ಪ್ರಾಣ ಪ್ರತಿಷ್ಠಾ ದಿನವೇ ಪ್ಯಾನ್ ಇಂಡಿಯಾ ʼSHREE RAM, JAI HANUMANʼ ಫಸ್ಟ್ ಲುಕ್ ಔಟ್
Team Udayavani, Jan 22, 2024, 5:03 PM IST
ಬೆಂಗಳೂರು: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅದ್ಧೂರಿಯಾಗಿ ನೆರವೇರಿದೆ. ಈ ಐತಿಹಾಸಿಕ ಕ್ಷಣಕ್ಕೆ ಕೋಟ್ಯಂತರ ಮಂದಿ ಸಾಕ್ಷಿಯಾಗಿದ್ದು, ರಾಮನ ಘೋಷಣೆಯನ್ನು ಮೊಳಗಿಸಿದ್ದಾರೆ.
ಇತ್ತೀಚೆಗೆ ಟಾಲಿವುಡ್ ನಲ್ಲಿ ಪ್ರಶಾಂತ್ ವರ್ಮಾ ಅವರ ʼಹನುಮಾನ್ʼ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ನಡುವೆ ರಾಮ ಪ್ರತಿಷ್ಠಾಪನೆಯ ಮುಹೂರ್ತದ ಸಮಯದಲ್ಲೇ ಮತ್ತೊಂದು ಭಕ್ತಿ ಪ್ರಧಾನ ಪ್ಯಾನ್ ಇಂಡಿಯಾ ಸಿನಿಮಾವೊಂದರ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ.
“ಶ್ರೀ ರಾಮ್, ಜೈ ಹನುಮಾನ್” ಎನ್ನುವ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಪೋಸ್ಟರ್ ನಲ್ಲಿ ಬೆಟ್ಟ, ಗುಡ್ಡ, ಬೆಂಕಿ, ನೀರು, ರಾಮ… ಹನುಮ… ಹೀಗೆ ಕುತೂಹಲಕಾರಿ ಸಂಗತಿಯನ್ನು ತೋರಿಸಲಾಗಿದೆ. ಈ ಸಿನಿಮಾಕ್ಕೆ ಯುವ ನಿರ್ದೇಶಕ ಅವಧೂತ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಕನ್ನಡದಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಯಶಸ್ಸಾಗಿರುವ ಕೆ.ಎ.ಸುರೇಶ್ ಅವರು ಸುರೇಶ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಪ್ಯಾನ್ ಇಂಡಿಯಾ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಬಹು ಕೋಟಿ ವೆಚ್ಚದ ಸಿನಿಮಾದಲ್ಲಿ ನಾನಾ ಇಂಡಸ್ಟ್ರಿಯ ದಿಗ್ಗಜರು ಇರಲಿದ್ದಾರೆ ಎನ್ನಲಾಗಿದೆ.
ಸದ್ಯ ಸಿನಿಮಾದ ಸ್ಟೋರಿ ಬೋರ್ಡ್ ಹಾಗೂ ವಿಎಫ್ ಎಕ್ಸ್ ಕೆಲಸ ಭರದಿಂದ ಸಾಗುತ್ತಿದೆ.
SHREE RAM, JAI HANUMAN – Kannada based film announced. The film, to be helmed by Avadhoot and Production by KA Suresh.
PR:
Suresh Arts release captivating poster on Ayodhya’s historic occasion
On the auspicious day of the Ram Temple inauguration in Ayodhya, Suresh Arts proudly… pic.twitter.com/SKHCojKBAP
— AndhraBoxOffice.Com (@AndhraBoxOffice) January 22, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.