ಶಿವರಾಜಕುಮಾರ್ ಹೊಸ ಚಿತ್ರ “ರುಸ್ತುಂ’
Team Udayavani, Nov 30, 2017, 2:35 PM IST
ಶಿವರಾಜಕುಮಾರ್ ಒಂದರ ಹಿಂದೊಂದು ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕಳೆದ ವಾರ ಅವರ ಅಭಿನಯದ “ಕವಚ’ ಸೆಟ್ಟೇರಿದೆ. ಮುಂದಿನ ದಿನಗಳಲ್ಲಿ “ಹರಿಹರ’, “ಎಸ್.ಆರ್.ಕೆ’, “ಬ್ಲಾಕ್ ಸಿ ನಂ.135′ ಮುಂತಾದ ಚಿತ್ರಗಳಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದಾರೆ. ಈ ಮಧ್ಯೆ ಇನ್ನೊಂದು ಚಿತ್ರದಲ್ಲಿ ಶಿವರಾಜಕುಮಾರ್ ನಟಿಸುತ್ತಿರುವ ಸುದ್ದಿ ಹೊರಬಿದ್ದಿದೆ.
ಅಂದಹಾಗೆ, ಶಿವರಾಜಕುಮಾರ್ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ “ರುಸ್ತುಂ’ ಎಂಬ ಹೆಸರನ್ನು ಇಡಲಾಗಿದೆ. ಈ ಚಿತ್ರವನ್ನು ಜಯಣ್ಣ ಕಂಬೈನ್ಸ್‌ನಡಿ ಜಯಣ್ಣ ಮತ್ತು ಭೋಗೇಂದ್ರ ನಿರ್ಮಿಸುತ್ತಿದ್ದು, ಈ ಸಂಸ್ಥೆಗೆ ಶಿವರಾಜಕುಮಾರ್ ಮಾಡುತ್ತಿರುವ ಮೂರನೆಯ ಚಿತ್ರ ಇದಾಗಿದೆ. ಇದಕ್ಕೂ ಮುನ್ನ ಜಯಣ್ಣ ಫಿಲಮ್ಸ್‌ನ “ಬಂಗಾರ – ಸನ್ ಆಫ್ ಬಂಗಾರದ ಮನುಷ್ಯ’ ಚಿತ್ರದಲ್ಲಿ ಶಿವರಾಜಕುಮಾರ್ ನಟಿಸಿದ್ದರು.
ಇನ್ನು “ಮಫ್ತಿ’ ಚಿತ್ರವು ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ “ರುಸ್ತುಂ’ ಎಂಬ ಇದೇ ಸಂಸ್ಥೆಯ ಇನ್ನೊಂದು ಚಿತ್ರದಲ್ಲೂ ಶಿವರಾಜಕುಮಾರ್ ನಟಿಸಲಿದ್ದಾರೆ. ಈ ಚಿತ್ರವನ್ನು ಸಾಹಸ ನಿರ್ದೇಶಕ ಕೆ. ರವಿವರ್ಮ ಅವರು ನಿರ್ದೇಶಿಸಲಿದ್ದಾರೆ. ಈ ಹಿಂದೆಯೇ, ರವಿವರ್ಮ ನಿರ್ದೇಶಕರಾಗಬೇಕಿತ್ತು.
ಆದರೆ, ಕಾರಣಾಂತರಗಳಿಂದ ಅವರ ನಿರ್ದೇಶನ ತಡವಾಗಿತ್ತು. ಈಗ ಕೊನೆಗೂ ಶಿವರಾಜಕುಮಾರ್ ಅಭಿನಯದಲ್ಲಿ ರವಿವರ್ಮ ಚಿತ್ರ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರ ಮುಂದಿನ ವರ್ಷ ಸೆಟ್ಟೇರುವ ಸಾಧ್ಯತೆ ಇದ್ದು, ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಾರೆ ಮತ್ತು ಯಾರೆಲ್ಲಾ ತೆರೆಯ ಹಿಂದೆ ಕಾಣಿಸಿಕೊಳ್ಳುತ್ತಾರೆ ಎಂಬ ವಿಷಯ ಇನ್ನೂ ಹೊರಬೀಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.