ಸುದೀಪ್ ಹೊಸ ಚಿತ್ರ “ಬಿಲ್ಲ ರಂಗ ಬಾಷ’
Team Udayavani, Dec 22, 2018, 11:25 AM IST
ನಟ ಸುದೀಪ್ ಮತ್ತು “ರಂಗಿತರಂಗ’ ಖ್ಯಾತಿಯ ಅನೂಪ್ ಭಂಡಾರಿ ಆ್ಯಕ್ಷನ್-ಅಡ್ವೆಂಚರ್ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ ಎಂಬ ಸುದ್ದಿ ಕೆಲ ದಿನಗಳ ಹಿಂದಷ್ಟೇ ಹೊರಬಿದ್ದಿತ್ತು. ಈಗ ಈ ಹೊಸಚಿತ್ರಕ್ಕೆ “ಬಿಲ್ಲ ರಂಗ ಬಾಷ’ ಎಂದು ಹೆಸರಿಡಲಾಗಿದ್ದು, ಸುದೀಪ್ ತಮ್ಮ ಟ್ವಿಟ್ಟರ್‌ನಲ್ಲಿ ಈ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.
ಇನ್ನು ಸಿನಿಮಾದ ಟೈಟಲ್ ಪೋಸ್ಟರ್ ನೋಡಿದರೆ, ಪಕ್ಕಾ ಔಟ್ ಆ್ಯಂಡ್ ಔಟ್ ಮಾಸ್ ಎಂಟರ್‌ಟೈನ್ಮೆಂಟ್ ಸಿನಿಮಾದಂತೆ ಕಾಣುತ್ತಿದೆ. ಇನ್ನು ಈ ಚಿತ್ರದಲ್ಲಿ ನಿರ್ದೇಶಕ ಅನೂಪ್ ಭಂಡಾರಿ, ಕ್ರಿ.ಶ 2209ರಲ್ಲಿದ್ದ ರಾಜನೊಬ್ಬನ ಕಥೆಯನ್ನ ಹೇಳುವ ಸುಳಿವನ್ನು ಬಿಟ್ಟುಕೊಟ್ಟಿರುವುದರಿಂದ, ಸುದೀಪ್ ಏನಾದ್ರೂ ರಾಜನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಾರಾ? ಎಂಬ ಕುತೂಹಲ ಕೂಡ ಕಿಚ್ಚನ ಅಭಿಮಾನಿಗಳಲ್ಲಿ ಮನೆ ಮಾಡಿದೆ.
ಅಂದಹಾಗೆ, ಸುಮಾರು ಹದಿನೆಂಟು ವರ್ಷಗಳ ಹಿಂದೆಯೇ ಅನೂಪ್ ಭಂಡಾರಿ ಈ ಕಥೆಯನ್ನು ಮಾಡಿಕೊಂಡಿದ್ದರಂತೆ. “ಸುಪ್ರಿಯಾನ್ವಿ ಪ್ರೊಡಕ್ಷನ್ಸ್’ ಬ್ಯಾನರ್‌ನಲ್ಲಿ ಸುದೀಪ್ ಪತ್ನಿ ಪ್ರಿಯಾ ಸುದೀಪ್ “ಬಿಲ್ಲ ರಂಗ ಬಾಷ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿದ್ದು, ಚಿತ್ರರಂಗದ ಮೂಲಗಳ ಪ್ರಕಾರ ಮುಂಬರುವ ಸಂಕ್ರಾಂತಿಯ ಬಳಿಕ ಚಿತ್ರ ಮುಹೂರ್ತ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.