ರೆಟ್ರೋ ಲುಕ್‌ನಲ್ಲಿ ಸತೀಶ್
ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ
Team Udayavani, Jun 19, 2019, 3:00 AM IST
ಕನ್ನಡ ಚಿತ್ರರಂಗದಲ್ಲಿ ಸಾಮಾನ್ಯವಾಗಿ ನಾಯಕ ನಟರ ಬರ್ತ್‌ಡೇ ಸಂದರ್ಭದಲ್ಲಿ ಅವರ ಹೊಸ ಚಿತ್ರಗಳು ಅನೌನ್ಸ್ ಆಗೋದು, ಮುಂಬರುವ ಚಿತ್ರಗಳ ಪೋಸ್ಟರ್, ಫಸ್ಟ್‌ಲುಕ್, ಟೀಸರ್, ಟ್ರೇಲರ್, ಸಾಂಗ್ಸ್ ಬಿಡುಗಡೆಯಾಗೋದು ವಾಡಿಕೆ. ಈಗ ಯಾಕೆ ಈ ಪೀಠಿಕೆ ಅಂತೀರಾ? ಅದಕ್ಕೂ ಒಂದು ಕಾರಣವಿದೆ.
ಇದೇ ತಿಂಗಳು ನಟ ನೀನಾಸಂ ಸತೀಶ್ ಅವರ ಹುಟ್ಟುಹಬ್ಬವಿದೆ. ಇದೇ ವೇಳೆ ಸತೀಶ್ ಅಭಿನಯಿಸುತ್ತಿರುವ ಮುಂಬರುವ ಚಿತ್ರ “ಬ್ರಹ್ಮಚಾರಿ’ಯ ಟೀಸರ್ ಬಿಡುಗಡೆಯಾಗುತ್ತಿದೆ. ಅದೇ ದಿನ ಸತೀಶ್ ಅಭಿನಯಿಸುತ್ತಿರುವ ಹೊಸಚಿತ್ರವೊಂದು ಕೂಡ ಅದ್ಧೂರಿಯಾಗಿ ಸೆಟ್ಟೇರುತ್ತಿದೆ.
ಅಂದಹಾಗೆ, ಈ ಹಿಂದೆ “ಕಿನಾರೆ’ ಎನ್ನುವ ಸಿನಿಮಾ ಮಾಡಿದ್ದ ದೇವರಾಜ್, ಸತೀಶ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಇನ್ನು ಈ ಚಿತ್ರದ ಕಥೆಯನ್ನು ಕೇಳಿ ಮೆಚ್ಚಿಕೊಂಡಿರುವ ನೀನಾಸಂ ಸತೀಶ್ ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ವಿಭಿನ್ನವಾದ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ಸತೀಶ್ ರೆಟ್ರೋಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದು,
ಇದುವರೆಗೂ ಕಾಣಿಸಿಕೊಂಡಿರದಂತಹ ಗೆಟಪ್‌ನಲ್ಲಿ ಮಿಂಚಲಿದ್ದಾರೆ. ಅಲ್ಲದೆ ಬಿಗ್ ಬಜೆಟ್‌ನಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ ಎನ್ನಲಾಗುತ್ತಿದೆ. ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರದ ಟೈಟಲ್, ಇತರೆ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿ ಚಿತ್ರ ಸೆಟ್ಟೇರಿದ ಮೇಲಷ್ಟೇ ಗೊತ್ತಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.