ಮಾತಿನಮನೆಯಲ್ಲಿ ಸೆಂಟಿಮೆಂಟ್ ಹೈಪರ್
Team Udayavani, Jan 16, 2018, 10:55 AM IST
ಎಂ.ಬಿಗ್ ಪಿಕ್ಚರ್ಸ್ ಲಾಂಛನದಲ್ಲಿ ಎಂ.ಕಾರ್ತಿಕ್ ಅವರು ನಿರ್ಮಿಸುತ್ತಿರುವ “ಹೈಪರ್’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರಕ್ಕೆ ಸದ್ಯ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಜಮ್ಮು, ಕಾಶ್ಮೀರ, ಮಡಿಕೇರಿ, ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಅರ್ಜುನ್ ಆರ್ಯ ಕಥೆ ಬರೆದಿರುವ ಈ ಚಿತ್ರವನ್ನು ಗಣೇಶ್ ವಿನಾಯಕ್ ನಿರ್ದೇಶಿಸಿದ್ದಾರೆ.
ತಮಿಳಿನಲ್ಲಿ ಮೂರು ಚಿತ್ರಗಳನ್ನು ನಿರ್ದೆಶಿಸಿರುವ ಗಣೇಶ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಕಾಲೇಜ್ ಲವ್ ಸ್ಟೊರಿ ಹಾಗೂ ಅಪ್ಪ- ಮಗಳ ಬಾಂಧವ್ಯದ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ಐದು ಹಾಡುಗಳಿದ್ದು, ಡಿ.ಹಿಮನ್ ಸಂಗೀತ ನೀಡಿದ್ದಾರೆ.
ಶಕ್ತಿವೇಲ್ ಅವರ ಛಾಯಾಗ್ರಹಣ, ರೂಬನ್ ಸಂಕಲನ, ಥ್ರಿಲ್ಲರ್ ಮಂಜು, ಮಾಸ್ ಮಾದ, ವಿಕ್ರಂ, ಹೈಪರ್ ಸೂರಿ ಸಾಹಸ ನಿರ್ದೇಶನ, ಕಲೈ ನೃತ್ಯ ನಿರ್ದೇಶನ ಹಾಗೂ ಕನಕ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಎ.ಪಿ.ಅರ್ಜುನ್, ಬಹದ್ದೂರ್ ಚೇತನ್, ದಿಲ್‌ವಾಲ ಅನಿಲ್ ಹಾಗೂ ಗೌಸ್‌ಫಿರ್ ಬರೆದಿದ್ದಾರೆ.
ಅರ್ಜುನ್ ಆರ್ಯ, ಶೀಲ, ರಂಗಾಯಣ ರಘು, ಶೊಭ್‌ರಾಜ್, ಬುಲೆಟ್ ಪ್ರಕಾಶ್, ಅಚ್ಯುತಕುಮಾರ್, ಶ್ರೀನಿವಾಸಪ್ರಭು, ಬ್ಯಾಂಕ್ ಜನಾರ್ದನ್, ವೀಣಾಸುಂದರ್, ಲಕ್ಷ್ಮೀಸಿದ್ದಯ್ಯ, ಉಮೇಶ್ ಪುಂಗ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi; ಹಿಂದೂ, ಸಿಕ್ಖ್ ಅರ್ಚಕರಿಗೆ 18,000 ರೂ.: ನೋಂದಣಿ ಶುರು
Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್ ಅಧ್ಯಕ್ಷ ಸಮ್ಮತಿ
Editorial; ಜಗತ್ತಿನೆಲ್ಲೆಡೆ ಅನುರಣಿಸಲಿ ಶಾಂತಿ, ಸಹಬಾಳ್ವೆಯ ಮಂತ್ರ
Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್ ಅದಾನಿ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.