Bhairathi Ranagal: ಶಿವಣ್ಣನ ಮೊಗದಲ್ಲಿ ಭೈರತಿ ನಗು
Team Udayavani, Nov 21, 2024, 11:47 AM IST
ಶಿವರಾಜ್‌ಕುಮಾರ್ ನಟನೆಯ “ಭೈರತಿ ರಣಗಲ್’ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಶಿವಣ್ಣ ಖುಷಿಯಾಗಿದ್ದಾರೆ. ಚಿತ್ರ ಕಲೆಕ್ಷನ್ ವಿಚಾರದಲ್ಲೂ ತಂಡದ ಮೊಗದಲ್ಲಿ ನಗುಮೂಡಿಸಿದೆ. ಈ ಖುಷಿಯಲ್ಲಿ ಶಿವಣ್ಣ ಸಿನಿಮಾ ಪ್ರೇಮಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.
“ಮಫ್ತಿ ಚಿತ್ರದಲ್ಲಿ ನನ್ನ ಭೈರತಿ ರಣಗಲ್ ಪಾತ್ರವನ್ನು ನೀವು ಇಷ್ಟಪಟ್ಟಿದ್ದಿರಿ. ಆದರೆ ಭೈರತಿ ರಣಗಲ್ ಚಿತ್ರದ ರಣಗಲ್ ಪಾತ್ರವನ್ನು ನೀವು ಹೃದಯಕ್ಕೆ ತೆಗೆದುಕೊಂಡಿದ್ದೀರ. ನಿಮಗೆ ತುಂಬು ಹೃದಯದ ಧನ್ಯವಾದ. ನಮ್ಮ ಸಂಸ್ಥೆಯಿಂದ ನಿರ್ಮಾಣವಾದ ಎರಡನೇ ಚಿತ್ರವಿದು. ಒಳ್ಳೆಯ ಚಿತ್ರಗಳನ್ನು ನೀಡಿದಾಗ ಜನರು ಚಿತ್ರಮಂದಿರಕ್ಕೆ ಬರುತ್ತಾರೆ ಎಂಬುದಕ್ಕೆ ಈ ಚಿತ್ರ ಉದಾಹರಣೆ. ಈ ಯಶಸ್ಸು ನನ್ನೊಬ್ಬನದಲ್ಲ. ಇಡೀ ತಂಡದು. ಮುಂದೆ ಮಫ್ತಿ-2 ಮಾಡಬೇಕೆಂಬುದು ಅಭಿಮಾನಿಗಳ ಆಸೆ. ಖಂಡಿತ ಮಾಡುತ್ತೇನೆ. ಆದರೆ ಶೀರ್ಷಿಕೆ ಮಫ್ತಿ 2 ಅಂತ ಇರುವುದಿಲ್ಲ. ಸದ್ಯದಲ್ಲೇ ಆ ಚಿತ್ರದ ಶೀರ್ಷಿಕೆಯನ್ನು ತಿಳಿಸುತ್ತೇನೆ’ ಎಂದರು.
“ಅಪ್ಪಾಜಿ ಅವರು ಹೇಳಿದ ಹಾಗೆ ಈ ಯಶಸ್ಸಿಗೆ ಮುಖ್ಯ ಕಾರಣ ಅಭಿಮಾನಿ ದೇವರುಗಳು. ಅವರಿಗೆ ಮೊದಲು ಧನ್ಯವಾದ ತಿಳಿಸುತ್ತೇನೆ. ನರ್ತನ್ ಅವರು ಬಂದು ಈ ಚಿತ್ರದ ಕಥೆ ಹೇಳಿದಾಗ, ನಾನು ಅವರು ಮμ¤ಯ ಸೀಕ್ವೆಲ್ ಹೇಳಬಹುದು ಅಂದುಕೊಂಡೆ. ಅವರು ಪ್ರೀಕ್ವೆಲ್ ಹೇಳಿದರು. ಈ ಚಿತ್ರದ ಯಶಸ್ಸಿನ ಕ್ರೆಡಿಟ್ ನಿರ್ದೇಶಕರಿಗೆ ಹೋಗಬೇಕು. ಚಿತ್ರ ಉತ್ತಮವಾಗಿ ಮೂಡಿಬರಲು ಕಾರಣರಾದ ಇಡೀ ತಂಡಕ್ಕೆ ಧನ್ಯವಾದ. ನಮ್ಮ ಸಂಸ್ಥೆಯಿಂದ ಮುಂದೆ ಕೂಡ ಉತ್ತಮ ಚಿತ್ರಗಳನ್ನು ನಿರ್ಮಿಸುತ್ತೇವೆ’ ಎನ್ನುವುದು ನಿರ್ಮಾಪಕಿ ಗೀತಾ ಶಿವ ರಾಜ್‌ಕುಮಾರ್ ಮಾತು.
ನಿರ್ದೇಶಕ ನರ್ತನ್ ಮಾತನಾಡಿ, “ಈ ಚಿತ್ರ ಆಗಲು ಮುಖ್ಯ ಕಾರಣ ಶಿವಣ್ಣ ಅವರ ಅಭಿಮಾನಿಗಳು. ಅವರು ಮಫ್ತಿ ಚಿತ್ರದ ಯಶಸ್ಸಿನ ನಂತರ, ರಣಗಲ್ ಚಿತ್ರ ಮಾಡಿ ಎಂದು ಹೇಳಿದ್ದರು. ಈ ಚಿತ್ರ ಆಗಲು ಅವರೇ ಮುಖ್ಯ ಕಾರಣ ಎನ್ನಬಹುದು. ಆನಂತರ ನನ್ನನ್ನು ಕರೆದು ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡು ಭೈರತಿ ರಣಗಲ್ ಚಿತ್ರ ಮಾಡಲು ಅಡ್ವಾನ್ಸ್ ನೀಡಿದ್ದು ಗೀತಾ ಶಿವರಾಜಕುಮಾರ್ ಅವರು’ ಎಂದರು.
ಚಿತ್ರದಲ್ಲಿ ನಟಿಸಿರುವ ಅವಿನಾಶ್, ಬಾಬು ಹಿರಣ್ಣಯ್ಯ, ಗೋಪಾಲಕೃಷ್ಣ ದೇಶಪಾಂಡೆ, ಮಧು ಗುರುಸ್ವಾಮಿ, ಡ್ಯಾನ್ಸಿಂಗ್ ರೋಸ್ ಶಬೀರ್, ಪ್ರತಾಪ್ ಮುಂತಾದ ಕಲಾವಿದರು ಹಾಗೂ ತಂಡ ಖುಷಿ ಹಂಚಿಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.