Just Married: ಮಚ್ಚನಿಗೆ ಕಿಚ್ಚನ ಸಾಥ್; ʼಜಸ್ಟ್ ಮ್ಯಾರೀಡ್ʼನಿಂದ ಹಾಡು ಬಂತು
Team Udayavani, Jan 16, 2025, 4:30 PM IST
ಜಸ್ಟ್ ಮ್ಯಾರೀಡ್ ಚಿತ್ರದ ಹಾಡೊಂದು ಸಂಕ್ರಾಂತಿ ಸಮಯದಲ್ಲಿ ಬಿಡುಗಡೆಯಾಗಿದೆ. ಕೇಳ್ಳೋ ಮಚ್ಚಾ .. ಎಂಬ ಎರಡನೇ ಗೀತೆಯನ್ನು ಬಿಡುಗಡೆ ಮಾಡಿದೆ. ನಟ ಕಿಚ್ಚ ಸುದೀಪ್ ಈ ಹಾಡನ್ನು ಬಿಡುಗಡೆ ಮಾಡಿ ಶುಭಕೋರಿದ್ದಾರೆ.
ಕೇಳ್ಳೋ ಮಚ್ಚಾ ಹಾಡಿಗೆ ನಾಗಾರ್ಜುನ ಶರ್ಮಾ ಸಾಹಿತ್ಯ ರಚನೆ ಮಾಡಿದ್ದು, ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಗಾಯಕ ನಕಾಶ್ ಅಜೀಜ್ ಧ್ವನಿ ಆಗಿದ್ದಾರೆ.
ಸಿ. ಆರ್. ಬಾಬಿ ನಿರ್ದೇಶನದ ಜಸ್ಟ್ ಮ್ಯಾರೀಡ್ ಕೌಟುಂಬಿಕ ಬಾಂಧವ್ಯಗಳ ಮೌಲ್ಯವನ್ನು ತಿಳಿಸುವ ರೊಮ್ಯಾಂಟಿಕ್ ಡ್ರಾಮಾ ಚಿತ್ರವಾಗಿದ್ದು, ಇದರಲ್ಲಿ ಶೈನ್ ಶೆಟ್ಟಿ, ಅಂಕಿತಾ ಅಮರ್, ಶೃತಿ ಹರಿಹರನ್, ದೇವರಾಜ್, ಶ್ರುತಿ, ಅನೂಪ್ ಭಂಡಾರಿ, ಅಚ್ಯುತ್ ಕುಮಾರ್ ಮುಂತಾದವರು ನಟಿಸಿರುತ್ತಾರೆ.
ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿರುತ್ತಾರೆ ಹಾಗೂ ಸಿ. ಆರ್. ಬಾಬಿ ಮತ್ತು ಬಿ. ಅಜನೀಶ್ ಲೋಕನಾಥ್ ಆಬ್ಸ್ ಸ್ಟುಡಿಯೋಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು
Saif Ali Khan: ನಟ ಸೈಫ್ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು
ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.