8 ಭಾಷೆಗಳಲ್ಲಿ ಸುದೀಪ್ “ಪೈಲ್ವಾನ್’
Team Udayavani, Nov 13, 2018, 2:27 PM IST
ರಾಕಿಂಗ್ ಸ್ಟಾರ್ ಯಶ್ ಅಭಿನಯದ “ಕೆಜಿಎಫ್’ ಚಿತ್ರದ ಟ್ರೈಲರ್ ಪಂಚ ಭಾಷೆಗಳಲ್ಲಿ ಅಬ್ಬರಿಸುತ್ತಿರುವಂತೆಯೇ ಇತ್ತ ನಟ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಪೈಲ್ವಾನ್’ ಚಿತ್ರವನ್ನು ಕೂಡ 8 ಭಾಷೆಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ “ಪೈಲ್ವಾನ್’ ಚಿತ್ರದ ಚಿತ್ರೀಕರಣ ಹೈದರಾಬಾದ್ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಭರದಿಂದ ಸಾಗುತ್ತಿದ್ದು, ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಪಂಜಾಬಿ, ಭೋಜ್ಪುರಿ ಹಾಗೂ ಬಂಗಾಳಿ ಭಾಷೆಗಳಲ್ಲಿ “ಪೈಲ್ವಾನ್’ ಬಿಡುಗಡೆಯಾಗಲಿದೆ.
ಸ್ಯಾಂಡಲ್ವುಡ್ನ “ಕೆಜಿಎಫ್’ ಚಿತ್ರಕ್ಕೆ ಇತರೆ ಚಿತ್ರರಂಗಗಳಲ್ಲೂ ಸಿಕ್ಕಾಪಟ್ಟೆ ಬೆಂಬಲ, ಬೇಡಿಕೆ ಸಿಕ್ಕಿದ್ದೇ, “ಪೈಲ್ವಾನ್’ ಚಿತ್ರತಂಡ ಈ ನಿರ್ಧಾರಕ್ಕೆ ಬರಲು ಕಾರಣವೆಂದು ಹೇಳಲಾಗುತ್ತಿದೆ. ಸದ್ಯ ಚಿತ್ರದ ಡಬ್ಬಿಂಗ್ ಹಕ್ಕು ಖರೀದಿಗೂ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆಯಂತೆ. ಇನ್ನು “ಪೈಲ್ವಾನ್’ ಚಿತ್ರವು ಬಾಕ್ಸಿಂಗ್ ಮತ್ತು ಕುಸ್ತಿ ಕುರಿತಾದ ಚಿತ್ರವಾಗಿದ್ದು, ಈ ಹಿಂದೆ ಚಿತ್ರದ ಮೊದಲ ಲುಕ್ ಸಖತ್ ವೈರಲ್ ಆಗಿತ್ತು.
ಅಲ್ಲದೇ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದ್ದು, ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ನಟಿಸುತ್ತಿದ್ದಾರೆ. ಚಿತ್ರದಲ್ಲಿ ಸುದೀಪ ಎದುರಿಗೆ ನಾಯಕಿಯಾಗಿ ಮುಂಬೈ ಮೂಲದ ಆಕಾಂಕ್ಷಾ ಸಿಂಗ್ ತೆರೆ ಹಂಚಿಕೊಳ್ಳುತ್ತಿದ್ದು, ಕಬೀರ್ ಸಿಂಗ್ ದುಹಾನ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅಲ್ಲದೇ ಆರ್.ಆರ್.ಆರ್. ಮೋಷನ್ ಪಿಕ್ಚರ್ ಬ್ಯಾನರ್‌ನಡಿ ಸ್ವಪ್ನ ಕೃಷ್ಣ ಮತ್ತು ಕೃಷ್ಣ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ನಿರ್ದೇಶನದ ಜೊತೆಗೆ ಕಥೆ ಹಾಗೂ ಚಿತ್ರಕಥೆಯನ್ನು ಕೃಷ್ಣ ರಚಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದರೆ, ಕರುಣಾಕರನ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ಸಾಧುಕೋಕಿಲ, ಚಿಕ್ಕಣ್ಣ ಸೇರಿದಂತೆ ಅನೇಕರ ತಾರಾಬಳಗವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.