ಮದುವೆ ಮನೆಯಲ್ಲಿ ‘ಶುಭಮಂಗಳ’; ಅ. 14ಕ್ಕೆ ಚಿತ್ರ ಬಿಡುಗಡೆ
Team Udayavani, Sep 19, 2022, 4:40 PM IST
ಸ್ಯಾಂಡಲ್‌ವುಡ್‌ನಲ್ಲಿ ಸೂಪರ್‌ಹಿಟ್ ಸಿನಿಮಾಗಳ ಟೈಟಲ್ ಮರುಬಳಕೆ ಆಗೋದು ಹೊಸತೆನಲ್ಲ. ಈಗ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ “ಶುಭಮಂಗಳ’ ಚಿತ್ರದ ಟೈಟಲ್ ಇಟ್ಟುಕೊಂಡು ಬಂದಿರುವ ಹೊಸ ಚಿತ್ರ “ಶುಭಮಂಗಳ’ ರಿಲೀಸ್ ಗೆ ಸಜ್ಜಾಗಿದೆ.
“ಅವ್ಯಕ್ತ ಫಿಲ್ಮಂಸ್’ ಅಡಿಯಲ್ಲಿ ಸ್ನೇಹಿತರ ಜೊತೆಗೂಡಿ ಸಂತೋಷ್ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಸಾಕಷ್ಟು ಕಿರುಚಿತ್ರಗಳನ್ನು ನಿರ್ಮಿಸಿರುವ ಸಂತೋಷ್ ಗೋಪಾಲ್ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.
ಚಿತ್ರ ಬಿಡುಗಡೆ ಮೊದಲ ಹಂತವಾಗಿ ತನ್ನ ಪ್ರಚಾರಕಾರ್ಯ ಆರಂಭಿಸಿರುವ ಚಿತ್ರತಂಡ ಮೊದಲ ಹೆಜ್ಜೆಯಾಗಿ ತನ್ನ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನೆರವೇರಿಸಿದೆ. ಇಡೀ ಚಿತ್ರತಂಡ ಈ ಕಾರ್ಯಕ್ರಮಕ್ಕೆ ಭಾಗಿಯಾಗಿ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ಇದನ್ನೂ ಓದಿ:ಪ್ರವೀಣ್ ಕುಟುಂಬಕ್ಕೆ ನೀಡಿದ ಭರವಸೆ ಈಡೇರಿಸಿ, ತಪ್ಪಿದರೆ ಸಿಎಂ ಮುಖಕ್ಕೆ ಮಸಿ : ಮುತಾಲಿಕ್
ನಿರ್ದೇಶಕ ಸಂತೋಷ್ ಗೋಪಾಲ್ ಮಾತನಾಡಿ, “ಮದುವೆ ಮನೆಯಲ್ಲಿ ನಡೆಯುವ ಕಥೆ ಇದು. ಮದುವೆ ಮನೆಗೆ ಹೋದರೆ ಅಲ್ಲಿ ಎಮೋಷನ್, ಡ್ರಾಮಾ, ತುಂಬಾ ಕಥೆಗಳು ನಡೆಯುತ್ತಲೆ ಇರುತ್ತದೆ. ಆ ಕಥೆಗಳಲ್ಲಿ ಐದು ಚ್ಯುಸ್ ಮಾಡಿ ಸಿನಿಮಾ ಮಾಡಿದ್ದೇನೆ. ಈ ಚಿತ್ರದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಇಬ್ಬರಿಗೂ ಹೆಚ್ಚಿನ ಪ್ರಾಮುಖ್ಯತೆ ಇದೆ. ಅಕ್ಟೋಬರ್ 14ಕ್ಕೆ ಸಿನಿಮಾ ರಿಲೀಸ್ ಮಾಡುತ್ತಿದ್ದೇವೆ. ಎಲ್ಲರಿಗೂ ಇಷ್ಟವಾಗುತ್ತದೆ ಎಂದು ಭಾವಿಸಿದ್ದೇವೆ. ದಯವಿಟ್ಟು ಬೆಂಬಲ ಕೊಡಿ’ ಎಂದರು.
ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್, ಸೆಂಟಿಮೆಂಟ್ ಎಳೆಯನ್ನು ಇಟ್ಟುಕೊಂಡು ಸಿನಿಮಾ ತಯಾರಾಗಿದೆ. ಚಿತ್ರದಲ್ಲಿ ಮೇಘನಾ ಗಾಂವಕರ್, ಹಿತಾ ಚಂದ್ರಶೇಖರ್, ರಾಕೇಶ್ ಮಯ್ಯ, ಅದಿತಿ ರಾಮ್, ದೀಪ್ತಿ ನಾಗೇಂದ್ರ, ಅರುಣ್ ಬಲಾಜಿ ಮುಂತಾದವರು ಅಭಿನಯಿಸಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆ. ರಾಕೇಶ್ ಬಿ ರಾಜ್ ಕ್ಯಾಮೆರಾ, ಸಂತೋಷ್ ನಿರ್ದೇಶನದ ಜೊತೆಗೆ ಸಂಕಲನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
ಚಿತ್ರದ ಪ್ರಚಾರವನ್ನು ಜೋರಾಗಿಯೇ ನಡೆಸುತ್ತಿರುವ ಚಿತ್ರತಂಡ, ಮದುವೆಗೆ ಮನೆಗೆ ತೆರಳಿ ವಿಭಿನ್ನವಾಗಿ ಪ್ರಮೋಷನ್ ನಡೆಸುತ್ತಿದೆ. ಬರುವ ಅಕ್ಟೋಬರ್ 14ಕ್ಕೆ ಚಿತ್ರ ತೆರೆ ಮೇಲೆ ಬರಲಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.