ಹಾಸ್ಟೆಲ್‌ ಹುಡುಗರ ಸಕ್ಸಸ್‌ ಪಾರ್ಟಿಗೆ ಶಿವಣ್ಣ ಸಾಥ್‌

Team Udayavani, Jul 25, 2023, 1:01 PM IST

shivarajkumar supports hostel hudugaru bekagiddare team

ಬಹುತೇಕ ಹೊಸ ಪ್ರತಿಭೆಗಳೇ ಸೇರಿನಿರ್ಮಿಸಿರುವ “ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ಸಿನಿಮಾಕ್ಕೆ ಎಲ್ಲ ಕಡೆಗಳಿಂದ ಉತ್ತಮ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾದ ಬಿಡುಗಡೆಯಾದ ಬಹುತೇಕ ಎಲ್ಲ ಕೇಂದ್ರಗಳಲ್ಲಿ ಹೌಸ್‌ ಫ‌ುಲ್‌ ಪ್ರದರ್ಶನ ಕಾಣುತ್ತಿದ್ದು, ಇದೇ ವೇಳೆ “ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ಸಿನಿಮಾಕ್ಕೆ ನಟ ಶಿವರಾಜಕುಮಾರ್‌ ಬೆನ್ನು ತಟ್ಟಿದ್ದಾರೆ.

ಬೆಂಗಳೂರಿನ ನಾಗವರದಲ್ಲಿರುವ ನಟ ಶಿವರಾಜಕುಮಾರ್‌ ಅವರ ನಿವಾಸದಲ್ಲಿ “ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಸಕ್ಸಸ್‌ ಮೀಟ್‌ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಸಕ್ಸಸ್‌ಮೀಟ್‌ನಲ್ಲಿ ಭಾಗಿಯಾದ ನಟ ಶಿವರಾಜಕುಮಾರ್‌ ಮತ್ತು ಗೀತಾ ಶಿವರಾಜಕುಮಾರ್‌ ಚಿತ್ರತಂಡದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು.

ಮೊದಲಿಗೆ “ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಬಗ್ಗೆ ಮಾತನಾಡಿದ ಶಿವರಾಜಕುಮಾರ್‌, ” ನಾನು ಫ‌ಸ್ಟ್‌ ಡೇ ಫ‌ಸ್ಟ್‌ ಶೋ ಈ ಸಿನಿಮಾ ನೋಡುತ್ತೇನೆ ಎಂದು ಚಿತ್ರತಂಡಕ್ಕೆ ಹೇಳಿದ್ದೆ. ಆದರೆ ಆ್ಯಡ್‌ ಶೂಟ್‌ ಇದ್ದಿದ್ದರಿಂದ ಸಿನಿಮಾ ಫ‌ಸ್ಟ್‌ಡೇ ನೋಡಲು ಆಗಲಿಲ್ಲ. ನನ್ನ ಪರವಾಗಿ ಪತ್ನಿ ಗೀತಾ, ನನ್ನ ಚಿಕ್ಕ ಮಗಳು ನಿವೇದಿತಾ ಎಲ್ಲರೂ ಸಿನಿಮಾ ನೋಡಿದರು. ಬಂದಿದ್ದರು. ಒಳ್ಳೆಯ ಸಿನಿಮಾಕ್ಕೆ ಮೋರಲ್‌ ಸಪೋರ್ಟ್‌ಗಿಂತ ನಾವು ಸಿನಿಮಾ ನೋಡಿ ತೃಪ್ತಿಪಡುವುದು ಮುಖ್ಯವಾಗುತ್ತದೆ. ಸಿನಿಮಾದ ಟೈಟಲ್‌ ಪೋಸ್ಟರ್‌, ಟೀಸರ್‌, ಟ್ರೇಲರ್‌, ಸಾಂಗ್ಸ್‌ ಎಲ್ಲ ನೋಡಿದಾಗ ತುಂಬಾ ಇಂಟ್ರೆಸ್ಟಿಂಗ್‌ ಅನಿಸಿತು. ಜನ ಥಿಯೇಟರ್‌ಗೆ ಬರದ ಸಮಯದಲ್ಲಿ, ಜನ ಥಿಯೇಟರ್‌ಗೆ ಬಂದು ಸಪೋರ್ಟ್‌ ಮಾಡಿದ್ದಾರೆ. ಇಡೀ ಸ್ಯಾಂಡಲ್‌ವುಡ್‌ ಸಿನಿಮಾಗೆ ಸಾಥ್‌ ಕೊಟ್ಟಿದೆ. ಇಂಡಸ್ಟ್ರಿ ಅಂದರೆ ಒಂದು ಫ್ಯಾಮಿಲಿ ಇದ್ದಂತೆ. ಫ್ಯಾಮಿಲಿ ಅಂದಾಗ ಯಾರದ್ದೇ ಸಿನಿಮಾವಾಗಲಿ ಪ್ರೋತ್ಸಾಹ ಮಾಡಬೇಕು’ ಎಂದರು.

“ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಬಿಡುಗಡೆ ವೇಳೆ ರಮ್ಯಾ ಮಾಡಿದ ಅಡ್ಡಿ ಬಗ್ಗೆ ಪ್ರತಿಕ್ರಿಯಿಸಿದ ಶಿವಣ್ಣ, “ಯಾರ ಬಗ್ಗೆ ಏನೂ ಕಾಮೆಂಟ್ಸ್‌ ಮಾಡುವುದು ಬೇಡ. ಎಲ್ಲದಕ್ಕಿಂತ ಕೊನೆಗೆ ಗೆಲುವು ಮುಖ್ಯ. ಸಿನಿಮಾ ಬರೋಕು ಮೊದಲು ಒಳ್ಳೆ ರಿಪೋರ್ಟ್‌ ಇತ್ತು. ಒಳ್ಳೆ ಮನಸ್ಸಿನಿಂದ ಮಾಡಿದರೆ ಅದಕ್ಕೆ ಯಾವುದೇ ತಡೆ ಬರಲ್ಲ. ಅದಕ್ಕೆ ಇದೇ ಉತ್ತಮ ಉದಾಹರಣೆ. ಅಭಿಮಾನಿ ದೇವರುಗಳು ಒಳ್ಳೆ ಸಿನಿಮಾ ಕೈಬಿಡಲ್ಲ. ಸತ್ಯ ಇದ್ದರೆ ಜಯ ಇದ್ದೇ ಇರುತ್ತೆ. ಅವರವರು ತಿಳಿದುಕೊಳ್ಳಬೇಕು. ಯಾಕೆ ಹೀಗಾಯ್ತು ಅನ್ನೋದು ಗೊತ್ತಾಗ್ತಿಲ್ಲ. ನಮ್ಮ ಇಂಡಸ್ಟ್ರಿ ಬೆಳೆಯಬೇಕು ಅಷ್ಟೆ. ಅದನ್ನು ದುರ್ಬಳಕೆ ಮಾಡಿಕೊಳ್ಳಬಾರದು. ಹೊಸಬರು ಬಂದಾಗ ಎಲ್ಲರೂ ಸಪೋರ್ಟ್‌ ಮಾಡಬೇಕು. ಆ ವಿಚಾರವನ್ನು ಈಗ ದೊಡ್ಡದು ಮಾಡುವುದು ಬೇಡ’ ಎಂದರು.

ಗೀತಾ ಶಿವರಾಜಕುಮಾರ್‌ ಮಾತನಾಡಿ, “ಈ ತರ ಸಿನಿಮಾ ನೋಡಿ ಬಹಳ ವರ್ಷವಾಗಿತ್ತು. ವರುಣ್‌ ನಮ್ಮ ಕುಟುಂಬದ ಹುಡುಗ. ನಿರ್ದೇಶಕರಿಂದ ಹಿಡಿದು ಎಲ್ಲರು ಹೊಸಬರೇ. ಎಲ್ಲವೂ ಹೊಸತನದಿಂದ ಕೂಡಿದೆ. ಹಾಸ್ಟೆಲ್‌ ಲೈಫ್ ಹೀಗೆ ಇತ್ತೇನೋ ಅನಿಸುವಷ್ಟು ಬಹಳ ಸ್ವಾಭಾವಿಕವಾಗಿತ್ತು. ಎಲ್ಲಾ ಫ್ಯಾಮಿಲಿ ಕುಳಿತು ನೋಡಬಹುದು. ಈ ತರ ಸಿನಿಮಾಗಳು ಮತ್ತಷ್ಟು ಬರಬೇಕು. ಆರಂಭದಿಂದ ಕೊನೆತನಕ ಎಲ್ಲಿಯೂ ಬೋರ್‌ ಆಗುವುದಿಲ್ಲ. ನಾನು ಸಿನಿಮಾ ಎಂಜಾಯ್‌ ಮಾಡಿದೆ. ಇಡೀ ತಂಡಕ್ಕೆ ಎಲ್ಲರಿಗೂ ಒಳ್ಳೆದಾಗಲಿ’ ಎಂದರು.

ಇದೇ ವೇಳೆ ಹಾಜರಿದ್ದ “ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ನಿರ್ಮಾಪಕರು, ನಿರ್ದೇಶಕರು, ಕಲಾವಿದರು ಮತ್ತು ತಂತ್ರಜ್ಞರು ಸಿನಿಮಾದ ಬಗ್ಗೆ ಮಾತನಾಡಿದರು

ಟಾಪ್ ನ್ಯೂಸ್

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.