ರಂಗಭೂಮಿ ಪ್ರತಿಭೆಗಳು ಪೋಣಿಸಿದ ಸೂಜಿದಾರ
Team Udayavani, Apr 29, 2019, 3:00 AM IST
ತನ್ನ ಶೀರ್ಷಿಕೆ ಮತ್ತು ವಿಭಿನ್ನ ಕಥಾಹಂದರದ ಮೂಲಕ ಚಂದನವನದ ಒಂದಷ್ಟು ಸಿನಿಪ್ರಿಯರ ಗಮನ ಸೆಳೆದಿರುವ ‘ಸೂಜಿದಾರ’ ಚಿತ್ರ ತೆರೆಗೆ ಬರಲು ತೆರೆಮರೆಯಲ್ಲಿ ಸಿದ್ದತೆ ನಡೆಸುತ್ತಿದೆ. ಸದ್ಯ ಚಿತ್ರದ ಪ್ರಮೋಷನ್ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ ಇತ್ತೀಚೆಗ ಚಿತ್ರದ ಆಡಿಯೋವನ್ನು ಬಿಡುಗಡೆ ಮಾಡಿದೆ.
ನಟ ನೀನಾಸಂ ಸತೀಶ್, ನಿರ್ದೇಶಕ ಬಿ.ಎಂ ಗಿರಿರಾಜ್ ಸೇರಿದಂತೆ ಚಿತ್ರರಂಗದ ಹಲವು ಗರ್ಣಯರ ಸಮ್ಮುಖದಲ್ಲಿ ‘ಸೂಜಿದಾರ’ ಚಿತ್ರದ ಹಾಡುಗಳು ಹೊರಬಂದಿವೆ. ಇನ್ನೊಂದು ವಿಶೇಷವೆಂದರೆ, ತೆರೆಯ ಮುಂದೆ ಮತ್ತು ತೆರೆಯ ಹಿಂದೆ ಬಹುತೇಕ ರಂಗಭೂಮಿ ಪ್ರತಿಭೆಗಳೆ ಸೇರಿ ‘ಸೂಜಿದಾರ’ ಚಿತ್ರವನ್ನು ನಿರ್ಮಿಸಿದ್ದಾರೆ.
ಹಲವು ವರ್ಷಗಳಿದ ರಂಗಭೂಮಿಯಲ್ಲಿ ಸಕ್ರಿಯರಾಗಿರುವ, ಹಲವು ಚಿತ್ರಗಳಲ್ಲಿ ಸಹನಟನಾಗಿ ವಿವಿಧ ಪಾತ್ರಗಳಿಗೆ ಬಣ್ಣ ಹಚ್ಚಿದ ಅನುಭವವಿರುವ ನಟ ಯಶವಂತ್ ಶೆಟ್ಟಿ ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇವರಿಗೆ ನಾಯಕಿಯಾಗಿ ಹರಿಪ್ರಿಯಾ ಜೋಡಿಯಾಗಿದ್ದಾರೆ.
ಉಳಿದಂತೆ ಅಚ್ಯುತಕುಮಾರ್, ಸುಚೇಂದ್ರ ಪ್ರಸಾದ್, ಶ್ರೇಯಾ ಅಂಚನ್, ಚಿತ್ರದ ಹಾಡುಗಳಿಗೆ ನೀನಾಸಂ ಪ್ರತಿಭೆ ಶ್ರೀಧರ್ ಹೆಗ್ಗೊಡು -ದಿಗ್ವಿಜಯ ಹೆಗ್ಗೊಡು ಸಂಗೀತ ಸಂಯೋಜಿಸಿದ್ದಾರೆ. ಪ್ರದೀಪ್ ವರ್ಮ ಹಿನ್ನಲೆ ಸಂಗೀತ ನೀಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಮೌನೇಶ್ ಬಡಿಗೇರ್, ‘ಬದುಕಿನ ಸಂಕೀರ್ಣ ಆಯಾಮಗಳನ್ನು ಸೇರಿಸಿಕೊಂಡು ಚಿತ್ರ ಮಾಡಲಾಗಿದೆ.
ಸಮಾಜದ ಸುತ್ತ ಹಲವರು ನಾನಾ ರೀತಿಯ ಬದುಕು – ಬವಣೆಗಳನ್ನು ಅನುಭಸುತ್ತಿದ್ದಾರೆ. ಅಂತಹುದೆ ಕೆಲವು ಅಂಶಗಳನ್ನು ತೆಗೆದುಕೊಳ್ಳಲಾಗಿದೆ. ಇಲ್ಲಿಯವರೆಗೂ ಕಾಣಿಸಿದ ವಿಭಿನ್ನ ಪಾತ್ರಕ್ಕೆ ನಾಯಕಿ ಹರಿಪ್ರಿಯಾ ಬಣ್ಣ ಹಚ್ಚಿದ್ದಾರೆ. ಚಿತ್ರದ ಬಗ್ಗೆ ಎಲ್ಲಾ ಕಡೆಗಳಿಂದಲೂ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಶೀಘ್ರದಲ್ಲಿಯೇ ಚಿತ್ರವನ್ನು ಜನರ ಮುಂದೆ ತರಲಿದ್ದೇವೆ’ ಎಂದರು.
ಸಿನಿ ಸ್ನೇಹ ಟಾಕೀಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ‘ಸೂಜಿದಾರ’ ಚಿತ್ರವನ್ನು ಅಭಿಜಿತ್ ಕೋಟೆಗಾರ್ ಮತ್ತು ಸಚ್ಚೀಂದ್ರನಾಥ್ ನಾಯಕ್ ಜಂಟಿಯಾಗಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಅಶೋಕ್. ಡಿ ರಾಮನ್ ಛಾಯಾಗ್ರಹಣ, ಎಲ್. ಮೋಹನ್ ಸಂಕಲನ ಕಾರ್ಯವಿದೆ.
ಸದ್ಯ ಬಿಡುಗಡೆಯಾಗಿರುವ ‘ಸೂಜಿದಾರ’ದ ಟೀಸರ್, ಹಾಡುಗಳು ನಿಧಾನವಾಗಿ ಪ್ರೇಕ್ಷಕರನ್ನು ಸೆಳೆಯುತ್ತಿದ್ದು, ಬಹುತೇಕ ರಂಗಭೂಮಿ ಪ್ರತಿಭೆಗಳ ಕೈಯಲ್ಲಿ ಮೂಡಿರುವ ‘ಸೂಜಿದಾರ’ ಎಷ್ಟರ ಮಟ್ಟಿಗೆ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಅನ್ನೋದು ಮೇ ತಿಂಗಳ ಅಂತ್ಯದೊಳಗೆ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.