ಶಿವತೇಜಸ್ ಹೊಸ ಚಿತ್ರ ಲೌಡ್ ಸ್ಪೀಕರ್
Team Udayavani, Nov 28, 2017, 9:00 PM IST
“ಧೈರ್ಯಂ’ ಚಿತ್ರದ ನಂತರ ನಿರ್ದೇಶಕ ಶಿವ ತೇಜಸ್ ಸದ್ದಿಲ್ಲದೇ ಒಂದು ಚಿತ್ರ ಆರಂಭಿಸಿದ್ದರು. ಸಂಪೂರ್ಣ ಹೊಸಬರೇ ತುಂಬಿಕೊಂಡಿರುವ ಈ ಚಿತ್ರದ ಚಿತ್ರೀಕರಣ ಕೂಡಾ ನಡೆಯುತ್ತಿದೆ. ಆದರೆ, ಚಿತ್ರಕ್ಕೆ ಟೈಟಲ್ ಅಂತಿಮವಾಗಿರಲಿಲ್ಲ. ಈ ಚಿತ್ರಕ್ಕೆ ಟೈಟಲ್ ಸಿಕ್ಕಿದೆ. ಅದು “ಲೌಡ್ ಸ್ಪೀಕರ್’.
ಹೌದು, ಶಿವ ತೇಜಸ್ ತಮ್ಮ ಹೊಸ ಚಿತ್ರಕ್ಕೆ “ಲೌಡ್ ಸ್ಪೀಕರ್’ ಎಂದು ಹೆಸರಿಟ್ಟಿದ್ದಾರೆ. ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಸೋಶಿಯಲ್ ಮೀಡಿಯಾಗಳ ಬಳಕೆ ಹೆಚ್ಚಾಗುತ್ತಿದ್ದಂತೆ ಯುವ ಜನತೆ ಯಾವ ರೀತಿ ದಾರಿ ತಪ್ಪುತ್ತದೆ, ಸಂಬಂಧಗಳು ಹೇಗೆ ಮೌಲ್ಯ ಕಳೆದುಕೊಳ್ಳುತ್ತವೆ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.
ಸೀರಿಯಸ್ ವಿಷಯನ್ನು ಕಾಮಿಡಿ ಹಿನ್ನೆಲೆಯಲ್ಲಿ ಹೇಳಲು ಹೊರಟಿರುವ ಶಿವ ತೇಜಸ್, ಇದೊಂದು ಕಾಮಿಡಿ ಥ್ರಿಲ್ಲರ್ ಸಿನಿಮಾ ಎನ್ನುತ್ತಾರೆ.
ಚಿತ್ರದಲ್ಲಿ ನೀನಾಸಂ ಭಾಸ್ಕರ್, ಅಭಿಷೇಕ್, ಸುಮಂತ್ ಭಟ್, ಕಾರ್ತಿಕ್ ರಾವ್, ಕಾವ್ಯಾ ಶಾ, ಅನುಷಾ, ದಿಶಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.
ಜೊತೆಗೆ ರಂಗಾಯಣ ರಘು ದತ್ತಣ್ಣ ನಟಿಸುತ್ತಿದ್ದಾರೆ. ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರ ಶಿಷ್ಯ ಹರ್ಷವರ್ಧನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ. ಈ ಚಿತ್ರಕ್ಕೆ ಡಾ.ಕೆ.ರಾಜು ನಿರ್ಮಿಸುತ್ತಿದ್ದಾರೆ. “ಧೈರ್ಯಂ’ ಚಿತ್ರವನ್ನು ಇವರೇ ನಿರ್ಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.