Sandalwood; ತೋತಾಪುರಿ-2ಗೆ ಶಿವಣ್ಣನ ಸಾಥ್; ಸೆ.18ಕ್ಕೆ ಟ್ರೇಲರ್ ಬಿಡುಗಡೆ
Team Udayavani, Sep 17, 2023, 3:04 PM IST
ಜಗ್ಗೇಶ್- ಧನಂಜಯ್ ಮುಖ್ಯಭೂಮಿಕೆಯಲ್ಲಿರುವ “ತೋತಾಪುರಿ -2′ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿದೆ. ಸೆ.18ರಂದು ಬೆಳಗ್ಗೆ 9.19 ನಿಮಿಷಕ್ಕೆ ಚಿತ್ರದ ಟ್ರೇಲರ್ ಅನ್ನು ನಟ ಶಿವರಾಜ್ಕುಮಾರ್ ಬಿಡುಗಡೆ ಮಾಡಲಿದ್ದಾರೆ.
ನಟ ಡಾಲಿ ಧನಂಜಯ್ ಈ ಚಿತ್ರದಲ್ಲಿ ಜಗ್ಗೇಶ್ ಅವರ ಜೊತೆ ಇಡೀ ಸಿನಿಮಾದುದ್ದಕ್ಕೂ ಸಾಗಿಬಂದಿದ್ದಾರೆ. ಧನಂಜಯ್ ಹಾಗೂ ಜಗ್ಗೇಶ್ ಅವರ ಕ್ಯಾರೆಕ್ಟರ್ ಲುಕ್ ಗುರುಪೂರ್ಣಿಮೆಯ ದಿನ ಬಿಡುಗಡೆಯಾಗಿತ್ತು. ಮೊದಲ ಭಾಗದಲ್ಲಿ ನವರಸ ನಾಯಕ ಜಗ್ಗೇಶ್, ಅದಿತಿ ಪ್ರಭುದೇವ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಸದ್ಯದÇÉೇ ಚಿತ್ರತಂಡ ಸಿನಿಮಾದ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಲಿದ್ದು, ಚಿತ್ರಕ್ಕೆ ನಿರಂಜನ ಬಾಬು ಅವರ ಛಾಯಾಗ್ರಹಣ, ಅರುಣ್ ಆಂಡ್ರ್ಯೂ ಅವರ ಸಂಗೀತ ಸಂಯೋಜನೆಯಿದೆ.
“ನಮ್ಮ ನಿರೀಕ್ಷೆಯಂತೆಯೇ ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಪ್ರೇಕ್ಷಕರಿಗೆ ಇಷ್ಟವಾಗುವ ಮನರಂಜನಾತ್ಮಕ ಕಂಟೆಂಟ್ ಚಿತ್ರದಲ್ಲಿದೆ. ಥೇಟರಿಗೆ ಬರುವ ಪ್ರೇಕ್ಷಕರಿಗೆ ಉತ್ತಮ ಮನರಂಜನೆಯ ಜೊತೆ ಪರಿಶುದ್ಧ ಹಾಸ್ಯದ ಹೂರಣವೂ ಇರುತ್ತದೆ’ ಎಂದು ನಿರ್ಮಾಪಕ ಕೆ.ಎ.ಸುರೇಶ್ ಹೇಳಿದ್ದಾರೆ.
ಉಳಿದಂತೆ ಚಿತ್ರದಲ್ಲಿ ದತ್ತಣ್ಣ, ಸುಮನ ರಂಗನಾಥ್, ವೀಣಾ ಸುಂದರ್, ಹೇಮಾದತ್ ಹೀಗೆ ಮೊದಲ ಭಾಗದಲ್ಲಿದ್ದ ಬಹುತೇಕ ಪಾತ್ರಗಳು ಮುಂದುವರಿದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..
Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ
Seetha Payana: ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್ ಹೀರೋ
Chethan Kumar: ನಟ ಚೇತನ್ ವಿರುದ್ಧದ ವಾರಂಟ್ ಹಿಂಪಡೆದ ಕೋರ್ಟ್
Actor Darshan: ಅ.22ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.