ಒತ್ತಡಕ್ಕೆ ಮಣಿದ ರಾಜ್ಯಸರ್ಕಾರ: ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಅವಕಾಶ ನೀಡಲು ಮಾರ್ಗಸೂಚಿ
Team Udayavani, Feb 3, 2021, 6:16 PM IST
ಬೆಂಗಳೂರು: ಕನ್ನಡ ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ನೆರವಾಗುವಂತಹ ಮಾರ್ಗಸೂಚಿ ಸಿದ್ದಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದೆ.
“ಮಾರ್ಕೆಟ್ ನಲ್ಲಿ ಗಿಜಿ ಗಿಜಿ ಜನ, ಬಸ್ ನಲ್ಲೂ ಫುಲ್ ರಶ್, ಚಿತ್ರಮಂದಿರಕ್ಕೆ ಮಾತ್ರ ಏಕೆ 50% ನಿರ್ಬಂಧ?” ಎಂಬ ಒಕ್ಕಣೆಯಲ್ಲಿ “ಉದಯವಾಣಿ” ಇಂದು ಅಭಿಯಾನ ಆರಂಭಿಸಿತ್ತು. ನಟ ಧ್ರುವ ಸರ್ಜಾ ಅವರು ಇದೇ ಪೋಸ್ಟರ್ ನ್ನು ಟ್ವೀಟ್ ಮಾಡಿದ್ದರು. ಇದಾದ ಬಳಿಕ ಚಿತ್ರರಂಗದ ಹಲವರು ಚಿತ್ರ ಮಂದಿರದಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡಲು ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರಕ್ಕೆ ಒತ್ತಾಯ ನಡೆಸಿದ್ದರು. ಇದೀಗ ಸರ್ಕಾರ ಒತ್ತಡಕ್ಕೆ ಮಣಿದಿದ್ದು ಹೊಸ ಮಾರ್ಗಸೂಚಿ ರಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾರ್ಗಸೂಚಿ ಬದಲಾಯಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜೊತೆಗೆ ಮುಂಜಾಗೃತ ಕ್ರಮಗಳ ಬಗ್ಗೆ ಕ್ರಮವಹಿಸುವಂತೆ ತಿಳಿಸಲಾಗಿದೆ. ನಾಳೆಯೇ (ಫೆ.4) ರಾಜ್ಯಸರ್ಕಾರದಿಂದ ಹೊಸ ಮಾರ್ಗಸೂಚಿ ಹೊರಡಿಸಲಾಗುವುದು ಎಂದರು.
ಇದನ್ನೂ ಓದಿ: ಚಿತ್ರೋದ್ಯಮಕ್ಕೆ ಯಾಕೆ ನಿರ್ಬಂಧ? ಸರ್ಕಾರವನ್ನು ಪ್ರಶ್ನಿಸಿದ ಸ್ಯಾಂಡಲ್ ವುಡ್ ಸ್ಟಾರ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Premier League: ಡಿಸೆಂಬರ್ 12ರಿಂದ ಬಿಪಿಎಲ್ ಟೂರ್ನಿ
Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
MUST WATCH
ಹೊಸ ಸೇರ್ಪಡೆ
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Paddana-Tulu folk songs: ಮರೆಯಾಗದಿರಲಿ ಪಾಡ್ದನನವೆಂಬ ಸಂಸ್ಕೃತಿಯ ಸಂಪರ್ಕ ಕೊಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.