“ಕವಲು ದಾರಿ’ಗೆ ಶಿವರಾಜಕುಮಾರ್ ಕ್ಲಾಪ್
Team Udayavani, Sep 22, 2017, 5:11 PM IST
ಪುನೀತ್ ರಾಜಕುಮಾರ್ ಅವರು ಆರಂಭಿಸಿರುವ “ಪಿಆರ್‌ಕೆ’ ಬ್ಯಾನರ್‌ನ ಚೊಚ್ಚಲ ಚಿತ್ರ “ಕವಲು ದಾರಿ’ಯ ಮುಹೂರ್ತ ಶುಕ್ರವಾರ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ಶಿವರಾಜಕುಮಾರ್ ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸುತ್ತಿದ್ದು, ರಿಷಿ ನಾಯಕರಾಗಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಅನಂತ್‌ನಾಗ್, ರೋಶನಿ ಪ್ರಕಾಶ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.
ಪುನೀತ್ ಬ್ಯಾನರ್‌ನ ಚೊಚ್ಚಲ ಸಿನಿಮಾಕ್ಕೆ ಶುಭ ಕೋರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ರಾಕ್‌ಲೈನ್ ವೆಂಕಟೇಶ್, ರಕ್ಷಿತ್ ಶೆಟ್ಟಿ, ನಿರ್ದೇಶಕರಾದ ಪವನ್ ಒಡೆಯರ್, ಸಂತೋಷ್ ಆನಂದರಾಮ್, ಅನೂಪ್ ಭಂಡಾರಿ, ರಿಶಭ್ ಶೆಟ್ಟಿ, ಮಹೇಶ್ ಬಾಬು ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ನಿರ್ಮಾಪಕ, ನಿರ್ದೇಶಕ ಹಾಗೂ ವಿತರಕರು ಆಗಮಿಸಿದ್ದರು.
ಪುನೀತ್ ರಾಜಕುಮಾರ್ ತಮ್ಮ ತಾಯಿ ಪಾರ್ವತಮ್ಮ ರಾಜಕುಮಾರ್ ಹೆಸರಲ್ಲಿ “ಪಿಆರ್‌ಕೆ’ ಎಂಬ ಬ್ಯಾನರ್ ಆರಂಭಿಸಿದ್ದು, ಅಶ್ವಿನಿ ಪುನೀತ್ ರಾಜಕುಮಾರ್ ಈ ಸಿನಿಮಾದ ನಿರ್ಮಾಪಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.