Devaru Ruju Madidanu Movie ಸುನಿ ಸಿನಿಮಾದ ನಾಯಕಿಯರಿವರು..

Team Udayavani, Oct 19, 2024, 5:33 PM IST

Simple Suni introduces Keerthi Krishna and Divita Rai in Devaru Ruju Madidanu Movie

ನಿರ್ದೇಶಕ ಸಿಂಪಲ್‌ ಸುನಿ “ದೇವರು ರುಜು ಮಾಡಿದನು’ ಚಿತ್ರ ಮಾಡಲು ಮುಂದಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಈ ಚಿತ್ರದ ಮುಹೂರ್ತ ಇದೇ ಭಾನುವಾರ ನಡೆಯುತ್ತಿದೆ. ಈ ಚಿತ್ರದ ಮೂಲಕ ನವನಟ ವೀರಾಜ್‌ ಹೀರೋ ಆಗುತ್ತಿದ್ದಾರೆ. ಈಗ ಈ ಚಿತ್ರಕ್ಕೆ ಇಬ್ಬರು ನವನಟಿಯರು ನಾಯಕಿಯರಾಗಿ ಎಂಟ್ರಿಕೊಡುತ್ತಿದ್ದಾರೆ.ಕೀರ್ತಿ ಕೃಷ್ಣ ಹಾಗೂ ದಿವಿತಾ ರೈ ಎಂಬ ನವ ನಾಯಕಿಯರನ್ನು ತಮ್ಮ ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ ಸುನಿ.

ಕೀರ್ತಿ ಕೃಷ್ಣ ನಟ ಶರಣ್‌ ಅವರ ತಂಗಿ ಮಗಳು. ಶರಣ್‌ ಇಡೀ ಕುಟುಂಬ ಸಿನಿಮಾ ರಂಗದಲ್ಲಿದೆ. ಈಗ ಅವರ ತಂಗಿ ಮಗಳು ನಾಯಕಿಯಾಗಿ ಸ್ಯಾಂಡಲ್‌ ವುಡ್‌ ಗೆ ಬಲಗಾಲಿಟ್ಟಿದ್ದಾರೆ. ದೇವರು ರುಜು ಮಾಡಿದವನು ಚಿತ್ರದಲ್ಲಿ ವೀರಾಜ್‌ ಗೆ ಜೋಡಿಯಾಗಿ ಕೀರ್ತಿ ಕೃಷ್ಣ ಬಣ್ಣ ಹಚ್ಚುತ್ತಿದ್ದಾರೆ. ಪುಷ್ಕರ್‌ ಮಲ್ಲಿಕಾರ್ಜುನಯ್ಯ ಅವರ ಸ್ಟುಡಿಯೋದಲ್ಲಿ ನಟನಾ ಕೋರ್ಸ್‌ ಕಲಿತಿರುವ ಕೀರ್ತಿ ನಾಯಕಿಯಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಸಂಗೀತವೇ ತನ್ನ ಪ್ರಪಂಚ ಎಂದು ಜೀವಿಸುವ ಕೀರ್ತಿ ಕೃಷ್ಣ ಸುಶ್ರಾವ್ಯ ಎಂಬ ಪಾತ್ರದಲ್ಲಿ ವೀಣಾ ವಾದಕಿಯಾಗಿ ಅಭಿನಯಿಸುತ್ತಿದ್ದಾರೆ.

ಇದರ ಜೊತೆಗೆ ದೇವರು ರುಜು ಮಾಡಿದನು ಸಿನಿಮಾದಲ್ಲಿ ಕೀರ್ತಿ ಕೃಷ್ಣ ಮಾತ್ರವಲ್ಲದೇ ದಿವಿತಾ ರೈ ಕೂಡ ನಾಯಕಿಯಾಗಿ ಸಾಥ್‌ ಕೊಡುತ್ತಿದ್ದಾರೆ. ಮೂಲತಃ ಮಂಗಳೂರಿನವರಾಗಿರುವ ದಿವಿತಾ, ಮಿಸ್‌ ಇಂಡಿಯಾ ಯೂನಿವರ್ಸ-2022 ಕಿರೀಟ ಮುಡಿಗೇರಿಸಿಕೊಂಡಾಕೆ. ಹಿಂದಿಯಲ್ಲಿ ಒಂದು ಚಿತ್ರ ಬಿಡುಗಡೆಗೆ ಎದುರು ನೋಡುತ್ತಿರುವ ಕಡಲತಡಿಯ ಈ ಸುಂದರಿ ದೇವರು ರುಜು ಮಾಡಿದನು ಸಿನಿಮಾ ಮೂಲಕ ನಾಯಕಿಯಾಗಿ ನಟಿಸುತ್ತಿದ್ದಾಳೆ. ಕೊಂಕಣಿ ಸಮುದಾಯಕ್ಕೆ ಸೇರಿದ ಕನ್ನಡ ಹುಡುಗಿಯಾಗಿ, ಹಾಡುಗಾರ್ತಿಯಾಗಿ ದಿವಿತಾ ರೈ ಪಾತ್ರ ಮಾಡುತ್ತಿದ್ದಾರೆ.

ಗ್ರೀನ್‌ ಹೌಸ್‌ ಮೂವೀಸ್‌ ಅಡಿಯಲ್ಲಿ ದೇವರು ರುಜು ಮಾಡಿದನು ಸಿನಿಮಾವನ್ನು ಗೋವಿಂದ್‌ ರಾಜ್‌ ಸಿಟಿ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾಗೆ ಜೆಜೆ, ಜೇಡ್‌ ಸ್ಯಾಂಡಿ ಹಾಗೂ ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.