ನಾಡ ಹಬ್ಬಕ್ಕೆ ‘ಕೋಟಿಗೊಬ್ಬ’ನ ಆಗಮನ
Team Udayavani, Sep 26, 2021, 7:34 PM IST
ಬೆಂಗಳೂರು: ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾ ಬಿಡುಗಡೆಯ ದಿನಾಂಕವನ್ನ ಚಿತ್ರತಂಡ ಅನೌನ್ಸ್ ಮಾಡಿದೆ. ಚಿತ್ರ ಇದೇ ಅಕ್ಟೋಬರ್ 14ರಂದು ಬೆಳ್ಳಿ ಪರದೆಗೆ ಎಂಟ್ರಿ ಕೊಡಲಿದೆ.
ಇಂದು ಸಂಜೆ ಟ್ವಿಟ್ ಮಾಡುವ ಮೂಲಕ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ನಾಡಹಬ್ಬ ದಸರಾ ನಿಮಿತ್ತ ಚಿತ್ರಮಂದಿರಗಳಲ್ಲಿ ಕೋಟಿಗೊಬ್ಬ 3 ಸಿನಿಮಾ ಬಿಡುಗಡೆಯಾಗಲಿದೆ.
ಕೋಟಿಗೊಬ್ಬ-2 ಚಿತ್ರದಲ್ಲಿ ಸತ್ಯ ಹಾಗೂ ಶಿವ ಪಾತ್ರದಲ್ಲಿ ಸುದೀಪ್ ಅವರನ್ನು ಕಣ್ತುಂಬಿಕೊಂಡಿದ್ದ ಅಭಿಮಾನಿಗಳು ಕೋಟಿಗೊಬ್ಬ 3 ಮೇಲೆ ಭಾರೀ ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ. ರಿಲೀಸ್ ಡೇಟ್ ಕೇಳುತ್ತಿದ್ದಂತೆ ಪೈಲ್ವಾನ್ ನ ಅಭಿಮಾನಿಗಳ ಬಳಗ ಫುಲ್ ಖುಷಿಯಾಗಿದೆ.
Suppa news…
Best wshs to allllllllll ..
?? https://t.co/D8eRUqFyqd— Kichcha Sudeepa (@KicchaSudeep) September 26, 2021
ಇನ್ನು ಶಿವ ಕಾರ್ತಿಕ್ ಆ್ಯಕ್ಷನ್ ಕಟ್ ಹೇಳಿರುವ ಕೋಟಿಗೊಬ್ಬ-3 ಸಿನಿಮಾದಲ್ಲಿ ಸುದೀಪ್ ಗೆ ನಾಯಕಿಯಾಗಿ ಮಡೋನಾ ಸೆಬಾಸ್ಟಿಯನ್ ನಟಿಸಿದ್ದಾರೆ. ಶ್ರದ್ಧಾ ದಾಸ್, ಅಫ್ತಾಬ್ ಶಿವದಾಸನಿ, ರವಿ ಶಂಕರ್, ಆಶಿಕಾ ರಂಗನಾಥ್ ಸೇರಿದಂತೆ ದೊಡ್ಡ ತಾರಾ ಬಳಗವನ್ನು ಹೊಂದಿದೆ. ಬಾಲಿವುಡ್ ನಟ ಅಫ್ತಾಬ್ ಶಿವದಾಸನಿ ಮೊದಲ ಬಾರಿಗೆ ಕನ್ನಡಕ್ಕೆ ಬಂದಿದ್ದಾರೆ. ಶಿವದಾಸನಿ ಪೊಲೀಸ್ ಪಾತ್ರದಲ್ಲಿ ಮಿಂಚಿದ್ದಾರೆ. ಚಿತ್ರಕ್ಕೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತವಿದೆ.
ಇನ್ನು ಅಕ್ಟೋಬರ್ 14 ರಂದು ಕನ್ನಡದ ಮತ್ತೊಂದು ಸಿನಿಮಾ ಬಿಡುಗಡೆಯಾಗುತ್ತಿದೆ. ದುನಿಯಾ ವಿಜಯ್ ಅವರು ನಿರ್ದೇಶನ ಮಾಡಿ ಅಭಿನಯಿಸಿರುವ ಸಲಗ ಸಿನಿಮಾ ಕೂಡ ದಸರಾ ಹಬ್ಬಕ್ಕೆ ರಿಲೀಸ್ ಆಗುತ್ತಿದೆ. ಇಬ್ಬರು ಸ್ಟಾರ್ ಸಿನಿಮಾ ಒಂದೇ ದಿನ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಿಗೆ ಖುಷಿ ಸಂಗತಿಯಾದರೂ ಕೂಡ ಚಿತ್ರಮಂದಿರಗಳ ಕೊರತೆ ಎದುರಾಗಬಹುದು ಎನ್ನುವ ಆತಂಕ ಶುರುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.