ಅಗಲಿದ ಅಭಿಮಾನಿ ಕುಟುಂಬಕ್ಕೆ ಸುದೀಪ್ ಸಾಂತ್ವನ
Team Udayavani, Dec 21, 2019, 7:00 AM IST
ಅಪ್ಪಟ ಅಭಿಮಾನಿಯೊಬ್ಬರು ರಸ್ತೆ ಅಪಘಾತದಲ್ಲಿ ನಿಧನರಾದ ಹಿನ್ನೆಲೆಯಲ್ಲಿ ನಟ ಸುದೀಪ್ ಅವರು ಶುಕ್ರವಾರ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಸುದೀಪ್ ಅವರ ಅಭಿಮಾನಿಯಾಗಿದ್ದ ನಂದೀಶ್ ಅವರು ಎರಡು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡು, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಡಿ.19 ರಂದು ನಿಧನರಾಗಿದ್ದರು.
ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನೋವು ಹಂಚಿಕೊಂಡಿದ್ದ ಸುದೀಪ್, ಮೃತ ಅಭಿಮಾನಿ ನಂದೀಶ್ ಅವರ ಮನೆಗೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಇನ್ನು , ಸುದೀಪ್ ಅವರು ಟ್ವಿಟ್ಟರ್‌ನಲ್ಲಿ ನೋವು ಹಂಚಿಕೊಂಡಿದ್ದು, ತಮ್ಮ ಟ್ವಿಟ್ಟರ್ ಡಿಪಿಯನ್ನು ಸಹ ನಂದೀಶ್ ಫೋಟೋ ಹಾಕುವ ಮೂಲಕ ಬದಲಿಸಿ, ಸಂತಾಪ ಸೂಚಿಸಿದ್ದಾರೆ.
Unable to stil accept tat my dear dear brother #Nandish is Nomore. Been with us for years.
U wil be missed my brother. Truly an irreplaceable loss.
My condolences to his family and all my friends to whom he meant everything.#RIPNandish. pic.twitter.com/WeEFrLTPdk— Kichcha Sudeepa (@KicchaSudeep) December 19, 2019
ಹಾಗೆಯೇ “ನನ್ನ ಸಹೋದರ ಸ್ಥಾನದಲ್ಲಿದ್ದ ನಂದೀಶ್ ಅವರ ಸಾವಿನ ಸುದ್ದಿ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ನಮ್ಮೊಂದಿಗೆ ಇದ್ದರು. ತುಂಬ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಇದು ತುಂಬಲಾರದ ನಷ್ಟ. ನಿಮ್ಮ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಕುಟುಂಬಕ್ಕೆ ನೀಡಲಿ’ ಎಂದು ಬರೆದುಕೊಂಡಿದ್ದಾರೆ.
— Kichcha Sudeepa (@KicchaSudeep) December 19, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.