ಅರ್ಜುನನ ಪಾತ್ರಕ್ಕೆ ಸೋನು ಫಿಕ್ಸ್
Team Udayavani, Aug 22, 2017, 6:31 PM IST
ದರ್ಶನ್ ಅಭಿನಯದ 50ನೇ ಚಿತ್ರವಾದ “ಕುರುಕ್ಷೇತ್ರ’ದಲ್ಲಿ ಯಾರ್ಯಾರು ನಟಿಸುತ್ತಾರೆ ಎಂಬ ಕುತೂಹಲಕ್ಕೆ ಬಹುತೇಕ ತೆರೆಬಿದ್ದಿತ್ತು. ಆದರೆ, ಚಿತ್ರದಲ್ಲಿ ಮಧ್ಯಮ ಪಾಂಡವ ಅರ್ಜುನನ ಪಾತ್ರವನ್ನು ಯಾರು ಮಾಡುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಚಿತ್ರತಂಡವು ಈ ಪಾತ್ರಕ್ಕಾಗಿ ಸೂಕ್ತ ಕಲಾವಿದನ ಹುಡುಕಾಟದಲ್ಲಿದ್ದು, ಈಗ ಆ ಪಾತ್ರವನ್ನು ಬಾಲಿವುಡ್ ನಟ ಸೋನು ಸೂದ್ ಮಾಡುತ್ತಿದ್ದಾರೆ ಎಂಬ ಸುದ್ದಿ ಬಂದಿದೆ. “ಕುರುಕ್ಷೇತ್ರ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿ ಈಗಾಗಲೇ ಹಲವು ದಿನಗಳೇ ಆಗಿವೆ.
ಆದರೆ, ಅರ್ಜುನನ ಪಾತ್ರಕ್ಕೆ ಆಯ್ಕೆಯಾಗಿರಲಿಲ್ಲ. ಈಗ ಆ ಪಾತ್ರವನ್ನು ಸೋನು ಸೂದ್ ಮಾಡಲಿದ್ದಾರಂತೆ. ಸೋನುಗೆ ಕನ್ನಡ ಚಿತ್ರರಂಗ ಹೊಸದೇನಲ್ಲ. ದ್ವಾರಕೀಶ್ ನಿರ್ಮಾಣದ, ಸುದೀಪ್ ಅಭಿನಯದ “ವಿಷ್ಣುವರ್ಧನ’ ಚಿತ್ರದಲ್ಲಿ ಸೋನು ಒಂದು ಪ್ರಮುಖ ಪಾತ್ರ ಮಾಡಿದ್ದರು. ಆದ ನಂತರ ಅವರು ಯಾವುದೇ ಕನ್ನಡ ಚಿತ್ರದಲ್ಲೂ ನಟಿಸಿರಲಿಲ್ಲ. ಈಗ “ಕುರುಕ್ಷೇತ್ರ’ದಲ್ಲಿ ನಟಿಸುವ ಮೂಲಕ ಅವರು ಕನ್ನಡಕ್ಕೆ ವಾಪಸ್ಸಾಗಿದ್ದಾರೆ.
ಪಾಂಡವರ ಪೈಕಿ ಶಶಿಕುಮಾರ್ ಅವರು ಧರ್ಮರಾಯನ ಪಾತ್ರ ಮಾಡಿದರೆ, ಭೀಮನ ಪಾತ್ರದಲ್ಲಿ ದಾನಿಶ್ ಅಖ್ತರ್ ನಟಿಸುತ್ತಿದ್ದು, ಅರ್ಜುನನ ಪಾತ್ರಕ್ಕೆ ಸೋನು ಸೂದ್ ಆಯ್ಕೆಯಾಗಿದ್ದಾರೆ. ಇನ್ನು ನಕುಲ-ಸಹದೇವರಾಗಿ ಯಶಸ್ ಮತ್ತು ಚಂದನ್ ನಟಿಸುತ್ತಿದ್ದಾರಂತೆ. ಇನ್ನು ಕೌರವರ ಪೈಕಿ ದರ್ಶನ್ ಅವರು ದುರ್ಯೋಧನನಾಗಿ ಕಾಣಿಸಿಕೊಳ್ಳುತ್ತಿದ್ದು, ದುಶ್ಯಾಸನನಾಗಿ ರವಿಚೇತನ್ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಕರ್ಣನಾಗಿ ಅರ್ಜುನ್ ಸರ್ಜಾ, ಶಕುನಿಯಾಗಿ ರವಿಶಂಕರ್ ನಟಿಸುತ್ತಿದ್ದಾರೆ.
ಇದಲ್ಲದೆ ಚಿತ್ರದಲ್ಲಿ ಸಾಯಿಕುಮಾರ್, ಶ್ರೀನಾಥ್, ಜಿ.ಕೆ. ಶ್ರೀನಿವಾಸಮೂರ್ತಿ, ಲಕ್ಷ್ಮೀ, ಸ್ನೇಹ, ಹರಿಪ್ರಿಯಾ, ನಿಖೀಲ್ ಕುಮಾರ್, ಅದಿತಿ ಆರ್ಯ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. “ಕುರುಕ್ಷೇತ್ರ’ ಚಿತ್ರಕ್ಕೆ ಜಯನನ್ ವಿನ್ಸೆಂಟ್ ಛಾಯಾಗ್ರಹಣ, “ಕಿಂಗ್ ಸಾಲೋಮನ್’ ರವಿ ಸಾಹಸ, ಹರಿಕೃಷ್ಣ ಸಂಗೀತ, ಜೊ.ನಿ.ಹರ್ಷ ಸಂಕಲನ ಚಿತ್ರಕ್ಕಿದೆ. ಜಿ.ಕೆ. ಭಾರವಿ ಅವರು ಚಿತ್ರಕಥೆಯನ್ನು ರಚಿಸಿದ್ದು, ಯೋಜನಾ ನಿರ್ದೇಶಕರಾಗಿ ಜಯಶ್ರೀದೇವಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಹಿರಿಯ ನಿರ್ದೇಶಕ ನಾಗಣ್ಣ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರ ಥ್ರಿಡಿಯಲ್ಲಿ ಕೂಡಾ ತಯಾರಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
Chowkidar Movie: ಶೂಟಿಂಗ್ ಮುಗಿಸಿದ ಚೌಕಿದಾರ್
KD Movie: ಪ್ರೇಮ್ ಕೆಡಿಗೆ ಅಜಯ್ ದೇವಗನ್ ಸಾಥ್; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.