Sandalwood; ಒಂದ್ಸಲ ಮೀಟ್ ಮಾಡೋಣ ಎಂದ ಶ್ರೇಯಸ್- ಬೃಂದಾ
Team Udayavani, Sep 7, 2023, 5:16 PM IST
ಹಿರಿಯ ನಿರ್ದೇಶಕ ಎಸ್. ನಾರಾಯಣ್ ಸದ್ದಿಲ್ಲದೆ ಹೊಸ ಸಿನಿಮಾಕ್ಕೆ ಆ್ಯಕ್ಷನ್-ಕಟ್ ಹೇಳು ತಯಾರಾಗಿದ್ದಾರೆ.ಈ ಬಾರಿ ಟ್ರಾವೆಲ್ ಲವ್ ಸ್ಟೋರಿಯೊಂದನ್ನು ಆರಿಸಿಕೊಂಡಿರುವ ಎಸ್. ನಾರಾಯಣ್ ತಮ್ಮ ಸಿನಿಮಾಕ್ಕೆ “ಒಂದ್ಸಲ ಮಿಟ್ ಮಾಡೋಣ’ ಎಂದು ಟೈಟಲ್ ಇಟ್ಟಿದ್ದಾರೆ.
ಇನ್ನು ಈ ಸಿನಿಮಾದಲ್ಲಿ ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಸದ್ದಿಲ್ಲದೆ “ಒಂದ್ಸಲ ಮಿಟ್ ಮಾಡೋಣ’ ಸಿನಿಮಾದ ಬಹುತೇಕ ಪ್ರೀ-ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಎಸ್. ನಾರಾಯಣ್ ಆ್ಯಂಡ್ ಟೀಮ್ ಇತ್ತೀಚೆಗೆ ಸಿನಿಮಾದ ಮುಹೂರ್ತವನ್ನು ನೆರವೇರಿಸಿದ್ದಾರೆ.
ಚಿಕ್ಕಮಗಳೂರಿನ ಶ್ರೀದೇವಿರಮ್ಮ ದೇವಸ್ಥಾನದಲ್ಲಿ ನಡೆದ “ಒಂದ್ಸಲ ಮಿಟ್ ಮಾಡೋಣ’ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ಸಿನಿಮಾದ ಮೊದಲ ಸನ್ನಿವೇಶಕ್ಕೆ ಸ್ಥಳೀಯ ಶಾಸಕರಾದ ಹೆಚ್. ಡಿ ತಮ್ಮಯ್ಯ ಆರಂಭ ಫಲಕ ತೋರಿದರು. ನಿರ್ಮಾಣ ಸಹಾಯಕ ಮಹದೇವ ಕ್ಯಾಮೆರಾ ಚಾಲನೆ ಮಾಡಿದರು.
ಮುಹೂರ್ತ ಸಮಾರಂಭದಲ್ಲಿ ನಾಯಕ ನಟ ಶ್ರೇಯಸ್ ಮಂಜು, ನಿರ್ದೇಶಕ ಎಸ್. ನಾರಾಯಣ್, ನಟಿ ತಾರಾ ಅನುರಾಧ ಸೇರಿದಂತೆ ಚಿತ್ರದ ಕಲಾವಿದರು ತಂತ್ರಜ್ಞರು ಹಾಜರಿದ್ದರು.
“ಈಶಾ ಪ್ರೊಡಕ್ಷನ್ಸ್’ ಲಾಂಛನದಲ್ಲಿ ಕೆ. ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ “ಒಂದ್ಸಲ ಮಿಟ್ ಮಾಡೋಣ’ ಸಿನಿಮಾಕ್ಕೆ ಎಸ್. ನಾರಾಯಣ್ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಸಿನಿಮಾದಲ್ಲಿ ಶ್ರೇಯಸ್‌ಗೆ ಬೃಂದಾ ನಾಯಕಿಯಾಗಿ ಜೋಡಿಯಾಗುತ್ತಿದ್ದಾರೆ. ಉಳಿದಂತೆ ತಾರಾ ಅನುರಾಧ, ಶರತ್ ಲೋಹಿತಾಶ್ವ, ಸಾಧುಕೋಕಿಲ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ರಂಗಾಯಣ ರಘು, ಪಾವಗಡ ಮಂಜು, ಜಯರಾಮ್, ಸುಜಯ್ ಶಾಸ್ತ್ರಿ, ಗಿರಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. “ಒಂದ್ಸಲ ಮಿಟ್ ಮಾಡೋಣ’ ಸಿನಿಮಾದ ಹಾಡುಗಳಿಗೆ ಜಸ್ಸಿ ಗಿಫ್ಟ್ ಸಂಗೀತ ಸಂಯೋಜಿಸುತ್ತಿದ್ದು, ಕುಮಾರ್ ಗೌಡ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನವಿದೆ.
“ಒಂದ್ಸಲ ಮೀಟ್ ಮಾಡೋಣ’ ಪ್ರೀತಿಯ ಜರ್ನಿ ಎಂದು ಹೇಳುವ ನಿರ್ದೇಶಕ ಎಸ್. ನಾರಾಯಣ್, “ಚಿಕ್ಕಮಗಳೂರಿನಿಂದ ಚಿತ್ರೀಕರಣ ಪ್ರಾರಂಭವಾಗಿ, ಸಕಲೇಶಪುರ, ವಿರಾಜಪೇಟೆ, ಕಣ್ಣೂರು, ಮೈಸೂರು, ಬೆಂಗಳೂರು, ಬೆಳಗಾವಿ ಹಾಗೂ ಗೋವಾ ಮುಂತಾದ ಕಡೆ ನಡೆಯಲಿದೆ. ಇದೊಂದು ಟ್ರಾವೆಲಿಂಗ್ ಲವ್ ಸ್ಟೋರಿ’ ಎಂದು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.