ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Team Udayavani, Dec 18, 2024, 3:02 PM IST
ಬೆಂಗಳೂರು: ನಟ ಶಿವರಾಜ್ ಕುಮಾರ್ (Shiva Rajkumar) ಅನಾರೋಗ್ಯ ಸಂಬಂಧ ಸರ್ಜರಿಗಾಗಿ ಬುಧವಾರ (ಡಿ.18 ರಂದು) ರಾತ್ರಿ ಅಮೆರಿಕಾಗೆ ತೆರಳಿದ್ದಾರೆ.
ಚಿಕಿತ್ಸೆಗೆ ತೆರಳುವ ಮುನ್ನ ಶಿವಣ್ಣ ಮನೆಯಲ್ಲಿ ಪೂಜೆ ಮಾಡಿಸಿದ್ದು, ಈ ಪೂಜಾ ಕಾರ್ಯಕ್ರಮದಲ್ಲಿ ಹಲವರು ಭಾಗಿಯಾಗಿ ಶಿವಣ್ಣ ಬೇಗ ಗುಣಮುಖರಾಗಿ ಬರಲಿ ಎಂದು ಆಶಿಸಿದ್ದಾರೆ.
ಇತ್ತೀಚೆಗಷ್ಟೇ ಶಿವಣ್ಣ ತಮ್ಮ ಅನಾರೋಗ್ಯದ ಬಗ್ಗೆ ಮಾಧ್ಯಮದವರ ಬಳಿ ಹೇಳಿಕೊಂಡಿದ್ದರು. ಶೀಘ್ರದಲ್ಲೇ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಹೇಳಿದ್ದರು. ಇದಾದ ಬಳಿಕ ಪತ್ನಿ ಜತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ತಿಮ್ಮಪ್ಪನಿಗೆ ಮುಡಿಕೊಟ್ಟಿದ್ದರು.
ಡಿಸೆಂಬರ್ 24 ರಂದು ಸರ್ಜರಿ ಇದೆ. ಸರ್ಜರಿ ಆದ ಬಳಿಕ ನಾನು ಉಪೇಂದ್ರ ಅವರ ʼಯುಐʼ ಸಿನಿಮಾ ನೋಡುತ್ತೇನೆ ಎಂದು ಶಿವಣ್ಣ ಇತ್ತೀಗಷ್ಟೇ ಹೇಳಿದ್ದರು.
ಅಮೆರಿಕಾಗೆ ಹೋಗುವ ಮುನ್ನ ಶಿವರಾಜ್ ತಮ್ಮ ನಿವಾಸದಲ್ಲಿ ಪೂಜೆ ಮಾಡಿಸಿದ್ದಾರೆ. ಈ ಪೂಜಾ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ (Kiccha Sudeep), ಮಾಜಿ ಸಚಿವ ಬಿಸಿ ಪಾಟೀಲ್, ಸಚಿವ ಮಧು ಬಂಗಾರಪ್ಪ, ನಿರ್ಮಾಪಕ ಕಾರ್ತಿಕ್ ಗೌಡ ಸೇರಿದಂತೆ ಸೇರಿದಂತೆ ಚಿತ್ರರಂಗ, ರಾಜಕೀಯದ ಸ್ನೇಹಿತರು ಶಿವರಾಜ್ ಕುಮಾರ್ ನಿವಾಸಕ್ಕೆ ಬಂದು ಶೀಘ್ರ ಗುಣಮುಖರಾಗಲಿ ಎಂದು ಶುಭ ಹಾರೈಸಿದ್ದಾರೆ.
ಸರ್ಜರಿ ಬಳಿಕ ಒಂದು ತಿಂಗಳು ಶಿವಣ್ಣ ಅಮೆರಿಕಾದಲ್ಲೇ ಇರಲಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ರಿಲೀಸ್ ಆದ ʼಭೈರತಿ ರಣಗಲ್ʼ ಪ್ರೇಕ್ಷಕರ ಮನಗೆದ್ದಿತ್ತು. ಮುಂದೆ ಶಿವರಾಜ್ ಕುಮಾರ್ ʼ45ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.