ಚಿತ್ರೀಕರಣ ಮುಗಿಸಿದ ‘ಸಪ್ತಸಾಗರದಾಚೆ ಎಲ್ಲೋ’
Team Udayavani, Mar 23, 2023, 3:16 PM IST
ರಕ್ಷಿತ್ ಶೆಟ್ಟಿ ನಟನೆ, ನಿರ್ಮಾಣದ “ಸಪ್ತಸಾಗರದಾಚೆ ಎಲ್ಲೋ’ ಚಿತ್ರ ಚಿತ್ರೀಕರಣ ಮುಗಿಸಿ, ಪೋಸ್ಟ್ ಪ್ರೊಡಕ್ಷನ್‌ನಲ್ಲಿ ತೊಡಗಿದೆ. ಬರೋಬ್ಬರಿ 137 ದಿನಗಳ ಚಿತ್ರೀಕರಣ ಮುಗಿಸಿದ್ದು, ಚಿತ್ರತಂಡ ಇತ್ತೀಚೆಗೆ ಕುಂಬಳಕಾಯಿ ಒಡೆದಿದೆ.
“ಸಪ್ತಸಾಗರದಾಚೆ ಎಲ್ಲೋ’ ಚಿತ್ರ ಔಟ್ ಆ್ಯಂಡ್ ಔಟ್ ಲವ್‌ಸ್ಟೋರಿಯಾಗಿದ್ದು, ಈ ಚಿತ್ರದಲ್ಲಿ ರಕ್ಷಿತ್ ಎರಡು ಶೇಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ರಕ್ಷಿತ್ ತಮ್ಮದೇ ಬ್ಯಾನರ್‌ನಲ್ಲಿ ನಿರ್ಮಿಸುತ್ತಿದ್ದು, ಹೇಮಂತ್ ಕುಮಾರ್ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿ.
ಆ ಚಿತ್ರದ ನಂತರ ರಕ್ಷಿತ್ “ರಿಚರ್ಡ್ ಆ್ಯಂಟನಿ’ ಕೈಗೆತ್ತಿಕೊಳ್ಳಲಿದ್ದಾರೆ. ಇದು ಇವರ ಡ್ರೀಮ್ ಪ್ರಾಜೆಕ್ಟ್. ಈ ಚಿತ್ರದ ನಟನೆ, ನಿರ್ದೇಶನ ಎರಡೂ ಜವಾಬ್ದಾರಿ ರಕ್ಷಿತ್ ಅವರದ್ದೇ. ಈಗಾಗಲೇ ಫಸ್ಟ್‌ಲುಕ್ ಟೀಸರ್ ಹಿಟ್‌ಲಿಸ್ಟ್ ಸೇರಿದೆ. ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿದೆ.
ಈ ಚಿತ್ರದ ಬಳಿಕ ರಕ್ಷಿತ್ “ಪುಣ್ಯಕೋಟಿ’ ಚಿತ್ರದ ಕಡೆಗೆ ಗಮನಹರಿಸಲಿದ್ದಾರೆ. ಇದು ರಕ್ಷಿತ್ ಮಹತ್ವಕಾಂಕ್ಷೆಯ ಸಿನಿಮಾ. ಈ ಚಿತ್ರ ಎರಡು ಭಾಗಗಳಲ್ಲಿ ಬರಲಿದೆ. ಇದನ್ನು ಮುಗಿಸಿಕೊಂಡು ರಕ್ಷಿತ್ ಶೆಟ್ಟಿ “ಎಂ2ಎಂ’ (ಮಾರ್ನಿಂಗ್ ಟು ಮೋಕ್ಷ’) ಚಿತ್ರ ಮಾಡಲಿದ್ದಾರೆ. ಈ ಎಲ್ಲಾ ಕಮಿಟ್‌ಮೆಂಟ್‌ಗಳು ಮುಗಿದ “ಕಿರಿಕ್ ಪಾರ್ಟಿ-2′ ಮಾಡಲಿದ್ದಾರೆ. ಈ ಚಿತ್ರ ಮಾಡುವ ಕುರಿತು ರಕ್ಷಿತ್ ಅವರ ಹೊಸ ಪ್ಲ್ರಾನ್ ಕೂಡಾ ಹೊಂದಿದ್ದಾರಂತೆ. ಅದೇನು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.