ಹೊರಬಂತು ‘ಶಿವಾಜಿ ಸುರತ್ಕಲ್-2′ ಹಾಡು
Team Udayavani, Mar 16, 2023, 5:29 PM IST
ರಮೇಶ್ ಅರವಿಂದ್ ನಟನೆಯ “ಶಿವಾಜಿ ಸುರತ್ಕಲ್-2′ ಚಿತ್ರ ಚಿತ್ರೀಕರಣ ಪೂರೈಸಿದ್ದು, ಏಪ್ರಿಲ್ 14ರಂದು ಬಿಡುಗಡೆಯಾಗಲಿದೆ. ಈಗ ಮೊದಲ ಹಂತವಾಗಿ ಚಿತ್ರದ ಹಾಡೊಂದು ಇದೀಗ ಬಿಡುಗಡೆಯಾಗಿದೆ. ಈ ಮೂಲಕ ಚಿತ್ರತಂಡ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಹಾಕುತ್ತಿದೆ.
ಆಕಾಶ್ ಶ್ರೀವತ್ಸ ಚಿತ್ರಕಥೆ ಬರೆದು, ಸಂಕಲನ ಮಾಡಿ, ನಿರ್ದೇಶನ ಮಾಡಿರುವ ಈ ಚಿತ್ರವನ್ನು ಅಂಜನಾದ್ರಿ ಸಿನಿ ಕ್ರಿಯೇಶನ್ಸ್ ಮೂಲಕ ಅನೂಪ್ ಗೌಡ ಮತ್ತು ರೇಖಾ ಕೆ ಎನ್ ನಿರ್ಮಾಣ ಮಾಡಿದ್ದಾರೆ. ಚಿತ್ರದ ಕೊನೆಯ ಒಂದು ಹಾಡಿನ ಚಿತ್ರೀಕರಣವನ್ನು ಇತ್ತೀಚೆಗಷ್ಟೇ ಚಿತ್ರತಂಡ ಮುಗಿಸಿದೆ.
ಈ ಹಾಡಿನಲ್ಲಿ ಸಂಗೀತಾ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ರಮೇಶ್ ಅರವಿಂದ್, ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ರಾಘು ರಮಣಕೊಪ್ಪ, ವಿದ್ಯಾ ಮೂರ್ತಿ, ಆರಾಧ್ಯ ಸೇರಿದಂತೆ ಹಲವಾರು ಕಲಾವಿದರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.