‘ಹೆಬ್ಬುಲಿ’ ಘರ್ಜನೆ:ಭರ್ಜರಿ ರೆಸ್ಪಾನ್ಸ್,ಫ್ಯಾನ್ಸ್ಗೆ ಲಾಠಿ ರುಚಿ !
Team Udayavani, Feb 23, 2017, 10:14 AM IST
ಬೆಂಗಳೂರು : ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ “ಹೆಬ್ಬುಲಿ’ ಚಿತ್ರ ಅಂದರೆ ಇಂದು ಗುರುವಾರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು ಸಿನಿ ಪ್ರಿಯರಿಂದ ನಿರೀಕ್ಷೆಯಂತೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಎಲ್ಲೆಡೆ ಚಿತ್ರಮಂದಿರಗಳ ಎದುರು ಉದ್ದನೆಯ ಸಾಲುಗಳು ಕಂಡು ಬಂದಿವೆ.
ಕನ್ನಡ ಚಿತ್ರರಂಗದ ಇದುವರೆಗಿದ ದೊಡ್ಡ ದಾಖಲೆ ಎಂಬಂತೆ ಹೆಬ್ಬುಲಿ’ ಚಿತ್ರವು ರಾಜ್ಯಾದ್ಯಂತ ಬರೋಬ್ಬರಿ 435 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.
ಬೆಂಗಳೂರು ಸೇರಿದಂತೆ ಕೆಲವೆಡೆ ನಸುಕಿನ ವೇಳೆಯ ಚಿತ್ರವನ್ನು ಪ್ರದರ್ಶಿಸಲಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.
ದಾವಣಗೆರೆಯಲ್ಲಿ ಚಿತ್ರಮಂದಿರದ ಎದುರಿದ್ದ ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಬಗ್ಗೆ ವರದಿಯಾಗಿದೆ.
ಹೆಚ್ಚಿನ ಕಡೆ ಚಿತ್ರ 10 ಗಂಟೆಗೆ ಆರಂಭವಾಗಿದ್ದು 7 ಗಂಟೆಯಿಂದ ಚಿತ್ರವನ್ನು ನೋಡಲು ಕಾತರರಾಗಿದ್ದ ಸುದೀಪ್ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಸರತಿಯ ಸಾಲುಗಳಲ್ಲಿ ನಿಂತಿರುವ ದೃಶ್ಯ ಕಂಡು ಬಂದಿದೆ.
ಕೆಂಪೇಗೌಡ ರಸ್ತೆಯಲ್ಲಿರುವ ಸಂತೋಷ್ ಚಿತ್ರಮಂದಿರದಲ್ಲಿ ಸುದೀಪ್ ಅವರು ಅಭಿಮಾನಿಗಳೊಂದಿಗೆ ಚಿತ್ರ ವೀಕ್ಷಿಸಿ ಸಂಭ್ರಮಿಸಿದರು.
ಗೌಡನಪಾಳ್ಯ ಶ್ರೀನಿವಾಸ ಎಂಬ ಚಿತ್ರಮಂದಿರದಲ್ಲಿ ಸುದೀಪ್ ಅಭಿಮಾನಿಯೊಬ್ಬರು ಬೆಳಿಗ್ಗೆ ಆರು ಗಂಟೆಯ ಪ್ರದರ್ಶನಕ್ಕೆ 650 ಟಿಕೆಟುಗಳನ್ನು ಖರೀದಿಸಿದ್ದಾರೆ ಎಂದು ವರದಿಯಾಗಿದೆ. ಇನ್ನು ಬುಕ್ಮೈಶೋನಲ್ಲಿ ಗುರುವಾರದ ಹಲವು ಪ್ರದರ್ಶನಗಳು ಬುಕ್ ಆಗಿವೆ.
ಚಿತ್ರ 2 ವಾರಗಳ ಬಳಿಕ ವಿದೇಶದಲ್ಲೂ ತೆರೆ ಕಾಣಲಿದೆ. ಇನ್ನು ಸುದೀಪ್ ಅಭಿಮಾನಿಗಳೊಂದಿಷ್ಟು ಜನ ಸೇರಿಕೊಂಡು, ಚಿತ್ರದ ಕುರಿತಾದ ಮೊಬೈಲ್ ಗೇಮ್ ಶುರು ಮಾಡಿದ್ದಾರೆ. ಈಗಾಗಲೇ ಈ ಗೇಮ್ ಬಿಡುಗಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.