Kannada Cinema; ಶಿವಣ್ಣನ ಹೊಸ ಚಿತ್ರಕ್ಕೆ ಹೇಮಂತ್ ರಾವ್ ಸಾರಥಿ
Team Udayavani, Feb 3, 2024, 5:50 PM IST
ಕನ್ನಡದಲ್ಲಿ “ಗೋಧಿ ಬಣ್ಣ ಸಾಧಾರಣ ಮೈಕಟ್ಟು’, “ಕವಲುದಾರಿ’, “ಸಪ್ತ ಸಾಗರದಾಚೆ ಎಲ್ಲೋ..’ ದಂತಹ ಸದಭಿರುಚಿ ಸಿನಿಮಾಗಳನ್ನು ನಿರ್ದೇಶಿಸಿದ್ದ ಹೇಮಂತ್ ಎಂ. ರಾವ್ ಈಗ ಸದ್ದಿಲ್ಲದೆ ಹೊಸ ಸಿನಿಮಾಕ್ಕೆ ತಯಾರಿ ನಡೆಸಿದ್ದಾರೆ. ಈಗಾಗಲೇ ರಕ್ಷಿತ್ ಶೆಟ್ಟಿ, ರಿಷಿ ಮೊದಲಾದವರಿಗೆ ಆ್ಯಕ್ಷನ್-ಕಟ್ ಹೇಳಿದ್ದ ಹೇಮಂತ್ ಎಂ. ರಾವ್ ಈ ಬಾರಿ ನಟ ಶಿವರಾಜಕುಮಾರ್ ಅವರಿಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ.
ಕೆಲ ದಿನಗಳಿಂದ ನಿರ್ದೇಶಕ ಹೇಮಂತ್ ರಾವ್, ಶಿವರಾಜಕುಮಾರ್ ಅವರ ಹೊಸ ಸಿನಿಮಾಕ್ಕೆ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದರೂ, ಈ ಬಗ್ಗೆ ನಿರ್ದೇಶಕ ಹೇಮಂತ್ ರಾವ್ ಅವರಾಗಲಿ, ಚಿತ್ರತಂಡವಾಗಲಿ ಅಧಿಕೃತ ಮಾಹಿತಿಯನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಚಿತ್ರತಂಡದ ಕಡೆಯಿಂದಲೇ ಈ ಸಿನಿಮಾದ ಬಗ್ಗೆ ಅಧಿಕೃತ ಸುದ್ದಿ ಹೊರಬಿದ್ದಿದೆ.
ಈ ಬಗ್ಗೆ ಮಾತನಾಡುವ ನಿರ್ದೇಶಕ ಹೇಮಂತ್ ರಾವ್, “ಇದೊಂದು ಆ್ಯಕ್ಷನ್ ಡ್ರಾಮಾ ಕಥಾಹಂದರದ ಸಿನಿಮಾವಾಗಿದ್ದು, ಈಗಾಗಲೇ ಈ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿದೆ. ಸುಮಾರು ಆರು ತಿಂಗಳಿನಿಂದ ಈ ಸಿನಿಮಾದ ಕೆಲಸ ನಡೆಯುತ್ತಿದೆ. ಈ ವರ್ಷದ ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಸಿನಿಮಾ ಶೂಟಿಂಗ್ ಶುರು ಮಾಡುವ ಯೋಚನೆಯಿದೆ. ಮುಂದಿನ ವರ್ಷದ ಮಧ್ಯ ಭಾಗದಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ವೈಶಾಕ್ ಗೌಡ “ವೈಶಾಕ್ ಜೆ ಫಿಲಂಸ್’ ಬ್ಯಾನರ್‌ನಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಶೀಘ್ರದಲ್ಲಿಯೇ ಈ ಸಿನಿಮಾದ ಟೈಟಲ್, ಇತರ ಕಲಾವಿದರ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದೇವೆ’ ಎಂಬ ಮಾಹಿತಿ ನೀಡುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.