Sanju weds geetha 2: ನಾಗಶೇಖರ್ ಹೊಸ ಚಿತ್ರಕ್ಕೆ ಇಂದು ಮುಹೂರ್ತ
Team Udayavani, Aug 15, 2023, 12:36 PM IST
ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ನಾಯಕ-ನಾಯಕಿಯಾಗಿರುವ “ಸಂಜು ವೆಡ್ಸ್ ಗೀತಾ-2′ ಚಿತ್ರದ ಮುಹೂರ್ತ ಇಂದು ನಡೆಯಲಿದೆ.
ನಾಗಶೇಖರ್ ಈ ಚಿತ್ರದ ನಿರ್ದೇಶಕರು. ಸೆನ್ಸಿಬಲ್ ನಿರ್ದೇಶಕ ಎನಿಸಿಕೊಂಡಿದ್ದ ನಾಗಶೇಖರ್ ಅವರಿಗೂ “ಸಂಜು ವೆಡ್ಸ್ ಗೀತಾ’ ಚಿತ್ರ ದೊಡ್ಡ ಬ್ರೇಕ್ ನೀಡಿತ್ತು. ಆದರೆ, ನಂತರದ ದಿನಗಳಲ್ಲಿ ನಾಗಶೇಖರ್ ಬೇರೆ ಬೇರೆ ಸಿನಿಮಾಗಳಲ್ಲಿ ಬಿಝಿಯಾಗಿದ್ದರು. ಸದ್ಯ ಗಾಂಧಿನಗರದಿಂದ ದೂರ ಉಳಿದು ಸ್ಕ್ರಿಪ್ಟ್ ಕೆಲಸ ಮುಗಿಸಿರುವ ನಾಗಶೇಖರ್ ಈ ಬಾರಿ ಪಕ್ಕಾ ಪೂರ್ವತಯಾರಿಯೊಂದಿಗೆ ಎಂಟ್ರಿಕೊಡುತ್ತಿದ್ದಾರಂತೆ. ಮಾತಿಗಿಂತ ಕೆಲಸ ಮಾತನಾಡಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರಂತೆ ನಾಗಶೇಖರ್.
ಇನ್ನು, ತಮ್ಮ ಆರಂಭದ ಯಶಸ್ಸಿನಲ್ಲಿ ಸಾಥ್ ನೀಡಿದ್ದ ಹಳೆಯ ತಂಡವನ್ನೇ ಈ ಬಾರಿ ಮತ್ತೆ ಒಟ್ಟಿಗೆ ಸೇರಿಸಿ ಈ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಫೋಟೋಶೂಟ್ ನಡೆದಿದ್ದು, ಸಖತ್ ರೊಮ್ಯಾಂಟಿಕ್ ಆಗಿ ಚಿತ್ರೀಕರಿಸಲಾಗಿದೆ.
“ಸಂಜು ಮತ್ತು ಗೀತಾ’ ಕನ್ನಡ ಚಿತ್ರರಂಗದ ಹಿಟ್ ಸಿನಿಮಾಗಳ ಸಾಲಿನಲ್ಲಿ ಸಿಗುವ ಚಿತ್ರ. ನಾಗಶೇಖರ್ ನಿರ್ದೇಶನದ ಈ ಚಿತ್ರದಲ್ಲಿ ರಮ್ಯಾ ಹಾಗೂ ಶ್ರೀನಗರ ಕಿಟ್ಟಿ ನಾಯಕ-ನಾಯಕಿಯಾಗಿ ನಟಿಸಿದ್ದರು. ಚಿತ್ರದ ಹಾಡುಗಳು ಕೂಡಾ ದೊಡ್ಡಮಟ್ಟದಲ್ಲಿ ಹಿಟ್ ಆಗುವ ಮೂಲಕ ಚಿತ್ರತಂಡ ಖುಷಿಯಾಗಿತ್ತು. ಈಗ ದೊಡ್ಡ ಗ್ಯಾಪ್‌ನ ಬಳಿಕ ಈ ಚಿತ್ರದ ಮುಂದುವರೆದ ಭಾಗ ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.