ಸೋಲ್ಡ್ ಆದ್ರು ಡ್ಯಾನಿಶ್!
Team Udayavani, Feb 20, 2022, 7:08 AM IST
ನಟ ಡ್ಯಾನಿಶ್ ಸೇಠ್ ಸದ್ದಿಲ್ಲದೇ ಹೊಸ ಚಿತ್ರ ವೊಂದರಲ್ಲಿ ನಟಿಸಿದ್ದಾರೆ. ಆ ಚಿತ್ರದ ಹೆಸರು ಸೋಲ್ಡ್. ಕಾಮಿಡಿ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಳ್ಳುವ ಡ್ಯಾನಿಶ್ ಸೇಠ್, ಈ ಚಿತ್ರದಲ್ಲಿ ಕಾಮಿಡಿಹೊರತು ಪಡಿಸಿದ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಪ್ರೇರಣಾ ಅಗರವಾಲ್‌ನಿರ್ದೇಶಿಸಿದ್ದಾರೆ. ಸಾಕಷ್ಟುಕಿರುಚಿತ್ರಗಳನ್ನು ನಿರ್ದೇಶಿಸಿಅನುಭವವಿರುವ ಪ್ರೇರಣಾ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.
ಕನ್ನಡದಲ್ಲಿ ಬೆರಳೆಣಿಕೆಯಷ್ಟು ಮಾತ್ರವಿರುವ ನಿರ್ದೇಶಕಿಯರ ಸಾಲಿಗೆ ಪ್ರೇರಣ ಸೇರಿದ್ದಾರೆ. ಚಿತ್ರದಲ್ಲಿ ನಟಿಸಿರುವ ದೀಪಂ ಕೊಹ್ಲಿ ಈ ಚಿತ್ರದ ನಿರ್ಮಾಪಕರು. “ನಮ್ಮ ಚಿತ್ರತಂಡದ ಎಲ್ಲಾ ಸದಸ್ಯರು 28ರ ಆಸುಪಾಸಿನ ವಯಸ್ಸಿನವರು. ಉತ್ಸಾಹಿ ಯುವ ತಂಡದಿಂದ ಉತ್ತಮ ಚಿತ್ರವೊಂದು ತಯಾರಾಗಿದೆ.
ಮಾರ್ಚ್ 4 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ’ ಎಂದು ನಿರ್ಮಾಪಕ ದೀಪಂ ಕೊಹ್ಲಿ ತಿಳಿಸಿದ್ದಾರೆ.
ಚಿತ್ರದಲ್ಲಿ ಒಂದೇ ಒಂದು ಹಾಡಿದ್ದು, ಈ ಚಿತ್ರಕ್ಕೆ ಜೀತ್ ಸಿಂಗ್ ಸಂಗೀತ ನೀಡಿದ್ದಾರೆ. ಸಮೀರ್ ದೇಶಪಾಂಡೆ ಛಾಯಾಗ್ರಹಣ ಮಾಡಿದ್ದಾರೆ. ಶಿವಾನಿ ಆರ್ ಬಲ್ಲುಕರಾಯ,ದೀಪಂ ಕೊಹ್ಲಿ, ಕಾವ್ಯಾ ಶೆಟ್ಟಿ,ಭರತ್ ಜೆ.ಬಿ, ಸಿದ್ಧಾರ್ಥ್ ಮಾಧ್ಯಮಿಕ, ಉಗ್ರಂ ಮಂಜು,ಭವಾನಿ ಪ್ರಕಾಶ್, ಹನುಮಂತೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.