ಹ್ಯಾಟ್ರಿಕ್ ಹೀರೋ ಶಿವಣ್ಣನ 123 ಚಿತ್ರದ ಫಸ್ಟ್ ಲುಕ್ ರಿಲೀಸ್
Team Udayavani, Jul 10, 2021, 1:42 PM IST
ಬೆಂಗಳೂರು: ಜುಲೈ 12 ಕ್ಕೆ ಕರುನಾಡು ಚಕ್ರವರ್ತಿ ಶಿವರಾಜ್ ಕುಮಾರ ಅವರ ಜನ್ಮದಿನ. ಶಿವಣ್ಣನ ಹುಟ್ಟುಹಬ್ಬಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಅಂದು ಹಲವು ಸಿನಿಮಾಗಳ ಪೋಸ್ಟರ್ ಗಳು ಟೀಸರ್ ಗಳು ರಿಲೀಸ್ ಆಗಲಿವೆ. ಅದರಲ್ಲೂ ಶಿವರಾಜ್ ಕುಮಾರ ಅವರ 123 ಸಿನಿಮಾದ ಟೈಟಲ್ ಲಾಂಚ್ ಆಗಲಿದೆ.
ಹೌದು, ಶಿವಣ್ಣ ಅವರು ನಟಿಸುತ್ತಿರುವ 123ನೇ ಸಿನಿಮಾದ ಫಸ್ಟ್ ಲುಕ್ ಇಂದು (ಜುಲೈ 10) ಬಿಡುಗಡೆಯಾಗಿದೆ. ಔಟ್ ಅಂಡ್ ಔಟ್ ಆಕ್ಷನ್ ಲುಕ್‌ನಲ್ಲಿ ಶಿವರಾಜ್ ಕುಮಾರ್ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರದ ಮೇಲೆ ಕುತೂಹಲ ಹೆಚ್ಚಿದೆ. ವಿಶೇಷ ಅಂದ್ರೆ ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಸಹ ಪ್ರಮಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪೋಸ್ಟರ್‌ನಲ್ಲೂ ಧನಂಜಯ್ ನೋಡಬಹುದು. ಈ ಚಿತ್ರದ ಶೀರ್ಷಿಕೆ ಜುಲೈ 12ಕ್ಕೆ ಅನಾವರಣಗೊಳ್ಳಲಿದೆ.
ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ನಿರ್ದೇಶಕ ವಿಜಯ್ ಮಿಲ್ಟನ್ ಈಗ ಕೊನೆಯ ಹಂತದ ಕೆಲಸಕ್ಕೆ ಚಾಲನೆ ಕೊಟ್ಟಿದ್ದಾರೆ. ಕೆಲವು ಆಕ್ಷನ್ ದೃಶ್ಯಗಳು ಹಾಗೂ 20 ನಿಮಿಷದ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣವಷ್ಟೆ ಬಾಕಿ ಇದೆ. ಇದು ಕೊನೆಯ ಶೆಡ್ಯೂಲ್ ಎಂದು ಸ್ವತಃ ವಿಜಯ್ ಮಿಲ್ಟನ್ ಹೇಳಿದ್ದರು.
Here is the first look poster from #Srk123 . Title revealing on July 12th for namma Shivanna’s birthday. @vijaymilton @AnoopSeelin @NimmaShivanna pic.twitter.com/GEVxte920Y
— Dhananjaya (@Dhananjayaka) July 10, 2021
ಶಿವರಾಜ್ ಕುಮಾರ್, ಡಾಲಿ ಧನಂಜಯ್ ಜೊತೆ ‘ದಿಯಾ’ ಖ್ಯಾತಿಯ ಪೃಥ್ವಿ ಅಂಬರ್ ಸಹ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಕೃಷ್ಣ ಸಮರ್ಥ್ ಬಂಡವಾಳ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.