ಟ್ಯಾಗ್‌ಲೈನ್ ಹೇಳಿ 50 ಸಾವಿರ ಗೆಲ್ಲಿ
ಕಾಣದಂತೆ ಮಾಯವಾದನು ಹೀಗೊಂದು ವಿಭಿನ್ನ ಕಂಟೆಸ್ಟ್
Team Udayavani, Jul 24, 2019, 3:02 AM IST
ಇತ್ತೀಚೆಗಷ್ಟೆ “ಕಾಣದಂತೆ ಮಾಯವಾದನು’ ಚಿತ್ರದ ಟ್ರೇಲರ್ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ವೀಕ್ಷಿಸಿರುವ ನಟ ಪುನೀತ್ ರಾಜಕುಮಾರ್ ಕೂಡ ಚಿತ್ರದ ಬಗ್ಗೆ ಸಾಕಷ್ಟು ಭರವಸೆಯ ಅಮಾತುಗಳನ್ನಾಡಿದ್ದಾರೆ. ಸದ್ಯ ಭರದಿಂದ ಚಿತ್ರದ ಪ್ರಮೋಶನ್ ನಡೆಸುತ್ತಿರುವ “ಕಾಣದಂತೆ ಮಾಯವಾದನು’ ಚಿತ್ರತಂಡ, ಈಗ ಸಿನಿಪ್ರಿಯರನ್ನು ಚಿತ್ರದತ್ತ ಆಕರ್ಷಿಸಲು ಹೊಸದೊಂದು ಕಂಟೆಸ್ಟ್ ಏರ್ಪಡಿಸಿದೆ.
ಅದೇನೆಂದರೆ, ಸದ್ಯ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿರುವ “ಕಾಣದಂತೆ ಮಾಯವಾದನು’ ಚಿತ್ರದ ಟ್ರೇಲರ್ ವೀಕ್ಷಿಸಿ, ಬಳಿಕ ಟ್ರೇಲರ್ ಕೆಳಗಿರುವ ಕಾಮೆಂಟ್ ಬಾಕ್ಸ್‌ನಲ್ಲಿ ಚಿತ್ರಕ್ಕೊಂದು ಟ್ಯಾಗ್‌ಲೈನ್ ಸೂಚಿಸಬೇಕು. ತಮ್ಮ ಚಿತ್ರಕ್ಕೆ ಸೂಕ್ತ ಟ್ಯಾಗ್‌ಲೈನನ್ನು ಊಹಿಸಿ, ಕಾಮೆಂಟ್ಸ್ ಬಾಕ್ಸ್‌ನಲ್ಲಿ ಹಾಕಿದರೆ, ಸರಿಯಾದ ಟ್ಯಾಗ್‌ಲೈನ್‌ಗೆ ಚಿತ್ರತಂಡ ಐವತ್ತು ಸಾವಿರ ರೂಪಾಯಿಗಳ ಬಹುಮಾನವನ್ನು ನೀಡಲಿದೆಯಂತೆ.
ಅಂದಹಾಗೆ, ಈ ಕಾಮೆಂಟ್ ಬಾಕ್ಸ್‌ನಲ್ಲಿ ಯಾರು ಬೇಕಾದರೂ, ಎಷ್ಟು ಬೇಕಾದರೂ, ಟ್ಯಾಗ್ ಲೈನ್ ಬರೆಯಬಹುದು. ಆದರೆ ಚಿತ್ರದ ಕಂಟೆಂಟ್‌ಗೆ ಹತ್ತಿರವಾದ ಹಾಗೂ ಸೆಲೆಕ್ಟ್ ಆದ ಟ್ಯಾಗ್‌ಲೈನ್‌ನ್ನು ಮೊದಲು ಸೂಚಿಸಿದವರಿಗೆ 50 ಸಾವಿರ ರೂಗಳನ್ನು ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ನೀಡಲಾಗುವುದು ಎಂದಿದೆ ಚಿತ್ರತಂಡ.
“ಬ್ಯಾಕ್ ಬೆಂಚರ್ಸ್ ಮೋಷನ್ ಪಿಕ್ಚರ್ಸ್’ ಲಾಂಛನದಲ್ಲಿ ಚಂದ್ರಶೇಖರ್‌ನಾಯ್ಡು, ಸೋಮ್‌ಸಿಂಗ್ ಹಾಗೂ ಪುಷ್ಪ ಸೋಮ್‌ಸಿಂಗ್ ಜಂಟಿಯಾಗಿ ನಿರ್ಮಿಸಿರುವ “ಕಾಣದಂತೆ ಮಾಯವಾದನು’ ಹಾರರ್ ಶೈಲಿಯ ಚಿತ್ರವಾಗಿದ್ದು, ರಾಜ್ ಪತ್ತಿಪಾಟಿ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಈ ಹಿಂದೆ “ಜಯಮ್ಮನ ಮಗ’ ಚಿತ್ರವನ್ನು ನಿರ್ದೇಶಿಸಿದ್ದ ವಿಕಾಸ್ ಈ ಚಿತ್ರದ ಮೂಲಕ ನಾಯಕರಾಗಿ ಎಂಟ್ರಿ ಕೊಡುತ್ತಿದ್ದಾರೆ.
ಸಿಂಧು ಲೋಕನಾಥ್ ಈ ಚಿತ್ರದ ನಾಯಕಿ. ಅಚ್ಯುತಕುಮಾರ್, ವಿನಯಾ ಪ್ರಸಾದ್, ಸುಚೇಂದ್ರ ಪ್ರಸಾದ್, ರಾಘವ್ ಉದಯ್, ಭಜರಂಗಿ ಲೋಕಿ, ಧರ್ಮಣ್ಣ, ಸೀತಾಕೋಟೆ, ಸನ್ನಿ ಮಹಿಪಾಲ್, ಬಾಬು ಹಿರಣ್ಣಯ್ಯ, ಹೊನ್ನವಳ್ಳಿ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸದ್ಯ ಸೆನ್ಸಾರ್ ಮುಂದಿರುವ “ಕಾಣದಂತೆ ಮಾಯವಾದನು’ ಚಿತ್ರದ ಆಡಿಯೋ ಆಗಸ್ಟ್ ಮೊದಲವಾರ ಬಿಡುಗಡೆಯಾಗಲಿದ್ದು, ಆಗಸ್ಟ್ ಕೊನೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.