ಮಲಯಾಳಂನಲ್ಲಿ “ಶುಭಾ’ರಂಭ
ತ್ರಿದೇವಿ ಚಿತ್ರದ ಮೂಲಕ ಮಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆ
Team Udayavani, Feb 6, 2020, 7:04 AM IST
ಕನ್ನಡದ ನಟಿ ಶುಭಪೂಂಜಾ ತೆಲುಗು, ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು ಗೊತ್ತೇ ಇದೆ. ಈಗ ಇದೇ ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ. ಹೌದು, ಮಲಯಾಳಂ ಹಾಗು ಕನ್ನಡ ಭಾಷೆಯಲ್ಲಿ ತಯಾರಾಗುತ್ತಿರುವ “ತ್ರಿದೇವಿ’ ಎಂಬ ಚಿತ್ರದಲ್ಲಿ ಶುಭಪೂಂಜಾ ನಟಿಸುತ್ತಿದ್ದಾರೆ. ಅಶ್ವಿನ್ ಮ್ಯಾಥ್ಯೂ ಆ ಚಿತ್ರವನ್ನು ನಿರ್ದೇಶಿಸುವುದರ ಜೊತೆಯಲ್ಲಿ ನಿರ್ಮಾಣವನ್ನೂ ಮಾಡುತ್ತಿದ್ದಾರೆ.
ಅದೊಂದು ಥ್ರಿಲ್ಲರ್ ಕಮ್ ಆ್ಯಕ್ಷನ್ ಚಿತ್ರವಾಗಿದ್ದು, ಚಿತ್ರದಲ್ಲಿ ಶುಭಪೂಂಜಾ ಅವರೊಂದಿಗೆ ಇಬ್ಬರು ನಾಯಕಿಯರು ಕಾಣಿಸಿಕೊಂಡಿದ್ದಾರೆ. ಸಂಧ್ಯಾ ಹಾಗು ಜ್ಯೋತ್ಸ್ನಾರಾವ್ “ತ್ರಿದೇವಿ’ ಚಿತ್ರದಲ್ಲಿ ನಟಿಸುತ್ತಿದ್ದು, ಇದೊಂದು ಹೊಸಬಗೆಯ ಥ್ರಿಲ್ಲರ್ ಅಂಶಗಳನ್ನು ಹೊಂದಿದೆ. ಈ ಚಿತ್ರಕ್ಕಾಗಿಯೇ ಶುಭಪೂಂಜಾ, ಸಂಧ್ಯಾ ಹಾಗು ಜ್ಯೋತ್ಸ್ನಾರಾವ್ ಅವರು ಹನ್ನೆರೆಡು ದಿನಗಳ ಕಾಲ ಕಲರಿಪಯಟು ಕಲೆಯ ತರಬೇತಿ ಪಡೆದುಕೊಂಡಿದ್ದಾರೆ.
ಮೋತಿ ಎನ್ನುವ ಮಾಸ್ಟರ್ ಅವರಿಗೆ ಕಲರಿಪಯಟು ಕಲೆ ಹೇಳಿಕೊಟ್ಟಿದ್ದಾರೆ. ಚಿತ್ರದಲ್ಲಿ ಸತೀಶ್ ಖಳನಟರಾಗಿ ಕಾಣಿಸಿಕೊಂಡರೆ, ಜಯದೇವ್, ಸಂಪತ್ ಇತರರು ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕ ಅಶ್ವಿನ್ ಮ್ಯಾಥು ಅವರು ಮೂಲತಃ ಕೇರಳದವರಾಗಿದ್ದರೂ, ಬೆಂಗಳೂರಿನಲ್ಲೇ ನೆಲೆಸಿರುವುದರಿಂದ ಅವರು ಕನ್ನಡ ಹಾಗು ಮಲಯಾಳಂ ಭಾಷೆಯಲ್ಲೇ “ತ್ರಿದೇವಿ’ ಚಿತ್ರ ಕೈಗೆತ್ತಿಕೊಂಡಿದ್ದಾರೆ.
ಈ ಚಿತ್ರದಲ್ಲಿ ಶುಭಾಪೂಂಜಾ ಅವರು ಸಿನಿಮಾದೊಳಗಿನ ಸಿನಿಮಾ ನಟಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಸಂಧ್ಯಾ ಹಾಗು ಜ್ಯೋತ್ಸ್ನಾ ಕೂಡ ಸಿನಿಮಾದೊಳಗಿನ ಸಿನಿಮಾ ಸಹ ನಿರ್ದೇಶಕರಾಗಿ, ಬರಹಗಾರರಾಗಿ ನಟಿಸಿದ್ದಾರೆ. ಈ ಪೈಕಿ ಸಂಧ್ಯಾ ಹಾಗು ಜ್ಯೋತ್ಸ್ನಾ ಅವರಿಗೆ ಇದು ಮೊದಲ ಅನುಭವ. ಚಿತ್ರಕ್ಕೆ ಕುಂಜ್ ಛಾಯಾಗ್ರಹಣವಿದೆ. ಈಗಾಗಲೇ ಶೇ.70 ರಷ್ಟು ಚಿತ್ರೀಕರಣಗೊಂಡಿರುವ “ತ್ರಿದೇವಿ’ ಕೇರಳ ಹಾಗು ಕರ್ನಾಟಕದ ಹಲವು ಸ್ಥಳಗಳಲ್ಲಿ ಚಿತ್ರೀಕರಣಗೊಂಡಿದೆ.
ಇದೇ ಮೊದಲ ಸಲ ಮಲಯಾಳಂ ಚಿತ್ರದಲ್ಲಿ ನಟಿಸಿರುವ ಶುಭಪೂಂಜಾಗೆ ಸಹಜವಾಗಿಯೇ ಖುಷಿ ಇದೆ. ಮಲಯಾಳಂ ಭಾಷೆ ಅರ್ಥ ಮಾಡಿಕೊಳ್ಳುವ ಮೂಲಕ ಸಾಧ್ಯವಾದಷ್ಟು ಪಾತ್ರಕ್ಕೆ ಜೀವ ತುಂಬುವ ಪ್ರಯತ್ನ ಮಾಡಿದ್ದಾಗಿ ಹೇಳುತ್ತಾರೆ. ಸದ್ಯಕ್ಕೆ ಅವರು ನಟಿಸಿರುವ “ನರಗುಂದ ಬಂಡಾಯ’ ಚಿತ್ರ ಬಿಡುಗಡೆಗೆ ರೆಡಿಯಾಗಿದ್ದು, ಫೆಬ್ರವರಿಯಲ್ಲಿ ತೆರೆಗೆ ಬರಲು ಸಜ್ಜಾಗುತ್ತಿದೆ. ಈ ನಡುವೆ “ರೈಮ್ಸ್’ ಎಂಬ ಚಿತ್ರದಲ್ಲೂ ಶುಭ ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.