ಶಶಿಕುಮಾರ್ ಪುತ್ರನ ಚಿತ್ರಕ್ಕೆ ಶಿವಣ್ಣ-ದರ್ಶನ್ ಕ್ಲಾಪ್
Team Udayavani, Sep 3, 2018, 11:23 AM IST
ನಟ ಶಶಿಕುಮಾರ್ ಪುತ್ರ ಆದಿತ್ಯ ಶಶಿಕುಮಾರ್ ಸಿನಿಮಾ ರಂಗಕ್ಕೆ ಕಾಲಿಟ್ಟಿರುವ ವಿಷಯ ಗೊತ್ತೇ ಇದೆ. ಆ ಚಿತ್ರಕ್ಕೆ “ಮೊಡವೆ’ ಎಂದು ಹೆಸರಿಟ್ಟಿರುವುದೂ ಗೊತ್ತು. ಭಾನುವಾರವಷ್ಟೇ “ಮೊಡವೆ’ ಚಿತ್ರಕ್ಕೆ ಮುಹೂರ್ತ ನಡೆದಿದೆ. ವಿಶೇಷವೆಂದರೆ, ಶಿವರಾಜಕುಮಾರ್ ಮತ್ತು ದರ್ಶನ್ ಇಬ್ಬರು ಸ್ಟಾರ್‌ಗಳು “ಮೊಡವೆ’ ಚಿತ್ರಕ್ಕೆ ಶುಭಹಾರೈಸಿದ್ದಾರೆ.
“ಮೊಡವೆ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಯಾಗುತ್ತಿರುವ ಆದಿತ್ಯ ಶಶಿಕುಮಾರ್ ಅವರ ಮೊದಲ ದೃಶ್ಯಕ್ಕೆ ಇಬ್ಬರೂ ಸ್ಟಾರ್ ನಟರು ಕ್ಲಾಪ್ ಮಾಡುವ ಆದಿತ್ಯನಿಗೆ ಶುಭಕೋರಿದ್ದಾರೆ. “ಮೊಡವೆ’ ಒಂದು ಅಪ್ಪಟ ಹಳ್ಳಿ ಹಿನ್ನೆಲೆಯಲ್ಲಿ ಸಾಗುವ ಕಥೆ. ಪಕ್ಕಾ ಮಾಸ್ ಮತ್ತು ಲವ್‌ಸ್ಟೋರಿ ಹೊಂದಿರುವ ಚಿತ್ರ. ಬಹುತೇಕ ಉತ್ತರ ಭಾಗದಲ್ಲಿ ನಡೆಯುವ ಕಥೆ ಇದಾಗಿರುವುದರಿಂದ ಹಂಪಿ, ಐಹೊಳೆ ಇನ್ನಿತರೆ ಕಡೆ ಚಿತ್ರೀಕರಣ ನಡೆಯಲಿದೆ.
ಸಿದ್ಧಾರ್ಥ್ ಈ ಚಿತ್ರದ ನಿರ್ದೇಶಕರು. ಈ ಚಿತ್ರಕ್ಕೆ ಅಪೂರ್ವ ನಾಯಕಿಯಾಗಿ ನಟಿಸುತ್ತಿದ್ದಾರೆ. ಯೌವ್ವನಕ್ಕೆ ಬಂದ ಹುಡುಗ, ಹುಡುಗಿಯ ಪ್ರೇಮಕಥೆ ಇದಾಗಿರುವುದರಿಂದ ನಿರ್ದೇಶಕರು “ಮೊಡವೆ’ ಎಂದು ಹೆಸರಿಟ್ಟಿದ್ದಾರೆ. ಮುಹೂರ್ತ ಸಮಾರಂಭಕ್ಕೆ ಶಶಿಕುಮಾರ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಆಗಮಿಸಿ, ಶುಭಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.