![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Oct 22, 2023, 10:59 AM IST
ಬೆಂಗಳೂರು: ಕೆಜಿಎಫ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ ನೀಡಿದ್ದ ಕರಾವಳಿ ಕುವರಿ ಶ್ರೀನಿಧಿ ಶೆಟ್ಟಿ ಬಳಿಕ ತಮಿಳಿನ ಕೋಬ್ರಾ ಸಿನಿಮಾದಲ್ಲಿ ನಟಿಸಿದ್ದರು. ಬಳಿಕ ಯಾವುದೇ ಸಿನಿಮಾ ಒಪ್ಪಿಕೊಳ್ಳದ ಶ್ರೀನಿಧಿ ಇದೀಗ ಮತ್ತೊಂದು ದೊಡ್ಡ ಸಿನಿಮಾ ಮೂಲಕ ಕನ್ನಡ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.
ಹೌದು, ಕಿಚ್ಚ ಸುದೀಪ್ ಅವರ 47ನೇ ಚಿತ್ರಕ್ಕೆ ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ತಮಿಳಿನ ಖ್ಯಾತ ಸಿನಿಮಾ ನಿರ್ಮಾಣ ಸಂಸ್ಥೆಯಾದ ಸತ್ಯ ಜ್ಯೋತಿ ಪಿಕ್ಚರ್ಸ್ ಕಿಚ್ಚ ಸುದೀಪ್ ಅವರ K47 ಚಿತ್ರ ನಿರ್ಮಿಸುತ್ತಿದೆ. ಈ ಹಿಂದೆ ತಮಿಳಿನಿಲ್ಲಿ ಆಟೋಗ್ರಾಫ್ ಸಿನಿಮಾ ನಿರ್ದೇಶನ ಮಾಡಿದ್ದ ಚೇರನ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಮೂಲಕ ಶ್ರೀನಿಧಿ ಶೆಟ್ಟಿ ಅವರು ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರದಲ್ಲಿ ಮಿಂಚಲು ರೆಡಿಯಾಗಿದ್ದಾರೆ.
Need all your blessings for this new beginning 🙏
Thank you @SathyaJyothi n @directorcheran sir, for this wonderful opportunity 🙏🏻
Excited to be sharing the screen with our very own BAADSHAH @KicchaSudeep sir ✨️ pic.twitter.com/vqF6xoXDpd— Srinidhi Shetty (@SrinidhiShetty7) October 21, 2023
ಸದ್ಯ ಕಿಚ್ಚ ಸುದೀಪ್ ಅವರು ಮ್ಯಾಕ್ಸ್ ಚಿತ್ರೀಕರಣದಲ್ಲಿ ಬ್ಯೂಸಿಯಾಗಿದ್ದಾರೆ. ತಮಿಳಿನ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್ ಧಾನು ಅವರ ನಿರ್ಮಾಣದ ಚಿತ್ರಕ್ಕೆ ವಿಜಯ್ ಕಾರ್ತಿಕೇಯನ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇದಾದ ಬಳಿಕ K47 ಚಿತ್ರ ಆರಂಭವಾಗಲಿದೆ.
ತೆಲುಸು ಕದಾ ಎಂದ ಶ್ರೀನಿಧಿ: ಕೆಲವೇ ದಿನಗಳ ಹಿಂದೆ ಶ್ರೀನಿಧಿ ಶೆಟ್ಟಿ ಅವರು ತೆಲುಗು ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಖ್ಯಾತ ಫ್ಯಾಶನ್ ಡಿಸೈನರ್ ನೀರಜಾ ಕೋನಾ ಅವರು ನಿರ್ದೇಶನ ಮಾಡುತ್ತಿರುವ ತೆಲುಸು ಕದಾ ಚಿತ್ರದಲ್ಲಿ ಶ್ರೀನಿಧಿ ಶೆಟ್ಟಿ ನಟಿಸುತ್ತಿದ್ದಾರೆ. ಡಿಜೆ ಟಿಲ್ಲು ಖ್ಯಾತಿಯ ಸಿದ್ದ ಜೊನ್ನಲಗಡ್ಡ ನಾಯಕನಾಗಿರುವ ಸಿನಿಮಾದಲ್ಲಿ ಶ್ರೀನಿಧಿ ಶೆಟ್ಟಿ ಜತೆ ರಾಶಿ ಖನ್ನಾ ನಾಯಕಿಯಾಗಿದ್ದಾರೆ. ಪೀಪಲ್ ಮಿಡಿಯಾ ನಿರ್ಮಿಸುತ್ತಿರುವ ಚಿತ್ರಕ್ಕೆ ತಮನ್ ಸಂಗೀತ ನಿರ್ದೇಶನ ನೀಡಿತ್ತಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.