“ಯಜಮಾನ’ನಿಗೆ ಟ್ವೀಟ್ ಮಾಡಿದ ಸಿಂಗಂ ವಿಲನ್
Team Udayavani, Jun 17, 2018, 1:10 PM IST
ಸ್ಯಾಂಡಲ್‍ವುಡ್‍ನ ಬಹು ಬೇಡಿಕೆ ನಟ ದರ್ಶನ್ ಅಭಿನಯದ “ಯಜಮಾನ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಕ್ಲೈಮ್ಯಾಕ್ಸ್ ಫೈಟಿಂಗ್ ಶೂಟಿಂಗ್ ಶುರುವಾಗಿದೆ. ದರ್ಶನ್ ಎದುರಿಗೆ ನಟ ಥಾಕೂರ್ ಅನೂಪ್ ಸಿಂಗ್ ಅಭಿನಯ ಮಾಡುತ್ತಿದ್ದು, ಈ ಬಗ್ಗೆ ಅನೂಪ್ ಸಿಂಗ್ ತಮ್ಮ ಟ್ವಿಟ್ಟರ್ ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
“ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಯಲ್ಲಿ ಅಭಿನಯ ಮಾಡುತ್ತಿರುವುದು ಬಹು ದೊಡ್ಡ ಖುಷಿಯ ವಿಚಾರ. ಹಾರ್ಡ್ ವರ್ಕ್ ಮಾಡಿರುವುದರ ಪ್ರತಿಫಲ ಇಂದು ಚಿತ್ರೀಕರಣದ ಸಮಯದಲ್ಲಿ ಕಾಣುತ್ತಿದೆ’ ಎಂದು ನಟ ಥಾಕೂರ್ ಅನೂಪ್ ಸಿಂಗ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಇದಲ್ಲದೇ ಥಾಕೂರ್ ಅನೂಪ್ ಸಿಂಗ್ ಈ ಹಿಂದೆ ಪುರಿ ಜಗನ್ನಾಥ್ ನಿರ್ದೇಶನದ “ರೋಗ್’ ಎಂಬ ಕನ್ನಡ ಚಿತ್ರದಲ್ಲಿ ವಿಭಿನ್ನ ವಿಲನ್ ಪಾತ್ರದಲ್ಲಿ ನಟಿಸಿದ್ದು, ಆ ಪಾತ್ರಕ್ಕೆ ಸಾಕಷ್ಟು ಮೆಚ್ಚುಗೆ ಕೂಡಾ ವ್ಯಕ್ತವಾಗಿತ್ತು. ಅಲ್ಲದೇ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಅವರ “ಉದ್ಘರ್ಷ’ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ.
Filming on .. nothing like the feeling of satisfaction after a hardworking day on sets! #Yajmana my next #nammakannada film! Comin soon !! pic.twitter.com/5F5MArAqTZ
— Thakur Anoop Singh (@theindianthakur) June 14, 2018
ಇನ್ನು “ಯಜಮಾನ’ ಚಿತ್ರವನ್ನು ಬಿ.ಸುರೇಶ್ ಹಾಗೂ ಶೈಲಜಾ ನಾಗ್ ನಿರ್ಮಿಸುತ್ತಿದ್ದು, ಪಿ.ಕುಮಾರ್ ಈ ಸಿನಿಮಾದ ನಿರ್ದೇಶಕರು. ಚಿತ್ರದಲ್ಲಿ ದರ್ಶನ್‌ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಚಿತ್ರಕ್ಕೆ ಹರಿಕೃಷ್ಣ ಸಂಗೀತ,”ಬಹದ್ದೂರ್’ ಚೇತನ್ ಸಂಭಾಷಣೆ, ಶ್ರೀಶ ಕೂದುವಳ್ಳಿ ಛಾಯಾಗ್ರಹಣವಿದೆ. ಚಿತ್ರದಲ್ಲಿ ರವಿಶಂಕರ್, ದೇವರಾಜ್, ಧನಂಜಯ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.