

Team Udayavani, Dec 24, 2023, 8:04 PM IST
ಮುಂಬಯಿ: ಶಾರುಖ್ ಖಾನ್ ನಟನೆಯ ಹಾಸ್ಯಮಯ ಚಿತ್ರ “ಡಂಕಿ”, ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ 157.22 ಕೋಟಿ ರೂ ಸಂಗ್ರಹಿಸಿದೆ ಎಂದು ನಿರ್ಮಾಪಕರು ಭಾನುವಾರ ತಿಳಿಸಿದ್ದಾರೆ.
ರಾಜ್‌ಕುಮಾರ್ ಹಿರಾನಿ ನಿರ್ದೇಶನದ ಚಿತ್ರ ಗುರುವಾರ ವಿಶ್ವಾದ್ಯಂತ ಬಿಡುಗಡೆಯಾಗಿತ್ತು. ಇದರಲ್ಲಿ ತಾಪ್ಸಿ ಪನ್ನು, ವಿಕ್ಕಿ ಕೌಶಲ್, ಬೊಮನ್ ಇರಾನಿ, ವಿಕ್ರಮ್ ಕೊಚ್ಚರ್ ಮತ್ತು ಅನಿಲ್ ಗ್ರೋವರ್ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.
“ಡಂಕಿ” ಚಿತ್ರ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ರೆಡ್ ಚಿಲ್ಲಿಸ್ ಎಂಟರ್‌ಟೈನ್‌ಮೆಂಟ್ ಬಾಕ್ಸ್ ಆಫೀಸ್ ಅಪ್‌ಡೇಟ್ ಅನ್ನು ತನ್ನ ಅಧಿಕೃತ ಎಕ್ಸ್ ಪೇಜ್‌ನಲ್ಲಿ ಹಂಚಿಕೊಂಡಿದೆ.
”ಡಂಕಿಯ ಮೇಲಿನ ಪ್ರೀತಿಯು ಪ್ರತಿದಿನ ಹೆಚ್ಚು ಹೆಚ್ಚು ಬೆಳೆಯುತ್ತಿದೆ ಮತ್ತು ನಾವು ತುಂಬಾ ಕೃತಜ್ಞರಾಗಿರುತ್ತೇವೆ!.ವಿಶ್ವಾದ್ಯಂತ ಬಾಕ್ಸ್ ಆಫೀಸ್ ಕಲೆಕ್ಷನ್‌ಗಳಲ್ಲಿ ರೂ 157.22 ಕೋಟಿ ಗಳಿಸಿದೆ” ಎಂದು ಪ್ರಕಟಿಸಿದೆ.
ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ನಿರ್ಮಿಸಿದ್ದು,ಅಕ್ರಮ ವಲಸೆ ತಂತ್ರ ‘ಕತ್ತೆ ಫ್ಲೈಟ್ ‘ ಆಧಾರಿತ ಹಾಸ್ಯ ನಾಟಕ “ಡಂಕಿ” ಕಥೆಯನ್ನು ಹಿರಾನಿ, ಅಭಿಜಾತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಬರೆದಿದ್ದಾರೆ.
Udupi: ಗೀತಾರ್ಥ ಚಿಂತನೆ-191: “ಡಿಸಿಶನ್ ಮೇಕರ್ ನೀನಲ್ಲ’ ಎಂಬ ಶ್ರೀಕೃಷ್ಣ
Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ
Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್ ಜಾರಕಿಹೊಳಿ
Mangaluru: ವಿದ್ಯುತ್ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ
Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ
You seem to have an Ad Blocker on.
To continue reading, please turn it off or whitelist Udayavani.