ಹಿರಿಯ ನಟಿ ಜಯಂತಿ ಆರೋಗ್ಯ ವಿಚಾರಿಸಿದ ಸಿಎಂ
Team Udayavani, Mar 29, 2018, 4:38 PM IST
ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಕನ್ನಡ ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಮಂದಿ ಆಸ್ಪತ್ರೆಗೆ ಭೇಟಿ ನೀಡಿ ಜಯಂತಿಯವರ ಆರೋಗ್ಯ ವಿಚಾರಿಸುತ್ತಿದ್ದಾರೆ.
ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಕ್ರಮ್ ಆಸ್ಪತ್ರೆಗೆ ತೆರಳಿ ಜಯಂತಿಯವರ ಆರೋಗ್ಯ ವಿಚಾರಿಸಿದ್ದಾರೆ. ಚಿಕಿತ್ಸೆಯ ಕುರಿತು ಜಯಂತಿ ಪುತ್ರ ಕೃಷ್ಣ ಕುಮಾರ್ ಹಾಗೂ ವೈದ್ಯರಿಂದ ಮಾಹಿತಿ ಪಡೆದ ಅವರು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಹಾಗೂ ಮಂಡಳಿಯ ಕೆಲವು ಪದಾಧಿಕಾರಿಗಳು ಕೂಡಾ ಗುರುವಾರ ಆಸ್ಪತ್ರೆಗೆ ಭೇಟಿ ನೀಡಿ ಜಯಂತಿಯವರ ಆರೋಗ್ಯ ವಿಚಾರಿಸಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಕಲಾವಿದರು ಜಯಂತಿಯವರ ಆರೋಗ್ಯ ವಿಚಾರಿಸುತ್ತಿದ್ದು, ಬುಧವಾರ ನಟರಾದ ಶಿವರಾಜಕುಮಾರ್, ಶ್ರೀನಿವಾಸ ಮೂರ್ತಿ, ಶ್ರೀನಾಥ್ ಸೇರಿದಂತೆ ಅನೇಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
ಅಸ್ತಮಾದಿಂದ ಬಳಲುತ್ತಿದ್ದ ಜಯಂತಿ ಅವರು ಭಾನುವಾರ ರಾತ್ರಿ ತೀವ್ರ ಅಸ್ವಸ್ಥಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಸಂಜೆಯ ಹೊತ್ತಿಗೆ ಅವರ ಆರೋಗ್ಯದ ಕುರಿತು ಊಹಾಪೋಹಗಳು ಹರಡಿದ್ದವು. ಅವರಿಗೆ ತೀವ್ರ ಚಿಕಿತ್ಸಾ ಘಟಕದಲ್ಲಿರಿಸಿ ಕೃತಕ ಉಸಿರಾಟ ವ್ಯವಸ್ಥೆ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಅವರನ್ನು ಜನರಲ್ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Siddapura: ಟ್ರಾಯ್ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.