‘ವಸುಂಧರ ದೇವಿ’ಯಾದ ಸೋನು ಗೌಡ
Team Udayavani, Oct 20, 2022, 2:01 PM IST
ಸೋನು ಗೌಡ ಸದ್ದಿಲ್ಲದೇ ಹೊಸ ಸಿನಿಮಾವೊಂದರ ಚಿತ್ರೀಕರಣ ಮುಗಿಸಿದ್ದಾರೆ. ಅದು “ವಸುಂಧರ ದೇವಿ’. ಧರ್ಮ ಕೀರ್ತಿರಾಜ್ ಈ ಚಿತ್ರದ ನಾಯಕ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಮಹೇಶ್ ಚಿನ್ಮಯ್ ಈ ಚಿತ್ರದ ನಿರ್ದೇಶಕರು.
ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಮಹೇಶ್, “ಇದು ನನ್ನ ನಿರ್ದೇಶನದ ನಾಲ್ಕನೇ ಚಿತ್ರ. ಧರ್ಮ ಕೀರ್ತಿರಾಜ್ ಅವರೊಡನೆ ಇದು ಎರಡನೇ ಚಿತ್ರ. “ವಸುಂಧರ ದೇವಿ’ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಮುಖ್ಯಮಂತ್ರಿಗಳ ಮಗಳೊಬ್ಬಳು ತಾನು ಮುಖ್ಯಮಂತ್ರಿ ಆಗಬೇಕೆಂಬ ಆಸೆಯಿಂದ ಮುಖ್ಯಮಂತ್ರಿ ಆಗುತ್ತಾಳೆ. ನಂತರ ಆಕೆಯ ಕೊಲೆಯಾಗುತ್ತದೆ. ಆ ಕೊಲೆ ಮಾಡಿದ್ದು ಯಾರು? ಎಂದು ಕಂಡು ಹಿಡಿಯಲು ತನಿಖಾಧಿಕಾರಿ ಬರುತ್ತಾರೆ. ಆ ಪಾತ್ರದಲ್ಲಿ ಧರ್ಮ ಕೀರ್ತಿರಾಜ್ ಅಭಿನಯಿಸಿದ್ದಾರೆ. “ವಸುಂಧರ ದೇವಿ’ ಪಾತ್ರದಲ್ಲಿ ಸೋನು ಗೌಡ ನಟಿಸಿದ್ದಾರೆ. ಗೋವಿಂದೇ ಗೌಡ, ರೂಪೇಶ್, ಪೂಜಾ, ಸೆವೆನ್ ರಾಜ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆಯಿದೆ’ ಎಂದು ವಿವರಿಸಿದರು.
ನಾಯಕ ಧರ್ಮಗೆ ಈ ಚಿತ್ರದ ಮೂಲಕ ಒಂದು ಬ್ರೇಕ್ ಸಿಗುವ ನಿರೀಕ್ಷೆ ಇದೆ. “ನಾನು ಈ ಹಿಂದೆ ನಟಿಸಿರುವ ಚಿತ್ರಗಳಿಗಿಂತ ಈ ಚಿತ್ರದ ಪಾತ್ರ ವಿಭಿನ್ನವಾಗಿದೆ. ನನ್ನ ಹೇರ್ ಸ್ಟೈಲ್ ಕೂಡಾ ಈ ಚಿತ್ರಕ್ಕಾಗಿ ಬದಲಿಸಿಕೊಂಡಿದ್ದೇನೆ. ಮಹೇಶ್ ಒಂದೊಳ್ಳೆಯ ಚಿತ್ರ ನಿರ್ದೇಶನ ಮಾಡಿದ್ದಾರೆ. ಅಶೋಕ್ ನಿರ್ಮಾಣ ಮಾಡಿದ್ದಾರೆ. ಸೋನು ಗೌಡ ಸೇರಿದಂತೆ ಎಲ್ಲಾ ಕಲಾವಿದರು ಚೆನ್ನಾಗಿ ನಟಿಸಿದ್ದಾರೆ’ ಎಂದರು.
ನಿರ್ಮಾಪಕ ಅಶೋಕ್ ಕವೇಟಿ ಈ ಚಿತ್ರವನ್ನು ನಿರ್ಮಿಸುವ ಜೊತೆಗೆ ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡಿದ್ದಾರಂತೆ. ಚಿತ್ರಕ್ಕೆ ವಿನು ಮನಸು ಹಿನ್ನೆಲೆ ಸಂಗೀತ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.