ಶುಭಾ ಪೂಂಜಾ ನಟನೆಯ ‘ಅಂಬುಜಾ’ ಫ‌ಸ್ಟ್‌ಲುಕ್‌ ಬಿಡುಗಡೆ: ಲಂಬಾಣಿ ಗೆಟಪ್ ನಲ್ಲಿ ಶುಭಾ ಮಿಂಚು

Team Udayavani, Sep 13, 2021, 12:42 PM IST

ಶುಭಾ ಪೂಂಜಾ ನಟನೆಯ ‘ಅಂಬುಜಾ’ ಫ‌ಸ್ಟ್‌ಲುಕ್‌ ಬಿಡುಗಡೆ: ಲಂಬಾಣಿ ಗೆಟಪ್ ನಲ್ಲಿ ಶುಭಾ ಮಿಂಚು

ಶುಭಾ ಪೂಂಜಾ”ಅಂಬುಜಾ’ ಸಿನಿಮಾ ಮಾಡಲಿದ್ದಾರೆ ಎಂಬಸುದ್ದಿ ನಿಮಗೆ ಗೊತ್ತಿರಬಹುದು.ಈಗ ಆ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ. ಚಿತ್ರದ ಕಥೆಗೆ ಪೂರಕವಾಗುವಂತೆ ಚಿತ್ರತಂಡ ಫೋಟೋಶೂಟ್‌ ಮಾಡಿಸಿದೆ. ಇದು ಲಂಬಾಣಿ ಕುಟುಂಬವೊಂದರ ನೈಜ ಘಟನೆಯನ್ನಿಟ್ಟುಕೊಂಡು ಮಾಡುತ್ತಿರುವ ಸಿನಿಮಾ ಇದಾಗಿರುವುದರಿಂದ ಶುಭಾ ಪೂಂಜಾ ಲಂಬಾಣಿ ಗೆಟಪ್‌ನಲ್ಲಿ ಕಾಣಿಸಿ ಕೊಂಡಿದ್ದಾರೆ. ಬಿಡುಗಡೆಯಾಗಿರುವ ಫ‌ಸ್ಟ್‌ಲುಕ್‌ ಸ್ಟಿಲ್‌ ಸಾಕಷ್ಟು ಕಥೆಗಳನ್ನು ಹೇಳುತ್ತಿದೆ

ಕಾಶೀನಾಥ್‌ ಡಿ ಮಡಿವಾಳ್‌ “ಅಂಬುಜಾ’ ಎಂಬ ಸಿನಿಮಾ ಮೂಲಕ ನಿರ್ಮಾಪಕ ರಾಗುತ್ತಿದ್ದಾರೆ. ಕೇವಲ ನಿರ್ಮಾಪಕರಷ್ಟೇ ಅಲ್ಲ, ಕಥೆ, ಸಾಹಿತ್ಯ ಕೂಡಾ ಇವರದೇ. ಶ್ರೀನಿ ಹನುಮಂತರಾಜುಈ ಚಿತ್ರದ ನಿರ್ದೇಶಕರು.ಈ ಹಿಂದೆ “ಕೆಲವು ದಿನಗಳ ನಂತರ’ ಎಂಬ ಸಿನಿಮಾ ಮಾಡಿದ್ದ ನಿರ್ದೇಶಕನ ಜೊತೆ ಸೇರಿ ಈಗ “ಅಂಬುಜಾ’ ಮಾಡುತ್ತಿದ್ದಾರೆ.

ಇದನ್ನೂ ಓದಿ:ಮತ್ತೆ ವರ್ಕೌಟ್‌ ಮೂಡ್‌ ಗೆ ಸುದೀಪ್‌

“ಅಂಬುಜಾ ನಾನೇಬರೆದ ಕಥೆ. ಲಂಬಾಣಿ ಕುಟುಂಬದಲ್ಲಿ ನಡೆದ ನೈಜ ಘಟನೆಯನ್ನಿಟ್ಟುಕೊಂಡು ಸಿನಿಮಾ ಮಾಡುತ್ತಿದ್ದೇನೆ. ಕಥೆ ಕೇಳಿ ಶ್ರೀನಿಯವರು ಖುಷಿಯಾದರು. ಯಾವುದೇ ಬದಲಾವಣೆ ಮಾಡದೇ, ಅದಕ್ಕೆ ಚಿತ್ರಕತೆ, ಸಂಭಾಷಣೆ ರಚಿಸಿದರು. ಸಾಹಿತ್ಯದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದರು. ಇದು ಪಕ್ಕಾ ಕಮರ್ಷಿಯಲ್‌ ಸಿನಿಮಾ. ಆದರೆ, ಯಾವುದೇ ಅಶ್ಲೀಲತೆ ಇಲ್ಲದೇ ಮನೆ ಮಂದಿಯೆಲ್ಲಾ ಕುಳಿತು ನೋಡುವ ಸಿನಿಮಾ. ನನಗೆ ಮೊದಲ ಸಿನಿಮಾದಲ್ಲೇ ವಿಶ್ವಾಸ ಮೂಡಿದೆ, ಇದೊಂದು ಒಳ್ಳೆಯ ಸಿನಿಮಾವಾಗುತ್ತದೆ ಎಂದು. ಮುಂದಿನ ದಿನಗಳಲ್ಲಿ ಮತ್ತಷ್ಟು ಸಿನಿವ ಮಾಡುವ ಕನಸಿದೆ’ ಎನ್ನುತ್ತಾರೆ ನಿರ್ಮಾಪಕ ಕಾಶೀನಾಥ್‌.

ಫ‌ಸ್ಟ್‌ಲುಕ್‌ಬಗ್ಗೆ ಮಾತನಾಡುವ ನಿರ್ದೇಶಕ ಶ್ರೀನಿ “ಫೋಟೋಶೂಟ್‌ಗಾಗಿಯೇಈ ಕಾಸ್ಟ್ಯೂಮ್‌ ಅನ್ನು ರೆಡಿ ಮಾಡಿಸಿದ್ದು, ಸುಮಾರು 20 ಕೆಜಿ ಭಾರವಿದೆ’ ಎನ್ನುತ್ತಾರೆ.

ಚಿತ್ರದಲ್ಲಿ ಶುಭಾ ಪೂಂಜಾ, ಪದ್ಮಜಾ ರಾವ್‌, ಕಾಮಿಡಿಕಿಲಾಡಿ ಗೋವಿಂದೇಗೌಡ, ಕಾಮಿಡಿ ಕಿಲಾಡಿ ನಿರ್ದೇಶಕ ಶರಣಯ್ಯ, ಪ್ರಿಯಾಂಕ ಕಾಮತ್‌, ಸಂದೇಶ್‌ ಶೆಟ್ಟಿ ಅಜ್ರಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಬೆಂಗಳೂರು, ಗದಗ, ಉಡುಪಿ ಸುತ್ತಮುತ್ತ ಚಿತ್ರೀಕರಣ ನಡೆಸಲು ಸಜ್ಜಾಗಿದೆ. ಈಗಾಗಲೇ ಹಾಡುಗಳ ಧ್ವನಿ ಮುದ್ರಣ ಮುಗಿಸಿರುವ ಚಿತ್ರತಂಡ ಶೀಘ್ರದಲ್ಲೇ ಚಿತ್ರೀಕರಣಕ್ಕೆ ತೆರಳಲು ಸಿದ್ಧವಾಗಿದೆ.

ಟಾಪ್ ನ್ಯೂಸ್

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.