“ಟರ್ಮಿನೇಟರ್’ಗೆ ಸುದೀಪ್ ಸಾಥ್
ಹಾಲಿವುಡ್ ಚಿತ್ರ ಕನ್ನಡಕ್ಕೆ ಡಬ್- ಟ್ರೇಲರ್ ರಿಲೀಸ್ ಮಾಡಿದ ಕಿಚ್ಚ
Team Udayavani, Oct 23, 2019, 5:02 AM IST
ಬಹುಭಾಷೆಯಲ್ಲಿ ಬಿಡುಗಡೆಯಾದ “ಸೈರಾ’ ಹಾಗೂ ಬಿಡುಗಡೆಗೆ ಸಿದ್ಧವಾಗಿರುವ “ದಬಾಂಗ್-3′ ಚಿತ್ರಗಳ ಮೂಲಕ ಹೆಚ್ಚೆಚ್ಚು ಸುದ್ದಿಯಾದ ನಟ ಸುದೀಪ್, ಈ ಬಾರಿ ಹಾಲಿವುಡ್‌ನ ಬಹುನಿರೀಕ್ಷಿತ ಚಿತ್ರವೊಂದರ ಮೂಲಕ ಸುದ್ದಿಯಲ್ಲಿದ್ದಾರೆ. ಅದು “ಟರ್ಮಿನೇಟರ್ -ಡಾರ್ಕ್ ಫೇಟ್’. ಹಾಲಿವುಡ್‌ನಲ್ಲಿ “ಟರ್ಮಿನೇಟರ್’ ಸಿನಿಮಾ ಸೀರಿಸ್‌ನಲ್ಲಿ ಬರುತ್ತಿದ್ದು, ದೊಡ್ಡ ಅಭಿಮಾನಿ ವರ್ಗವನ್ನು ಹೊಂದಿದೆ. ನಟ ಅರ್ನಾಲ್ಡ್ ಅವರ ಆ್ಯಕ್ಷನ್‌ಗೂ ಸಿನಿಪ್ರಿಯರು ಫಿದಾ ಆಗಿದ್ದಾರೆ.
ಈಗ “ಟರ್ಮಿನೇಟರ್ -ಡಾರ್ಕ್ ಫೇಟ್’ ಬಿಡುಗಡೆಗೆ ರೆಡಿಯಾಗಿದ್ದು, ನವೆಂಬರ್ 1ಕ್ಕೆ ತೆರೆಕಾಣುತ್ತಿದೆ. ಈಗ ಈ ಚಿತ್ರಕ್ಕೆ ಸುದೀಪ್ ಸಾಥ್ ನೀಡಿದ್ದಾರೆ. ಅದು ಹೇಗೆ ಅಂತೀರಾ, ಆ ಚಿತ್ರದ ಕನ್ನಡ ವರ್ಶನ್ ಟ್ರೇಲರ್ ಅನ್ನು ಸುದೀಪ್ ಬಿಡುಗಡೆ ಮಾಡಿದ್ದಾರೆ. ಹೌದು, “ಟರ್ಮಿನೇಟರ್ -ಡಾರ್ಕ್ ಫೇಟ್’ ಕೂಡಾ ಕನ್ನಡದಲ್ಲಿ ಡಬ್ ಆಗಿ ಬಿಡುಗಡೆಯಾಗುತ್ತಿದೆ. ಈ ಟ್ರೇಲರ್ ಅನ್ನು ಸುದೀಪ್ ಬಿಡುಗಡೆ ಮಾಡಿ, ಆ ಬಗ್ಗೆ ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ.
Here is the 30 secs kannada trailer of #TerminatorDarkFate.
1.30 min trailer,,, soon on my youtube channel.
Best wshs ? pic.twitter.com/4r5T3ubuEd— Kichcha Sudeepa (@KicchaSudeep) October 22, 2019
“ಅರ್ನಾಲ್ಡ್ ದೊಡ್ಡ ಆಕ್ಷನ್ ಹೀರೋಗಳಲ್ಲಿ ಒಬ್ಬರು ಮತ್ತು ನಾನು ಅವರ ಅಭಿಮಾನಿ ಕೂಡ ಹೌದು. ಟರ್ಮಿನೇಟರ್ ಫ್ರ್ಯಾಂಚೈಸ್ ನನ್ನಲ್ಲಿರುವ ಅಭಿಮಾನಿಯನ್ನು ರೋಮಾಂಚನಗೊಳಿಸಿದೆ. ಫಾಕ್ಸ್ ಸ್ಟುಡಿಯೋಸ್‌ಗಾಗಿ ಕನ್ನಡ ಟ್ರೈಲರ್ ಅನ್ನು ಬಿಡುಗಡೆ ಮಾಡಲು ನನಗೆ ಸಂತೋಷವಾಗಿದೆ’ ಎಂದು ಬರೆದುಕೊಂಡಿದ್ದಾರೆ. ಅಂದಹಾಗೆ, ಈಗಾಗಲೇ “ಟರ್ಮಿನೇಟರ್’ ಐದು ಭಾಗ ಬಂದಿದ್ದು, ಇದು “ಟರ್ಮಿನೇಟರ್- ಡಾರ್ಕ್ ಫೇಟ್’ ಆರನೇ ಭಾಗವಾಗಿದೆ.
ಅರ್ನಾಲ್ಡ್ ದೊಡ್ಡ ಆಕ್ಷನ್ ಹೀರೋಗಳಲ್ಲಿ ಒಬ್ಬರು ಮತ್ತು ನಾನು ಅವರ ಅಭಿಮಾನಿಕೂಡ ಹೌದು. ಟರ್ಮಿನೇಟರ್ ಫ್ರ್ಯಾಂಚೈಸ್ ನನ್ನಲ್ಲಿರುವ ಅಭಿಮಾನಿಯನ್ನು ರೋಮಾಂಚನಗೊಳಿಸಿದೆ. ಫಾಕ್ಸ್ಸ್ಟೂಡಿಯಸ್ಗಾಗಿ ಕನ್ನಡ ಟ್ರೈಲರ್ ಅನ್ನು ಬಿಡುಗಡೆ ಮಾಡಲು ನನಗೆ ಸಂತೋಷವಾಗಿದೆ.#TerminatorDarkFate@FoxStudiosIndia @Schwarzenegger pic.twitter.com/BksUDtbmV3
— Kichcha Sudeepa (@KicchaSudeep) October 22, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
Chowkidar Movie: ಶೂಟಿಂಗ್ ಮುಗಿಸಿದ ಚೌಕಿದಾರ್
KD Movie: ಪ್ರೇಮ್ ಕೆಡಿಗೆ ಅಜಯ್ ದೇವಗನ್ ಸಾಥ್; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.