Shiva Rajkumar: ಬರಲಿದೆ ಭೈರತಿ ರಣಗಲ್-2
Team Udayavani, Nov 4, 2024, 1:16 PM IST
ಶಿವರಾಜ್‌ಕುಮಾರ್ ನಟನೆ, ನಿರ್ಮಾಣದ “ಭೈರತಿ ರಣಗಲ್’ ಚಿತ್ರ ನ.15ರಂದು ತೆರೆಕಾಣುತ್ತಿದೆ. ಇದು “ಮಫ್ತಿ’ ಚಿತ್ರದ ಪ್ರೀಕ್ವೆಲ್. ಆದರೆ, “ಭೈರತಿ ರಣಗಲ್’ ಚಿತ್ರದ ಮುಂದುವರೆದ ಭಾಗ ಕೂಡಾ ಬರಲಿದೆ. ಈ ವಿಚಾರವನ್ನು ಸ್ವತಃ ಶಿವರಾಜ್‌ಕುಮಾರ್ ಖಚಿತಪಡಿಸಿದ್ದಾರೆ.
ಇತ್ತೀಚೆಗೆ ನಡೆದ ಚಿತ್ರದ ಅಜ್ಞಾತವಾಸ ಹಾಡು ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಣ್ಣ ಭೈರತಿ ರಣಗಲ್ ಸ್ವೀಕ್ವೆಲ್ ಬರಲಿದೆ ಎಂದಿದ್ದಾರೆ.
ಈ ಕುರಿತು ಮಾತನಾಡಿದ ಶಿವಣ್ಣ, ಮಫ್ತಿ ಚಿತ್ರದ ಭೈರತಿ ರಣಗಲ್ ಪಾತ್ರ ಬಹಳ ಇಷ್ಟ. ನಂತರ ನಿರ್ದೇಶಕ ನರ್ತನ್, ಭೈರತಿ ರಣಗಲ್ ಚಿತ್ರದ ಕಥೆ ಹೇಳಿದರು. ನನಗೆ ಹಾಗೂ ನನ್ನ ಗೀತಾ ಅವರಿಗೆ ಕಥೆ ಮೆಚ್ಚುಗೆಯಾಯಿತು. ನಮ್ಮ ಗೀತಾ ಪಿಕ್ಚರ್ಸ್ ಬ್ಯಾನರ್‌ನಲ್ಲೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ. ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರವಿದು. ಅದ್ಧೂರಿ ತಾರಾಬಳಗ ಹಾಗೂ ತಾಂತ್ರಿಕವರ್ಗ ಈ ಚಿತ್ರದಲ್ಲಿದ್ದು, ಚಿತ್ರ ಉತ್ತಮವಾಗಿ ಮೂಡಿಬರಲು ಅವರೆಲ್ಲರ ಸಹಕಾರ ಬಹುಮುಖ್ಯ. ಚಿತ್ರ ನವೆಂರ್ಬ 15 ರಂದು ಚಿತ್ರ ತೆರೆಗೆ ಬರಲಿದೆ. ಮುಂದೆ ಈ ಚಿತ್ರದ ಮುಂದಿನ ಭಾಗ ಸಹ ಬರಲಿದೆ ಎಂದರು.
ನನ್ನ ಕಥೆಗೆ ಶಿವಣ್ಣ ಸೇರಿದಂತೆ ಎಲ್ಲಾ ಕಲಾವಿದರು ಜೀವ ತುಂಬಿದ್ದಾರೆ. ತಂತ್ರಜ್ಞರು ಸಹಕಾರ ನೀಡಿದ್ದಾರೆ. ಎಲ್ಲರ ಶ್ರಮದಿಂದ ಭೈರತಿ ರಣಗಲ್ ಉತ್ತಮ ಚಿತ್ರವಾಗಿ ನಿಮ್ಮ ಮುಂದೆ ಬರಲಿದೆ. ನವೆಂಬರ್ 5 ರಂದು ಟ್ರೇಲರ್ ಬರಲಿದೆ. ಚಿತ್ರ ನವೆಂಬರ್ 15ರಂದು ಸಿನಿಮಾ ಬಿಡುಗಡೆಯಾಗಲಿದೆ ಎನ್ನುವುದು ನಿರ್ದೇಶಕ ನರ್ತನ್ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.