ಚಾರುಮತಿ ಹಿಂದೆ ನಿಂತವರು!
ನಾಯಕಿ ಪ್ರಧಾನ ಚಿತ್ರಕ್ಕೆ ಇಬ್ಬರು ನಿರ್ದೇಶಕಿಯರು
Team Udayavani, May 16, 2019, 3:00 AM IST
ಕನ್ನಡದಲ್ಲಿ ಮಹಿಳಾ ಪ್ರಧಾನ ಚಿತ್ರಗಳಿಗೇನೂ ಬರವಿಲ್ಲ. ಹಾಗೆಯೇ ಮಹಿಳಾ ನಿರ್ದೇಶಕಿಯರೂ ಇಲ್ಲಿದ್ದಾರೆ. ಈಗ ಹೊಸ ಸುದ್ದಿಯೆಂದರೆ, “ಚಾರುಮತಿ’ ಎಂಬ ಮಹಿಳಾ ಪ್ರಧಾನ ಚಿತ್ರದ ಮೂಲಕ ಇಬ್ಬರು ನಿರ್ದೇಶಕಿಯರಾಗಿ ಗುರುತಿಸಿಕೊಳ್ಳುತ್ತಿದ್ದಾರೆ ಎಂಬುದೇ ಈ ಹೊತ್ತಿನ ವಿಶೇಷ. ಸಾಯಿ ರಶ್ಮಿ ಮತ್ತು ಸಾಯಿ ಪೂರ್ಣ ನಿರ್ದೇಶಕರಾಗಿ ಎಂಟ್ರಿಯಾಗಿದ್ದಾರೆ. ಇದು ಇವರ ಮೊದಲ ಚಿತ್ರ.
ಚಿತ್ರಕ್ಕೆ ಕಥೆ, ಚಿತ್ರಕಥೆ, ಸಾಹಿತ್ಯವನ್ನೂ ಜೊತೆಗೂಡಿ ರಚನೆ ಮಾಡಿದ್ದಾರೆ. ಅಂದಹಾಗೆ, “ಚಾರುಮತಿ’ ಒಂದು ಹಾರರ್ ಕಥಾಹಂದರ ಹೊಂದಿರುವ ಚಿತ್ರ. ನಿರ್ದೇಶಕರಾದ ಸಾಯಿ ರಶ್ಮಿ ಹಾಗು ಸಾಯಿ ಪೂರ್ಣ ಅವರಿಗೆ ಸಿನಿಮಾ ರಂಗ ಹೊಸದಲ್ಲಿ ಹಲವು ವರ್ಷಗಳ ಕಾಲ ಇಲ್ಲಿ ಕೆಲಸ ಮಾಡಿ, ಒಂದಷ್ಟು ಅನುಭವ ಪಡೆದುಕೊಂಡವರು. ಸಿನಿಮಾದಲ್ಲಿರುವ ಹಲವು ವಿಭಾಗಗಳ ಬಗ್ಗೆ ಸಂಪೂರ್ಣ ತಿಳಿದುಕೊಂಡೇ ನಿರ್ದೇಶನಕ್ಕೆ ಇಳಿದಿದ್ದಾರೆ.
ಕಥೆಯ ಬಗ್ಗೆ ಹೇಳುವುದಾದರೆ, ಎರಡು ದಶಕದ ಹಿಂದಿನ ಜೋಡಿ ಕೊಲೆ ಹಾಗು ಈಗಿನ ಕಾಲಘಟ್ಟದ ಘಟನೆ ಚಿತ್ರದ ಹೈಲೈಟ್. ಇಲ್ಲೊಂದು ಲವ್‌ಸ್ಟೋರಿಯೂ ಉಂಟು. ಒಂದೇ ಹಂತದಲ್ಲಿ ಕಾರ್ಕಳ, ದಾವಣಗೆರೆ ಮತ್ತು ಬೆಂಗಳೂರು ಸೇರಿದಂತೆ ಇತರೆ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಚಿಸಿದೆ. ಇನ್ನು, ಕಿರುತೆರೆಯ ಕಿರಣ್‌ಕುಮಾರ್ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಅವರಿಲ್ಲಿ ಒಬ್ಬ ಉದ್ಯಮಿ ಪಾತ್ರ ಮಾಡಿದರೆ, ಮನೆ ಕೆಲಸದವನಾಗಿ ಪ್ರದೀಪ್ ಗೌಡ ಇದ್ದಾರೆ. ಇವರಿಗೆ ಮಾಡೆಲ್ ಅಶ್ವಿನಿ, ನಂದಿತ ನಾಯಕಿಯಾಗಿ ನಟಿಸುತ್ತಿದ್ದಾರೆ. ಶ್ರೀವಿಷ್ಣು, ಚೇತನ್‌ರೈ ಖಳನಟರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರೊಂದಿಗೆ “ಚಾರುಮತಿ’ ಪಾತ್ರ ನಿರ್ವಹಿಸುತ್ತಿರುವ ನಟಿಯ ಆಯ್ಕೆ ಇನ್ನಷ್ಟೇ ನಡೆಯಬೇಕಿದ್ದು, ಇಷ್ಟರಲ್ಲೇ ವಿವರ ಕೊಡುವುದಾಗಿ ಚಿತ್ರತಂಡ ಹೇಳಿದೆ. ಚಿತ್ರಕ್ಕೆ ಶಿವಸತ್ಯ ಸಂಗೀತವಿದೆ.
ಅವರಿಲ್ಲಿ ನಾಲ್ಕು ಹಾಡುಗಳಿಗೆ ರಾಗ ಸಂಯೋಜಿಸುತ್ತಿದ್ದಾರೆ. ಶೇಖರ್ ಛಾಯಾಗ್ರಹಣವಿದೆ. ಮುತ್ತುರಾಜ್ ಸಂಕಲನ ಮಾಡುತ್ತಿದ್ದಾರೆ. ಇತ್ತೀಚೆಗೆ “ಚಾರುಮತಿ’ ಚಿತ್ರದ ಮುಹೂರ್ತ ನೆರವೇರಿದೆ. ಅಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ.ಚಿನ್ನೆಗೌಡ ಕ್ಲಾಪ್ ಮಾಡಿ ಶುಭಹಾರೈಸಿದ್ದಾರೆ. ನಿರ್ದೇಶಕ ಸಾಯಿ ಪ್ರಕಾಶ್ ಕೂಡ ದೀಪ ಬೆಳಗಿಸಿ ತಂಡಕ್ಕೆ ಶುಭಕೋರಿದ್ದಾರೆ. ಈ ವೇಳೆ ಗೀತರಚನೆಕಾರ ವಿ.ನಾಗೇಂದ್ರಪ್ರಸಾದ್, ಗಿರಿಜಾಲೋಕೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.