ಶೆಟ್ಟರ “ಅವನೇ ಶ್ರೀಮನ್ನಾರಾಯಣ’ನಿಗೆ ಸಿನಿಪ್ರಿಯರು ಫಿದಾ
Team Udayavani, Jun 17, 2018, 1:51 PM IST
ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಫಸ್ಟ್ ಲುಕ್ ಟೀಸರ್ ರಕ್ಷಿತ್ ಹುಟ್ಟುಹಬ್ಬದ ದಿನ ಬಿಡುಗಡೆಯಾಗಿ ಅಭಿಮಾನಿಗಳಲ್ಲಿ ಸಿನಿಮಾ ಬಗ್ಗೆ ಸಖತ್ ಕ್ರೇಜ್ ಹುಟ್ಟಿಸಿದ್ದು ಒಂದು ಕಡೆಯಾದರೆ, ಬಿಡುಗಡೆಯಾದಾಗಿನಿಂದ ಚಿತ್ರದ ಟೀಸರ್ ನ್ನು 13 ಲಕ್ಷಕ್ಕೂ ಹೆಚ್ಚು ಜನ ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಟೀಸರ್ ಟ್ರೆಂಡಿಂಗ್‍ನಲ್ಲಿದೆ.
ಟೀಸರ್‌ನಲ್ಲಿ ಪೊಲೀಸ್ ಗೆಟಪ್‌ನಲ್ಲಿರುವ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಯನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಸನ್‌ಗ್ಲಾಸ್ ಹಾಕಿಕೊಂಡು ಗಡ್ಡಬಿಟ್ಟಿರುವ ರಕ್ಷಿತ್, ಕೈ ಕೋಳ ಹಾಕಿಕೊಂಡು ಪೊಲೀಸ್ ಗೆಪಟ್‌ನಲ್ಲಿ ಮಿಂಚಿದ್ದಾರೆ. ಪೊಲೀಸ್ ಆಗಿ ಸ್ವತಃ ಕೈ ಕೋಳ ಹಾಕಿಕೊಂಡಿದ್ದು ಯಾಕೆ ಎಂಬ ಕೌತುಕ ಸಿನಿಪ್ರಿಯರಿಗೆ ಸಹಜವಾಗಿ ಎದ್ದಿದೆ. ಅಲ್ಲದೇ ಅವರ ಮ್ಯಾನರಿಸಂ, ಕಾಸ್ಟ್ಯೂಮ್, ಮತ್ತು ಹಿನ್ನೆಲೆ ಸಂಗೀತ ಪ್ರಮುಖವಾಗಿ ಗಮನಸೆಳೆಯುವ ಅಂಶಗಳು.
ಇನ್ನು ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಈ ಚಿತ್ರಕ್ಕಾಗಿ ರಕ್ಷಿತ್ ಶೆಟ್ಟಿ 8 ಪ್ಯಾಕ್ ವರ್ಕೌಟ್ ಮಾಡಿರುವುದಲ್ಲದೇ, ಐದು ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅವರದ್ದು ಭ್ರಷ್ಟ ಪೊಲೀಸ್ ಅಧಿಕಾರಿಯ ಪಾತ್ರ. 80ರ ದಶಕದ ಉತ್ತರ ಕರ್ನಾಟಕದ ಊರೊಂದರಲ್ಲಿ ನಡೆಯುವ ಕಾಲ್ಪನಿಕ ಘಟನೆಯನ್ನಿಟ್ಟುಕೊಂಡು ಈ ಚಿತ್ರ ಮಾಡಿದ್ದಾರೆ.
ಈ ಚಿತ್ರದಲ್ಲಿ ರಕ್ಷಿತ್‌ಗೆ ನಾಯಕಿಯಾಗಿ ಸಾನ್ವಿ ಶ್ರೀವಾತ್ಸವ್ ನಟಿಸುತ್ತಿದ್ದು, ಅಚ್ಯುತ್ ಕುಮಾರ್ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರ ಜೊತೆಗೆ ಬಾಲಾಜಿ ಮನೋಹರ್, ಪ್ರಮೋದ್ ಶೆಟ್ಟಿ, ಮಧುಸೂಧನ್ ರಾವ್ ಸೇರಿದಂತೆ ಮುಂತಾದವರಿದ್ದಾರೆ. ಇನ್ನು ಚಿತ್ರವನ್ನು ಪುಷ್ಕರ್, ಪ್ರಕಾಶ್ (ರಂಗಿ ತರಂಗ) ಮತ್ತು ರಕ್ಷಿತ್ ಸೇರಿ ನಿರ್ಮಿಸುತ್ತಿದ್ದಾರೆ. ಚಿತ್ರವನ್ನು ಸಚಿನ್ ನಿರ್ದೇಶಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.