Rupali Sood: ವೆಂಕ್ಯಾ ಸಿನಿಮಾದಲ್ಲಿ ಶಿಮ್ಲಾ ಸುಂದರಿ
Team Udayavani, Apr 2, 2024, 1:22 PM IST
ಸಾಗರ್ ಪುರಾಣಿಕ್ ಹೊಸ ಸಿನಿಮಾ “ವೆಂಕ್ಯಾ’ ಈಗಾಗಲೇ ಚಿತ್ರೀಕರಣ ಆರಂಭಿಸಿದ್ದು, ಸಾಗರ್ ನಿರ್ದೇಶನದ ಜೊತೆಗೆ ನಾಯಕರಾಗಿಯೂ ನಟಿಸುತ್ತಿದ್ದಾರೆ. ಈಗ ಈ ಚಿತ್ರಕ್ಕೆ ಶಿಮ್ಲಾ ಬೆಡಗಿಯ ಆಗಮನವಾಗಿದೆ. ಹೌದು, ಶಿಮ್ಲಾದ ರೂಪಾಲಿ ಸೂದ್ “ವೆಂಕ್ಯಾ’ ಚಿತ್ರಕ್ಕೆ ಎಂಟ್ರಿಕೊಟ್ಟಿದ್ದಾರೆ.
ಮೂಲತಃ ಶಿಮ್ಲಾದವರಾದ ರೂಪಾಲಿ ಕಾಲೇಜು ದಿನಗಳಲ್ಲಿದ್ದಾಗಲೇ ಮಾಡೆಲಿಂಗ್ ಅಖಾಡಕ್ಕೆ ಇಳಿದಿದ್ದರು. ಮಾಡೆಲಿಂಗ್ ಜೊತೆ ಜೊತೆಯಲಿ ಹಲವು ಮ್ಯೂಸಿಕ್ ಆಲ್ಬಂಗಳಲ್ಲಿ ನಟಿಸಿರುವ ಈ ಶಿಮ್ಲಾ ಚೆಲುವೆ, ಸೂಪರ್ ಹಿಟ್ ಹಾಡು “ಹಾರ್ನ್ ಬ್ಲೋ’ನಲ್ಲಿ ಹೆಜ್ಜೆ ಹಾಕಿದ್ದಾರೆ. ಇದೀಗ ವೆಂಕ್ಯಾ ಸಿನಿಮಾದ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ರೂಪಾಲಿ ಈಗಾಗಲೇ ವೆಂಕ್ಯಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಅವರು ಹಿಮಾಚಲದ ಪಹಾಡಿ ಹುಡುಗಿಯಾಗಿ ನಟಿಸುತ್ತಿದ್ದಾರೆ. ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಡೊಳ್ಳು ಸಿನಿಮಾ ನಿರ್ಮಾಣ ಮಾಡಿದ್ದ ಪವನ್ ಒಡೆಯರ್ ವೆಂಕ್ಯಾನಿಗೂ ಸಾಥ್ ಕೊಟ್ಟಿದ್ದಾರೆ. ಈ ಚಿತ್ರಕ್ಕೆ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಕೂಡ ಹಣ ಹಾಕಿದ್ದಾರೆ. ಉತ್ತರ ಕರ್ನಾಟಕವನ್ನು ಕಥೆ ಆಧಾರಿಸಿ ಮೂಡಿ ಬರುತ್ತಿರುವ ವೆಂಕ್ಯಾ ಚಿತ್ರದ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಶ್ರೀನಿಧಿ ಡಿಎಸ್ ಬರೆದಿದ್ದಾರೆ.
ಪ್ರಣವ್ ಮುಲೆ ಅವರ ಛಾಯಾಗ್ರಹಣ ಮತ್ತು ಹೇಮಂತ್ ಜೋಯಿಸ್ ಸಂಗೀತ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
BBK11: ಚೈತ್ರಾಳನ್ನು ದೂಡಿದ ರಜತ್.. ಮೈ ಮುಟ್ಟಿದ್ದಕ್ಕೆ ಫೈಯರ್ ಬ್ರ್ಯಾಂಡ್ ಗರಂ
MUST WATCH
ಹೊಸ ಸೇರ್ಪಡೆ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.