ಗರಡಿ ಮನೆಯಲ್ಲಿ ಹೊಸ ಬದಲಾವಣೆ: ರಚಿತಾ ರಾಮ್ ಜಾಗಕ್ಕೆ ಸೋನಾಲ್ ಎಂಟ್ರಿ
Team Udayavani, Feb 10, 2022, 9:45 AM IST
ಯೋಗರಾಜ್ ಭಟ್ ನಿರ್ದೇಶನದಲ್ಲಿ “ಗರಡಿ’ ಚಿತ್ರ ಆರಂಭವಾಗಿದ್ದು ನಿಮಗೆ ಗೊತ್ತಿರಬಹುದು. ನಟ ಮತ್ತು ಸಚಿವ ಬಿ. ಸಿ ಪಾಟೀಲ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ “ಗರಡಿ’ ಚಿತ್ರದಲ್ಲಿ ಯಶಸ್ ಸೂರ್ಯ ನಾಯಕನಾಗಿ ಅಭಿನಯಿಸುತ್ತಿದ್ದು, ನಾಯಕಿಯಾಗಿ ರಚಿತಾ ರಾಮ್ ಅವರನ್ನು ಚಿತ್ರತಂಡ ಆಯ್ಕೆ ಮಾಡಿತ್ತು.
ಚಿತ್ರತಂಡ ಕೂಡ ರಚಿತಾ ರಾಮ್ ಅವರ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿತ್ತು. ಇನ್ನೇನು “ಗರಡಿ’ ಚಿತ್ರದ ಶೂಟಿಂಗ್‌ಗೆ ಹೊರಡಬೇಕು ಎನ್ನುವಷ್ಟರಲ್ಲಿ, “ಗರಡಿ’ ಮನೆಯಲ್ಲಿ ಮಹತ್ವದ ಬದಲಾವಣೆಯಾಗಿದೆ.
ಹೌದು, ಚಿತ್ರದಲ್ಲಿ ನಾಯಕಿಯಾಗಿ ರಚಿತಾ ರಾಮ್ ಅವರ ಜಾಗಕ್ಕೆ ಸೋನಾಲ್ ಮಾಂತೇರೊ ಅವರನ್ನು ಕರೆತಂದಿದೆ ಚಿತ್ರತಂಡ. ಸದ್ಯ ರಚಿತಾ ರಾಮ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬಿಝಿಯಾಗಿರುವುದರಿಂದ, ಡೇಟ್ಸ್ ಸಮಸ್ಯೆಯಿಂದಾಗಿ ಚಿತ್ರತಂಡ ಸೋನಾಲ್ ಅವರನ್ನು ನಾಯಕಿಯಾಗಿ ಕರೆತಂದಿದೆ ಎನ್ನಲಾಗುತ್ತಿದ್ದು, ಚಿತ್ರತಂಡ ಮಾತ್ರ ನಾಯಕಿಯ ಬದಲಾವಣೆಯ ಬಗ್ಗೆ ಕಾರಣ ಬಿಚ್ಚಿಟ್ಟಿಲ್ಲ.
ಇದನ್ನೂ ಓದಿ:ಕರ್ನಾಟಕ ರಣಜಿ ತಂಡಕ್ಕೆ ಮನೀಷ್ ಪಾಂಡೆ ನಾಯಕ
ಸದ್ಯ ಸರಳವಾಗಿ ಮುಹೂರ್ತವನ್ನು ನೆರವೇರಿಸಿರುವ “ಗರಡಿ’ ಚಿತ್ರತಂಡ ಶೀಘ್ರದಲ್ಲಿಯೇ ಚಿತ್ರದ ಚಿತ್ರೀಕರಣಕ್ಕೆ ಹೊರಡುವ ಯೋಚನೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.