ಅ. 18ಕ್ಕೆ “ಕಡಲ ತೀರದ ಭಾರ್ಗವ’ ಟೀಸರ್
Team Udayavani, Oct 15, 2021, 12:37 PM IST
ಬಹುತೇಕ ಹೊಸ ಪ್ರತಿಭೆಗಳ ಪ್ರಯತ್ನದಿಂದ ಮೂಡಿಬರುತ್ತಿರುವ “ಕಡಲ ತೀರದ ಭಾರ್ಗವ’ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದ್ದು, ಸದ್ಯದಲ್ಲೇ ತೆರೆಗೆ ಬರಲಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೇ ಅ. 18ರಂದು ಚಿತ್ರದ ಟೀಸರ್ ಬಿಡುಗಡೆ ಮಾಡುವ ಯೋಚನೆಯಲ್ಲಿದೆ. “ಏವಕಲ ಸ್ಟುಡಿಯೋ’ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ವರುಣ್ ರಾಜು ಪಟೇಲ್ ಹಾಗೂ ಭರತ್ ಗೌಡ ಬಂಡವಾಳ ಹೂಡಿ ನಿರ್ಮಿಸಿದ್ದಾರೆ.
ಚಿತ್ರಕ್ಕೆ “ವಿಜಯಂ ವಜ್ರ ವೆಂಕ್ಚರ್’ ಸಹ ನಿರ್ಮಾಣವಿದೆ. ನಿರ್ಮಾಪಕರಾದ ಭರತ್ ಗೌಡ ಹಾಗೂ ವರುಣ್ ರಾಜು ಪಟೇಲ್ ಈ ಚಿತ್ರದ ನಾಯಕರಾಗಿ ತೆರೆಮೇಲೆ ಕಾಣಿಸಿಕೊಂಡಿದ್ದಾರೆ. ಶೃತಿ ಪ್ರಕಾಶ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ.
ಉಳಿದಂತೆ ಶ್ರೀಧರ್, ರಾಘವ್ ನಾಗ್, ಅಶ್ವಿನ್ ಹಾಸನ್ ಮುಂತಾದವರು ಈ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ ಬೆಂಗಳೂರು, ಉಡುಪಿ, ಮುರುಡೇಶ್ವರ ಸೇರಿದಂತೆ ಕರಾವಳಿಯ ಕಡಲತೀರದ ಪ್ರಮುಖ ತಾಣಗಳಲ್ಲಿ ಈ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಪನ್ನಗ ಸೋಮಶೇಖರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅನಿಲ್ ಸಿ. ಜೆ ಸಂಗೀತ ನಿರ್ದೇಶನವಿದೆ.
ಇದನ್ನೂ ಓದಿ:- ಸಚಿವ ಎಸ್.ಟಿ.ಸೋಮಶೇಖರ್ ರಿಂದ ಡೋಲು ಬಡಿತ, ವೀರಗಾಸೆ ಕುಣಿತ
ಚಿತ್ರಕ್ಕೆ ಕೀರ್ತನ್ ಪೂಜಾರ್ ಛಾಯಾಗ್ರಹಣ ಮತ್ತು ಆಶಿಕ್ ಕುಸುಗೊಳ್ಳಿ , ಉಮೇಶ್ ಭೋಸಗಿ ಸಂಕಲನವಿದೆ. ಅಂದಹಾಗೆ, ಈ ಚಿತ್ರದೆ ಹೆಸರು “ಕಡಲ ತೀರದ ಭಾರ್ಗವ’ ಅಂತಿದ್ದರೂ, ಇದು ಸಾಹಿತಿ ಶಿವರಾಮ ಕಾರಂತ ಅವರ ಜೀವನ ಕುರಿತಾದ ಚಿತ್ರವಲ್ಲ. ಕಡಲ ತೀರದಲ್ಲಿ ವಾಸಿಸುವ ನಾಯಕನ ಹೆಸರು ಭಾರ್ಗವ ಅಂತ ಇರುವುದರಿಂದ ಚಿತ್ರದ ಕಥೆಗೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ಚಿತ್ರಕ್ಕೆ ಇಂಥದ್ದೊಂದು ಟೈಟಲ್ ಇಟ್ಟಿದೆಯಂತೆ ಚಿತ್ರತಂಡ. ಶೃತಿ ಪ್ರಕಾಶ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಶ್ರೀಧರ್, ರಾಘವ್ ನಾಗ್, ಅಶ್ವಿನ್ ಹಾಸನ್ ಮುಂತಾದವರು ಈ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ ಬೆಂಗಳೂರು, ಉಡುಪಿ, ಮುರುಡೇಶ್ವರ ಸೇರಿದಂತೆ ಕರಾವಳಿಯ ಕಡಲತೀರದ ಪ್ರಮುಖ ತಾಣಗಳಲ್ಲಿ ಈ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.