![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 23, 2023, 11:54 AM IST
ಮೂರು ತಿಂಗಳ ಹಿಂದೆ ಅದ್ಧೂರಿಯಾಗಿ ಮುಹೂರ್ತ ಆಚರಿಕೊಂಡಿದ್ದ ನಾಗಶೇಖರ್ ನಿರ್ದೇಶನದ “ಸಂಜು ವೆಡ್ಸ್ ಗೀತಾ 2′ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಕನಕಪುರ ರಸ್ತೆಯ ಫಾರಂ ಹೌಸ್‌ನಲ್ಲಿ ನಡೆಯಿತು. ಅಲ್ಲಿ ತಮ್ಮ 10ನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಪ್ರಯುಕ್ತ ನಾಯಕ, ನಾಯಕಿಗೆ ರೋಲ್ಸ್ ರಾಯ್ ಕಾರ್ ಗಿಫ್ಟ್ ಕೊಡುವ ದೃಶ್ಯವನ್ನು ಛಾಯಾಗ್ರಾಹಕ ಸತ್ಯ ಹೆಗಡೆ ಸೆರೆ ಹಿಡಿಯುತ್ತಿದ್ದರು.
“ಸಂಜು ವೆಡ್ಸ್ ಗೀತಾ’ ಚಿತ್ರಕ್ಕೆ ಸಿಕ್ಕ ಯಶಸ್ಸು ಭಾಗ ಎರಡು ಆಗಲು ಕಾರಣ. ಮೊದಲ ಹಂತದಲ್ಲಿ ಈಗಾಗಲೇ 5-6 ದಿನ ಶೂಟಿಂಗ್ ನಡೆದಿದೆ. ಅಚಾನಕ್ಕಾಗಿ ಒಂದಷ್ಟು ಬದಲಾವಣೆಗಳಾದವು. ರಂಗಾಯಣ ರಘು, ಸಾಧು ಕೋಕಿಲ ಸುಂದರವಾದ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನನ್ನ ಈ ಕನಸಿಗೆ ಎಂಜಿನಿಯರಿಂಗ್ ಕ್ಲಾಸ್ ಮೆಟ್ ಕುಮಾರ್ ಜೊತೆಗಿದ್ದಾರೆ. ನನ್ನ ಸಿನಿಮಾದಲ್ಲಿ ಹಾಡುಗಳಿಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇನೆ. ಶ್ರೀಧರ್ ಸಂಭ್ರಮ್ ಒಳ್ಳೆಯ ಟ್ಯೂನ್ ಕೊಟ್ಟಿದ್ದಾರೆ. ಲೀಡ್ ಪಾತ್ರಗಳಲ್ಲಿ ರಚಿತಾ ರಾಮ್, ಶ್ರೀನಗರ ಕಿಟ್ಟಿ ಸಾಥ್ ನೀಡುತ್ತಿದ್ದಾರೆ. ಡಿ. 9ರಿಂದ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ 12 ದಿನ ಮುಗಿಸಿ, ನಂತರ ಮುಂಬಯಿ, ಹೈದರಾಬಾದ್ ಶೂಟಿಂಗ್ ಮಾಡಿ, 2024ರ ಏಪ್ರಿಲ್ 1ರಂದು ಚಿತ್ರವನ್ನು ರಿಲೀಸ್ ಮಾಡುವ ಪ್ಲ್ರಾನ್ ಇದೆ’ ಎಂದು ವಿವರ ನೀಡುತ್ತಾರೆ ನಾಗಶೇಖರ್.
ನಾಯಕ ಶ್ರೀನಗರ ಕಿಟ್ಟಿ ಮಾತನಾಡಿ, “ನಾವೆಲ್ಲ ಸೇರಿ ಅಷ್ಟೇ ಪ್ರೀತಿಯಿಂದ ಈ ಸಿನಿಮಾ ಮಾಡ್ತಾ ಇದ್ದೇವೆ. ಕಥೆಯೂ ಮುದ್ದಾಗಿ ಬಂದಿದೆ. ನಿರ್ಮಾಪಕರ ಹುಟ್ಟುಹಬ್ಬದಂದು ಟ್ರೇಲರ್ ಬಿಡುಗಡೆ ಮಾಡುತ್ತೇವೆ’ ಎಂದರು.
ನಾಯಕಿ ರಚಿತಾ ರಾಮ್ ಮಾತನಾಡಿ, “ನನ್ನ ಪಾತ್ರದ ಹೆಸರು ಗೀತಾ. ತುಂಬಾ ಶೇಡ್ಸ್ ಇರುವಂಥ ಪಾತ್ರ. ಕಥೆ ಕೇಳಿದಾಗ ತುಂಬಾ ಇಷ್ಟ ಆಯ್ತು. ನಾಲ್ಕು ದಿನದಿಂದ ಶೂಟ್ ನಲ್ಲಿ ಭಾಗಿಯಾಗಿದ್ದು ಒಳ್ಳೆ ಅನುಭವವಿದು. ಕಿಟ್ಟಿ ಅವರ ಜೊತೆ ಒಂದೆರಡು ದೃಶ್ಯ ಮಾಡಿದ್ದೇನೆ’ ಎಂದರು.
ಚಿತ್ರದಲ್ಲಿ ನಟಿಸುತ್ತಿರುವ ರಂಗಾಯಣ ರಘು, ಸಾಧು ಕೋಕಿಲ ಸಿನಿಮಾ ಬಗ್ಗೆ ಮಾತನಾಡಿದರು. ನಿರ್ಮಾಪಕ ಚಲವಾದಿ ಕುಮಾರ್ ಮಾತನಾಡಿ, “ನಾಗಶೇಖರ್, ನಾನು ಇಂಜಿನಿಯರಿಂಗ್ ಕ್ಲಾಸ್ ಮೆಟ್ಸ್. ಸ್ಕ್ರಿಪ್ಟ್ ನಲ್ಲೂ ನಾನು ಜೊತೆ ಕುಳಿತಿದ್ದೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿಬರುತ್ತಿದೆ’ ಎಂದರು
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.