‘ವರದ’ನಿಗೆ ಮುರಳಿ ಸಾಥ್: ಓಂ ಹರಿ ಹರಿ ಓಂ ಹಾಡು ಬಂತು
Team Udayavani, Jan 23, 2022, 11:44 AM IST
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ’ ಚಿತ್ರಕ್ಕಾಗಿ ನಂದೀಶ್ ಅವರು ಬರೆದಿರುವ “ಓಂ ಹರಿ ಹರಿ ಓಂ’ ಎಂಬ ಹಾಡನ್ನು ಸರಿಗಮಪ ಖ್ಯಾತಿಯ ಅಶ್ವಿನ್ ಶರ್ಮ ಹಾಡಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋವನ್ನು ನಟ ಶ್ರೀಮುರಳಿ ಬಿಡುಗಡೆ ಮಾಡಿದ್ದಾರೆ. ಉದಯಪ್ರಕಾಶ್ ನಿರ್ದೇಶನ ಹಾಗೂ ಪ್ರದೀಪ್ ವರ್ಮ ಸಂಗೀತ ನೀಡಿರುವ ಈ ಹಾಡನ್ನು ಅಶ್ವಿನ್ ಶರ್ಮ ಹಾಡಿದ್ದಾರೆ.
ಜನವರಿ 28 ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಕೊರೊನಾ ಕಾರಣದಿಂದ ಚಿತ್ರಮಂದಿರಗಳಲ್ಲಿ ಐವತ್ತರಷ್ಟು ಭರ್ತಿಗೆ ಮಾತ್ರ ಸರ್ಕಾರ ಒಪ್ಪಿಗೆ ನೀಡಿದೆ. ಹಾಗಾಗಿ ನೂರರಷ್ಟು ಭರ್ತಿಗೆ ಒಪ್ಪಿಗೆ ಸಿಕ್ಕ ಕೂಡಲೆ ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎನ್ನುತ್ತಾರೆ ಉದಯಪ್ರಕಾಶ್.
ಇದನ್ನೂ ಓದಿ:ಪ್ರಣಯ ರಾಜನ ಕನಸಿನ ಕೂಸು ‘ಆರ್ಟ್ ಎನ್ ಯು’
ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಸಹ ನಿರ್ಮಾಪಕರು ಸುನಿತಾ ಪ್ರಕಾಶ್. ಕೆ.ಕಲ್ಯಾಣ್ , ನಂದೀಶ್ ಹಾಗೂ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವಿನಾಯಕ ರಾಮ್ ಸಂಭಾಷಣೆ ಬರೆದಿದ್ದಾರೆ. ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್, ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ವಿನೋದ್ ಪ್ರಭಾಕರ್ ಅವರ ತಂದೆ ಪಾತ್ರದಲ್ಲಿ ಹಿರಿಯ ನಟ ಚರಣ್ ರಾಜ್ ನಟಿಸಿದ್ದಾ. ಅಮಿತ ಈ ಚಿತ್ರದ ನಾಯಕಿ. ಅನಿಲ್ ಸಿದ್ದು, ಎಂ.ಕೆ.ಮಠ, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.