ಅವತಾರ್ ಪುರುಷನ ಹಾಡು ಶುರು
Team Udayavani, Sep 16, 2020, 2:29 PM IST
ಲಾಕ್ ಡೌನ್‌ತೆರವಾಗುತ್ತಿದ್ದಂತೆ ಅನೇಕನಟ-ನಟಿಯರು ಚಿತ್ರೀಕರಣದತ್ತ ವಾಲುತ್ತಿದ್ದಾರೆ. ಈ ಸಾಲಿಗೆ ಈಗ ನಟ ಶರಣ್ ಕೂಡಾ ಸೇರುತ್ತಿದ್ದಾರೆ. ಶರಣ್ ಈಗ ಚಿತ್ರೀಕರಣದತ್ತ ಮುಖ ಮಾಡಿದ್ದಾರೆ. ಅದು “ಅವತಾರ್ ಪುರುಷ’ ಸಿನಿಮಾ ಮೂಲಕ. ನಿಮಗೆ ಗೊತ್ತಿರುವಂತೆ ಶರಣ್ “ಅವತಾರ್ ಪುರುಷ’ ಎಂಬ ಸಿನಿಮಾ ಮಾಡುತ್ತಿದ್ದಾರೆ.
ಇನ್ನೇನು ಚಿತ್ರೀಕರಣ ಪೂರ್ಣವಾಗುವ ಹಂತಕ್ಕೆ ಬರುತ್ತಿದ್ದಾಗ ಕೋವಿಡ್ ಲಾಕ್‌ಡೌನ್ ಜಾರಿಯಾಗಿದ್ದರಿಂದ “ಅವತಾರ್ ಪುರುಷ’ ಚಿತ್ರೀಕರಣ ನಿಂತು ಹೋಗಿತ್ತು. ಈಗ ಮತ್ತೆ ಚಿತ್ರೀಕರಣಆರಂಭವಾಗಿದೆ. ಸೆ.14ರಿಂದ ಚಿತ್ರೀಕರಣ ಆರಂಭವಾಗಿದ್ದು, ಮೋಹನ್ ಬಿ.ಕೆರೆ ಸ್ಟುಡಿಯೋದಲ್ಲಿ ನಡೆಯುತ್ತಿದೆ.
ಮೊದಲ ದಿನ ಮಾತಿನ ಭಾಗದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಇಂದಿನಿಂದ ಹಾಡಿನ ಚಿತ್ರೀಕರಣ ಮಾಡಲಿದೆ. ಅದಕ್ಕೆ ಭರ್ಜರಿ ತಯಾರಿ ಕೂಡಾ ನಡೆಯುತ್ತಿದೆ. “ಅವತಾರ್ ಪುರುಷ’ ಚಿತ್ರವನ್ನು ಸಿಂಪಲ್ ಸುನಿ ನಿರ್ದೇಶನ ಮಾಡುತ್ತಿದ್ದು, ಪುಷ್ಕರ್ ಬ್ಯಾನರ್‌ನಲ್ಲಿ ಈ ಚಿತ್ರನಿರ್ಮಾಣವಾಗುತ್ತಿದೆ. ಶರಣ್‌ಗೆ ನಾಯಕಿಯಾಗಿ ಆಶಿಕಾ ರಂಗನಾಥ್ ನಟಿಸುತ್ತಿದ್ದಾರೆ. ಉಳಿದಂತೆ ಈ ಚಿತ್ರದಲ್ಲಿ ಶ್ರೀನಗರಕಿಟ್ಟಿ, ಸಾಯಿಕುಮಾರ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.
ಮತ್ತೆ ಚಿತ್ರೀಕರಣ ಆರಂಭಿಸಿರುವ ಬಗ್ಗೆ ಮಾತನಾಡುವ ನಿರ್ಮಾಪಕ ಪುಷ್ಕರ್, “ಅವತಾರ್ ಪುರುಷ’ ಚಿತ್ರೀಕರಣ ಮತ್ತೆಆರಂಭಿಸಿದ್ದೇವೆ. ಸಕಲ ಮುನ್ನೆಚ್ಚರಿಕೆಯೊಂದಿಗೆ ಚಿತ್ರೀಕರಣ ಆರಂಭಿಸಿದ್ದು, ಆರಾಮವಾಗಿ ನಡೆಯುತ್ತಿದೆ’ ಎನ್ನುತ್ತಾರೆ. “ಅವತಾರ್ ಪುರುಷ’ ಚಿತ್ರವನ್ನು ಡಿಸೆಂಬರ್‌ನಲ್ಲಿ ತೆರೆಗೆ ತರುವ ಆಲೋಚನೆ ಚಿತ್ರ ತಂಡಕ್ಕಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.