ಹಿರಿಯ ನಿರ್ದೇಶಕ ರಾಜಶೇಖರ್ ಇನ್ನಿಲ್ಲ
Team Udayavani, Nov 3, 2019, 3:05 AM IST
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಹ.ಸೂ. ರಾಜಶೇಖರ್ ಶನಿವಾರ ಮಧ್ಯಾಹ್ನ ತಮ್ಮ ಸ್ವಗೃಹದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು. ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಸುಮಾರು ಮೂರು ದಶಕಗಳಿಂದ ಸಕ್ರಿಯವಾಗಿದ್ದ ಹ.ಸೂ.ರಾಜ ಶೇಖರ್ ಅವರು, ಆರಂಭದಲ್ಲಿ ಬರಹಗಾರರಾಗಿ, ಸಹಾಯಕ ನಿರ್ದೇಶಕರಾಗಿ, ಸಹ ನಿರ್ದೇಶಕರಾಗಿ, ನಂತರ, ನಿರ್ದೇಶಕರಾಗಿ ಮತ್ತು ನಿರ್ಮಾಪಕರಾಗಿಯೂ ಸಕ್ರಿಯವಾಗಿದ್ದರು.
ಹ.ಸೂ.ರಾಜಶೇಖರ್ ಅವರು ಕನ್ನಡ ದಲ್ಲಿ “ಖದೀಮರು’, “ಭೈರವಿ’, “ಶಾಕ್’, “ಕರ್ಫ್ಯೂ’ “ಟಾರ್ಗೆಟ್’, “ಗರುಡ’, “ಧೈರ್ಯ’, “ಪಾಪಿಗಳ ಲೋಕದಲ್ಲಿ’, “ಬಣ್ಣದ ಹೆಜ್ಜೆ’, “ರಫ್ ಆ್ಯಂಡ್ ಟಫ್’, “ಇನ್ಸ್‌ಪೆಕ್ಟರ್ ಜಯಸಿಂಹ’, ತುಳು ಭಾಷೆಯಲ್ಲಿ “ಒರಿಯರ್ದೋರಿ ಅಸಲ್’ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದರು. “ಮುತ್ತಿನ ಹಾರ’, “ಬಣ್ಣದ ಗೆಜ್ಜೆ’, “ಯುಗ ಪುರುಷ’ ಚಿತ್ರಗಳಿಗೆ ಅವರು ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದರು.
ಅವರ ನಿರ್ದೇಶನದಲ್ಲಿ ದೇವರಾಜ್, ಸಾಯಿಕುಮಾರ್ ಸೇರಿ ಹಲವರು ನಟಿಸಿದ್ದರು. ರಾಜಜಶೇಖರ್ ನಿಧನಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ವಿ.ನಾಗೇಂದ್ರ ಪ್ರಸಾದ್ ಸೇರಿ ಚಿತ್ರರಂಗದ ಅನೇಕ ನಿರ್ದೇಶಕರು, ನಿರ್ಮಾಪಕರು, ಕಲಾವಿದರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿ ಅವ್ಯವಸ್ಥೆ… ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.