ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Team Udayavani, Jan 5, 2025, 1:04 PM IST
ನಿರ್ಮಾಪಕ ಕೆ.ಮಂಜು ತಮ್ಮ ಪುತ್ರ ಶ್ರೇಯಸ್‌ರನ್ನು ನಾಯಕನನ್ನಾಗಿಸಿ “ವಿಷ್ಣು ಪ್ರಿಯಾ’ ಎಂಬ ಚಿತ್ರವನ್ನೂ ನಿರ್ಮಿಸಿದ್ದಾರೆ. ಬಹಳ ಹಿಂದೆಯೇ ನಿರ್ಮಾಣವಾಗಿದ್ದ ಈ ಚಿತ್ರವೀಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಫೆಬ್ರವರಿ 21ಕ್ಕೆ ತೆರೆ ಕಾಣಲಿದೆ. ನಾಯಕನ ಹೆಸರು ವಿಷ್ಣು, ನಾಯಕಿಯ ಹೆಸರು ಪ್ರಿಯಾ. ಅವರಿಬ್ಬರ ಹೆಸರೇ ಚಿತ್ರದ ಶೀರ್ಷಿಕೆಯಾಗಿದೆ.
90ರ ದಶಕದ ಪ್ರೇಮಕಥೆಯೊಂದನ್ನು ಹೇಳುವ ಈ ಚಿತ್ರಕ್ಕೆ ಮಲಯಾಳಂನ ವಿ.ಕೆ.ಪ್ರಕಾಶ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಮಲಯಾಳಂ, ತೆಲುಗು, ತಮಿಳಿನಲ್ಲಿ ನಲವತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿರುವ ರು ರಾಷ್ಟ್ರಪ್ರಶಸ್ತಿಗೂ ಭಾಜನರಾಗಿದ್ದಾರೆ.
ಕಣ್ಸನ್ನೆ ಚೆಲುವೆ ಪ್ರಿಯಾ ವಾರಿಯರ್ ಈ ಚಿತ್ರದ ಮೂಲಕ ನಾಯಕಿಯಾಗಿ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತೆಲುಗಿನ ಸಂಗೀತ ನಿರ್ದೇಶಕ ಗೋಪಿಸುಂದರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಧಾರವಾಡ ಮೂಲದ ಸಿಂಧುಶ್ರೀ ಈ ಚಿತ್ರದ ಮೂಲ ಕಥೆಗಾರರು. ಆ ಕಥೆಯ ಒಂದು ಲೈನ್ ತಗೊಂಡು ಈ ಚಿತ್ರದ ಸ್ಕ್ರಿಪ್ಟ್ ಮಾಡಲಾಗಿದೆ. ಜೀವನದಲ್ಲಿ ಪ್ರೀತಿ ಅನ್ನೋದು ಎಷ್ಟು ಮುಖ್ಯ ಅಂತ ಈ ಚಿತ್ರದಲ್ಲಿ ತೋರಿಸಲಾಗಿದೆ. ಪ್ರೀತಿಗಾಗಿ ಏನು ಬೇಕಾದರೂ ಮಾಡಲು ರೆಡಿಯಾಗುವ ಯುವಕನ ಜೀವನದಲ್ಲಿ ಏನೇನೆಲ್ಲ ಆಗಿಹೋಗುತ್ತದೆ ಎಂದು ಈ ಚಿತ್ರ ಹೇಳುತ್ತದೆ. ನಾಯಕನ ತಂದೆಯಾಗಿ ಅಚ್ಯುತ್ ಕುಮಾರ್ ಹಾಗೂ ನಾಯಕಿಯ ತಂದೆಯಾಗಿ ಸುಚೇಂದ್ರ ಪ್ರಸಾದ್ ಅವರು ಅಭಿನಯಿಸಿದ್ದಾರೆ. ವಿನೋದ್ ಭಾರತಿ ಅವರ ಛಾಯಾಗ್ರಹಣ, ಸುರೇಶ್ ಅರಸ್ ಅವರ ಸಂಕಲನ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.