವರಂತಹ ಹಿರಿಯ ಕಲಾವಿದರೊಡನೆ ಅಭಿನಯಿಸುತ್ತಿರು ವುದಕ್ಕೆ ಖುಷಿಯಾಗುತ್ತಿದೆ’ ಎಂದು ನಾಯಕ ವಿನಯ್ ಕಾರ್ತಿಕ್ ಹೇಳಿದರು.
ನಾಯಕಿ ಸನ್ಮಿತಾ ಕೂಡಾ ಮಾತನಾಡಿ ದರು. ನಿರ್ಮಾಪಕ ಸಂಜಯ್ ಮಾಗನೂರು ಹಾಗೂ ಸಂಗೀತ ನಿರ್ದೇಶಕ ಕೌಶಿಕ್ ಚಿತ್ರದ ಬಗ್ಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.